ಒಂಟಿ ಸಲಗ ದಾಳಿಗೆ ಅರಣ್ಯಾಧಿಕಾರಿ ಮಣಿಕಂಠನ್ ಬಲಿ
Team Udayavani, Mar 4, 2018, 6:00 AM IST
ಮೈಸೂರು: ವಿಶ್ವ ವನ್ಯಜೀವಿ ದಿನಾಚರಣೆಯಂದೇ ಕಾಡಾನೆ ದಾಳಿಗೆ ಹಿರಿಯ ಅರಣ್ಯಾಧಿಕಾರಿಯೊಬ್ಬರು ಬಲಿಯಾಗಿದ್ದಾರೆ.
ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಿರ್ದೇಶಕರಾದ ಐಎಫ್ಎಸ್ ಅಧಿಕಾರಿ ಎಸ್.ಮಣಿಕಂಠನ್ (46) ಕರ್ತವ್ಯ ನಿರತರಾಗಿದ್ದಾಗ ಹಠಾತ್ ಎರಗಿದ ಆನೆ ದಾಳಿಗೆ ಬಲಿಯಾದವರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವಲಯದ ಕಬಿನಿ ಹಿನ್ನೀರು ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಬಿದ್ದು ಕೆಲ ಪ್ರದೇಶ ಸುಟ್ಟು ಹೋಗಿತ್ತು. ಇದರ ತನಿಖೆ ಸಲುವಾಗಿ ಸ್ಥಳ ಪರಿಶೀಲನೆಗೆ ತೆರಳಿದ್ದ ಮಣಿಕಂಠನ್, ಸುಮಾರು 10ಕ್ಕೂ ಹೆಚ್ಚು ಸಿಬ್ಬಂದಿ ಜತೆಗೆ ಕಾಕನಕೋಟೆ ಬೀಟ್ ಸಮೀಪದ ಕಾಟಿ ಕುಂಟೆ ಕೆರೆ ಬಳಿಯ ಕಾಲುದಾರಿಯಲ್ಲಿ ನಡೆದು ಹೋಗುತ್ತಿದ್ದಾಗ ಒಂಟಿ ಸಲಗವೊಂದು ಹಠಾತ್ ದಾಳಿ ಮಾಡಿದೆ.
ಆನೆ ದಾಳಿಯಿಂದ ಕಂಗಾಲಾದ ಸಿಬ್ಬಂದಿ ಓಡತೊಡಗಿದಾಗ ಮಣಿಕಂಠನ್ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಮಣಿಕಂಠನ್ ಅವರ ದೇಹದ ಮೇಲೆ ಒಂಟಿ ಸಲಗ ಕಾಲಿಟ್ಟು ದಂತದಿಂದ ತಿವಿದು ಗಂಭೀರ ಗಾಯಗೊಳಿಸಿದೆ. ಮಣಿಕಂಠನ್ ಆನೆ ದಾಳಿಗೆ ಸಿಲುಕಿದ್ದರಿಂದ ಭಯಭೀತರಾಗಿ ಚೆಲ್ಲಾಪಿಲ್ಲಿಯಾಗಿದ್ದ ಸಿಬ್ಬಂದಿ ಕೂಗಿಕೊಂಡಿದ್ದರಿಂದ ಆನೆ ಅವರನ್ನು ಬಿಟ್ಟು ಓಡಿದೆ. ಬಳಿಕ ಸ್ಥಳಕ್ಕೆ ತೆರಳಿದ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದ ಮಣಿಕಂಠನ್ ಅವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ತರುವ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾರೆ.
ಒಂಟಿ ಸಲಗದ ಹಠಾತ್ ದಾಳಿಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡುವ ವೇಳೆ ಕೆಳಗೆ ಬಿದ್ದು ಹಲವು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೂ ಗಾಯಗಳಾಗಿವೆ. ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಸಂಸದ ಆರ್.ಧ್ರುವನಾರಾಯಣ, ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ ಭೇಟಿ ನೀಡಿದ್ದರು.
ಬಳಿಕ ಮೃತದೇಹವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.
2001ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಎಸ್.ಮಣಿಕಂಠನ್ ಮೂಲತಃ ತಮಿಳುನಾಡಿನವರು. ಕಳೆದ ಎರಡು ವರ್ಷಗಳಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಲಿ ಯೋಜನೆ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಅವರು ಬಳ್ಳಾರಿಯಲ್ಲಿ ಡಿಎಫ್ಒ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಸರ್ಕಾರ ಸಂತಾಪ: ಮಣಿಕಂಠನ್ ನಿಧನಕ್ಕೆ ಸರ್ಕಾರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆರ್.ಎಸ್.ಶಿವಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಮಣಿಕಂಠನ್ ಮೃತದೇಹವನ್ನು ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನದಲ್ಲಿರಿಸಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.