ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೊಳಾಗುತ್ತದೆ: ಭವಿಷ್ಯ ನುಡಿದ ಈಶ್ವರಪ್ಪ
Team Udayavani, Oct 3, 2021, 11:29 AM IST
ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಮುಂಚೆನೇ ಕಾಂಗ್ರೆಸ್ ಎರಡು ಹೊಳಾಗುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಒಂದೂವರೆ ವರ್ಷ ಕಾಯುವ ಅವಶ್ಯಕತೆ ಇಲ್ಲ. ಡಿ.ಕೆ.ಶಿವಕುಮಾರ್ ಗೂ ಅಧಿಕಾರ ಬೇಕು. ಸಿದ್ದರಾಮಯ್ಯರಿಗೂ ಅಧಿಕಾರ ಬೇಕು. ಇದರಿಂದ ಕಾಂಗ್ರೆಸ್ ಎರಡೂ ಹೊಳಾಗುತ್ತದೆ ಎಂದು ಈಶ್ವರಪ್ಪ ಭವಿಷ್ಯ ನುಡಿದರು.
ಸಿದ್ದರಾಮಯ್ಯರಿಗೆ ಹುಚ್ಚು ಕನಸು. ಮುಖ್ಯಮಂತ್ರಿಯಾಗುವುದು ಇರಲಿ, ಮುಂಬರುವ ಚುನಾವಣೆಯಲ್ಲಿ ಗೆಲ್ಲಲಿ. ಕಳೆದ ಚುನಾವಣೆಯಲ್ಲಿ ಜನ ನಿಮ್ಮ ಕೈ ಬಿಟ್ಟಿದ್ಯಾಕೆ? ಚಾಮುಂಡೇಶ್ವರಿಲಿ ಯಾಕೆ ಸೋತಿದ್ದು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಕಾಶ್ಮೀರದಲ್ಲಿ ಒಂದೇ ದಿನ ಮೂರು ಕಡೆ ಉಗ್ರರ ದಾಳಿ: ಸಿಆರ್ ಪಿಎಫ್ ಬಂಕರ್ ಮೇಲೆ ಗ್ರೆನೇಡ್ ದಾಳಿ
ಜಾತಿಗಣತಿ ಗಣತಿ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಂಘಟನೆ ಮಾಡಲು ಅಡ್ಡದಾರಿ ತುಳಿದಿದ್ದಾರೆ. ಸದನದಲ್ಲಿ ಜಾತಿಗಣತಿ ಬಗ್ಗೆ ಯಾಕೆ ಮಾತಾಡ್ಲಿಲ್ಲ. ಸಿದ್ದರಾಮಯ್ಯನವರೇನು ಬಾಯಲ್ಲಿ ಕಡುಬು ಇಟ್ಟುಕೊಂಡಿದ್ದರಾ? ಸದನದಲ್ಲಿ ಜಾತಿಗಣತಿಯ ಧ್ವನಿ ಮಾಡುತ್ತೇವೆ ಅಂದರೆ ಮಾಡಿದ್ದರಾ? ಯಾಕೆ ಜಾತಿಗಣತಿ ಬಗ್ಗೆ ಮಾತನಾಡಲಿಲ್ಲ. ಹಿಂದುಳಿದಿರುವ, ಅಲ್ಪಸಂಖ್ಯಾತರು ನಿಮಗೆ ಹೆಸರಿಗೆ ಮಾತ್ರವೇ? ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಜಾತಿಗಣತಿ ವರದಿ ಸಿದ್ದವಾಗಿದ್ದರೂ ಕುಮಾರಸ್ವಾಮಿ ಮಂಡಿಸಲಿಲಿಲ್ಲ. ಆಗ ನಿಮ್ಮ ಬೆಂಬಲ ವಾಪಸ್ ತೆಗೆಯಬೇಕಿತ್ತು. ಯಾಕೆ ತಗೆದುಕೊಳ್ಳಲಿಲ್ಲ? ಇವರಿಗೆ ಯಾವುದು ಬೇಕಾಗಿಲ್ಲ. ಅಧಿಕಾರವೊಂದೆ ಇವರ ಗುರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ ಮಾಡಿದರು.
ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಅವರಿಗೆ ಹೇಗಾದರೂ ಸರಿ ಸಿಎಂ ಆಗಬೇಕು ಅನ್ನೋ ಹುಚ್ಚು. ಡಿಕೆ ಶಿವಕುಮಾರ್ ಗೆ ಬಿಜೆಪಿಯವರನ್ನು ಹೇಗಾದರೂ ಎಳೆದುಕೊಳ್ಳಬೇಕು ಎನ್ನುವ ಹುಚ್ಚು. ಈ ಎರಡು ಹುಚ್ಚರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಇದಕ್ಕೆ ಬೇರೆ ಏನು ಉತ್ತರವಿಲ್ಲ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.