BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ
Team Udayavani, Sep 24, 2023, 4:58 PM IST
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಮಾಡಿಕೊಳ್ಳುವುದರಿಂದ ಕಾಂಗ್ರೆಸ್‌ಗೆ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2018ರ ಚುನಾವಣೆಯಲ್ಲಿ ಬಿಜೆಪಿ-ಜಾ.ದಳ ಆಂತರಿಕವಾಗಿ ಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಮತಗಳು ಒಂದಾಗಿ ಕಾಂಗ್ರೆಸ್ ಸೋಲಿಗೆ ಕಾರಣವಾಯಿತು. ಈಗ ಇವರೆರಡೂ ಪಕ್ಷಗಳು ಅಧಿಕೃತವಾಗಿ ಒಂದಾಗುತ್ತಿದ್ದಾರೆ. ಇದರಿಂದಾಗಿ ಯಾವ ತೊಂದರೆ, ಪರಿಣಾಮ ಉಂಟಾಗುವುದಲ್ಲ ಎಂದು ಹೇಳಿದರು.
ಕಾಂಗ್ರೆಸ್ ಕರ್ನಾಟಕದಲ್ಲಿ ಬಲವಾಗಿದೆ. ನಿರೀಕ್ಷೆಯಂತೆ ಮತ್ತಷ್ಟು ಗಟ್ಟಿಯಾಗಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಗತ್ಯ ಖರ್ಚು ತಡೆದು ದಸರಾ ಆಚರಣೆ: ಅನಗತ್ಯವಾದ ಖರ್ಚು ಕಡಿಮೆ ಮಾಡಿ ಹಾಗೂ ಹಣಕಾಸು ಸ್ಥಿತಿಯನ್ನು ನೋಡಿ ಕಾರ್ಯಕ್ರಮಗಳನ್ನು ರೂಪಿಸಿ ಸಾಂಪ್ರದಾಯಿಕ ದಸರಾ ಮಹೋತ್ಸವ ಆಚರಿಸಲಾಗುವುದು ಎಂದು ಅವರು ಹೇಳಿದರು.
ಅದ್ಧೂರಿ ಹಾಗೂ ಸರಳವೂ ಅಲ್ಲದ ರೀತಿಯಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತೇವೆ. ದಸರಾ ಮಹೋತ್ಸವಕ್ಕೆ ತನ್ನದೇ ಚಾರಿತ್ರಿಕ ಹಿನ್ನೆಲೆ, ಚರಿತ್ರೆ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಿಂದ ಈತನಕ ಆಗಿರುವ ಅಭಿವೃದ್ಧಿ, ಸಾಧನೆ ಇರುತ್ತದೆ ಎಂದರು.
ಹಣಕಾಸು ನಿಗದಿ ಮತ್ತು ಕೆಲವು ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಕಾರ್ಯಕ್ರಮ ರೂಪಿಸುತ್ತೇವೆ. ಅನಗತ್ಯ ಕಡಿವಾಣ ಹಾಕಿಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದ್ದೂರಿ ದಸರಾ ಮಾಡೋಣವೆಂದು ಹೇಳಿದ್ದರು. ಆದರೆ, ಈಗ 120 ವರ್ಷಗಳ ನಂತರದಲ್ಲಿ ಬರಗಾಲ ಕಾಣಿಸಿಕೊಂಡು ರೈತರು ಕಷ್ಟದಲ್ಲಿರುವ ಕಾರಣ ಸಾಂಪ್ರದಾಯಿಕವಾಗಿ ಆಚರಿಸಲು ಹೇಳಿದ್ದಾರೆ. ಪ್ರಾಯೋಜಕರು ಮುಂದೆ ಬಂದರೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ಇಲ್ಲಿಯವರೆಗೆ ಯಾರೂ ಮುಂದೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸತ್ಯಾಂಶ ಮರೆಮಾಚಿ ರಾಜಕೀಯ ಮಾಡಬಾರದು: ಕಾವೇರಿ ನೀರಿನ ವಿಚಾರದಲ್ಲಿ ಸತ್ಯಾಂತ ಮರೆಮಾಚಿ ರಾಜಕೀಯ ಮಾಡಬಾರದು. ಬೆಂಗಳೂರು ಬಂದ್ ಶಾಂತಿಯುತವಾಗಿ ಆಚರಿಸಲು ನಮ್ಮದೇನೂ ತಕರಾರು ಇಲ್ಲ. ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ತೊಂದರೆಯಾಗದಂತೆ ಮಾಡಬೇಕು ಎಂದರು. ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ, ಕಾವೇರಿ ನೀರು ಸಲಹಾ ಸಮಿತಿ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆಮಾಡಿದ್ದೆವು. ನಾವೇನೂ ತಾಂತ್ರಿಕ ತಜ್ಞರಲ್ಲವೆಂದು ಹೇಳಿ ನೀರು ಬಿಡಲು ಹೇಳಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮುಕ್ತ ಮನಸ್ಸಿನಿಂದ ಇರುವ ಕಾರಣ ನಮಗೆ ಅನುಕೂಲ ಆಗಬಹುದು ಎಂದರು.
ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಸಿಗಲಿದೆ. ಇದರಿಂದ ಕುಡಿಯುವ ನೀರು, ವಿದ್ಯುತ್ ಉತ್ಪಾದನೆಗೆ ನೆರವಾಗಲಿದೆ. ಕೋರ್ಟ್ ಯೋಜನೆ ಬಗ್ಗೆ ಒಲವು ತೋರಿದಂತೆ ಕಂಡಿರುವುದರಿಂದ ಕರ್ನಾಟಕಕ್ಕೆ ಅನುಕೂಲವಾಗಲಿದೆ ಎಂದರು.
ರಾಜ್ಯದಲ್ಲಿ ಸರ್ವಪಕ್ಷಗಳ ಸಭೆ ಮಾಡಲಾಗಿದೆ. ಹೊಸದಿಲ್ಲಿಯಲ್ಲಿ ಸಂಸದರು, ಸಚಿವರ ಸಭೆ ಮಾಡಿ ಚರ್ಚಿಸಲಾಗಿದೆ. ಕರ್ನಾಟಕ ಸಂದಿಗ್ದ ಪರಿಸ್ಥಿತಿಯಲ್ಲಿ ಇರುವಾಗ ಅಧಿಕಾರ ಮಾಡಿದವರು ಅರಿಯಬೇಕು. ಸತ್ಯಾಂತ ಮರೆಮಾಚಿ ರಾಜಕೀಯ ಮಾಡಬಾರದು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಆಡಳಿತ ಮಾಡಿದವರು. ಕಾನೂನಾತ್ಮಕ ವಿಚಾರಗಳು ಅವರಿಗೂ ಗೊತ್ತಿದೆ. ಹೀಗಿದ್ದರೂ ರಾಜಕೀಯದ ಮಾತುಗಳನ್ನಾಡುತ್ತಾರೆ ಎಂದು ಕಿಡಿಕಾರಿದರು.
ಸುಪ್ರೀಂ ಕೋರ್ಟ್‌ನಲ್ಲಿ ಸೆ.27ರಂದು ಕಾವೇರಿ ವಿಚಾರ ಮತ್ತೆ ವಿಚಾರಣೆಗೆ ಬರುವುದರಿಂದ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಕಾವೇರಿ ಹೋರಾಟದಿಂದ ಪ್ರವಾಸೋದ್ಯಮದ ಮೇಲೆ ಯಾವ ಕರಿನೆರಳು ಬೀಳುವುದಿಲ್ಲ. ಇನ್ನು ಸಮಯ ಇರುವುದರಿಂದ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.