ಸಂವಿಧಾನ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ
Team Udayavani, May 11, 2018, 2:31 PM IST
ನಂಜನಗೂಡು: ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರದ ಅಂತ್ಯದಲ್ಲಿ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ತೆರೆದ ವಾಹನದಲ್ಲಿ ಗ್ರಾಮಗಳಿಗೆ ತೆರಳಿ ಮತಯಾಚಿಸಿದರು.
ಕ್ಷೇತ್ರ ವ್ಯಾಪ್ತಿಯ ಅಡಕನಹಳ್ಳಿ ಹುಂಡಿ, ಹೆಬ್ಯಾ, ವರಹಳ್ಳಿ, ಚುಂಚನಹಳ್ಳಿ, ಹನುಮನಪುರ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ದೇಶದ ಸಂವಿಧಾನದಿಂದಲೇ ಎಲ್ಲಾ ವರ್ಗದ ಜನತೆಗೂ ಎಲ್ಲಾ ವಿಭಾಗಗಳಲ್ಲೂ ಸಮಾನತೆ ದೊರೆತಿದೆ.
ಆದರೆ ಇಂತಹ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾದರೆ ಮತದಾರರು ಕಾಂಗ್ರೆಸ್‌ನ್ನು ಬೆಂಬಲಿಸಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡಬೇಕು ಎಂದು ಮನವಿ ಮಾಡಿದರು.
ವಿರೋಧ ಪಕ್ಷದವರ ಅಪ ಪ್ರಚಾರಗಳಿಗೆ ಕಿವಿಗೊಡಬೇಡಿ. ಸೋಲುವ ಹತಾಶ ಭಾವನೆಯಲ್ಲಿ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಯನ್ನು ಇಡೀ ರಾಜ್ಯದ ಜನತೆ ಕಂಡಿದ್ದಾರೆ. ಅನುಭವಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಎಪಿಎಂಸಿ ಸದಸ್ಯರಾದ ಸಿದ್ದರಾಮನ ಹುಂಡಿ ಬಸವರಾಜು, ರಂಗಸ್ವಾಮಿ, ಗುರುಸ್ವಾಮಿ, ವರಹಳ್ಳಿ ನಾಗೇಶ್, ವಕೀಲರಾದ ಶಿವಪ್ರಸಾದ್, ಗ್ರಾಪಂ ಅಧ್ಯಕ್ಷರಾದ ಬಿ.ಎಂ.ಮಹೇಶ್ ಕುಮಾರ್, ದಾಸನೂರು ನಾಗೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.