ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಾಜೀನಾಮೆಗೆ ಆಗ್ರಹ
Team Udayavani, Nov 15, 2017, 12:17 PM IST
ಮೈಸೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ವಿ.ವೇಣುಗೋಪಾಲ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಇದೀಗ ತಾವೇ ಅತ್ಯಾಚಾರದ ಆರೋಪಕ್ಕೆ ಸಿಲುಕಿದ್ದಾರೆ. ಹೀಗಿದ್ದರೂ ಸಚ್ಚಾರಿತ್ರ್ಯ, ನೈತಿಕತೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಪಕ್ಷದ ಮುಖಂಡರ ಬಗ್ಗೆ ಮೌನವಹಿಸಿರುವುದು ನಾಚಿಕೆಗೇಡಿನ ಸಂಗತಿ. ಹೀಗಾಗಿ ಕಾಂಗ್ರೆಸ್ ಮುಖಂಡರು ಮೊದಲು ಅವರನ್ನು ರಾಜ್ಯದಿಂದ ದೂರವಿಡಬೇಕು ಎಂದು ಆಗ್ರಹಿಸಿದರು.
ಮಹಿಳೆಯರ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾ ಬೀಗುವ ಸಿಎಂ ಸಿದ್ದರಾಮಯ್ಯ, ಇದೀಗ ತಮ್ಮದೇ ಪಕ್ಷದ ಮುಖಂಡರೊಬ್ಬರು ಅತ್ಯಾಚಾರದ ಆರೋಪ ಹೊತ್ತಿದ್ದರು. ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಖಂಡನೀಯ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ವಿ.ವೇಣುಗೋಪಾಲ್, ತಮಗೆ ನೈತಿಕತೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಬಿ.ಎಂ.ನಟರಾಜ್, ವಿಭಾಗೀಯ ಸಹ ಪ್ರಭಾರಿ ಫಣೀಶ್, ಮಾಜಿ ಸಂಘಟನಾ ಕಾರ್ಯದರ್ಶಿ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ಎಚ್.ವಿ.ರಾಜೀವ್, ಸತೀಶ್, ನಂದೀಶ್ ಪ್ರೀತಂ, ಯುವ ಮೋರ್ಚಾ ನಗರಾಧ್ಯಕ್ಷ ಕೆ.ಗೋಕುಲ್ ಗೋವರ್ಧನ್, ಪಾಲಿಕೆ ಸದಸ್ಯ ಮಾ.ವಿ. ರಾಮಪ್ರಸಾದ್, ಮಹಿಳಾ ಮೋರ್ಚಾ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.