ಮೈಸೂರಲ್ಲಿ ಕೆಳ ಸೇತುವೆ, ಮೇಲ್ಸೇತುವೆಗಳ ನಿರ್ಮಾಣ


Team Udayavani, Feb 11, 2023, 1:23 PM IST

tdy-14

ಮೈಸೂರು: ಮೈಸೂರು ನಗರದಲ್ಲಿ ಎರಡು ಕೆಳ ಸೇತುವೆ (ಅಂಡರ್‌ ಪಾಸ್‌) ಮತ್ತು ಒಂದು ಮೇಲು ಸೇತುವೆ ನಿರ್ಮಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಇದಲ್ಲದೇ, 21 ವರ್ಷಗಳ ನಂತರ ವಿವಿಧ ಕ್ಷೇತ್ರಗಳ ಸಾಧಕರಿಗೆ 188 ನಿವೇಶನಗಳ ಹಂಚಿಕೆ, ರೈತರ ಸಹಭಾಗಿತ್ವದಲ್ಲಿ ಸಾವಿರ ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುವುದು. 195 ಸಿಎ ನಿವೇಶನ ಹಂಚಿಕೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಯಶಸ್ವಿ ಎಸ್‌.ಸೋಮಶೇಖರ್‌ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮೈಸೂರು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೆಳ ಸೇತುವೆ, ಮೇಲು ಸೇತುವೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಣಿಪಾಲ್‌ ಆಸ್ಪತ್ರೆ ಸಮೀಪದಲ್ಲಿ ದಶಪಥ ರಸ್ತೆ ಕೂಡುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೇಲು ಸೇತುವೆ ನಿರ್ಮಿಸುತ್ತಿದೆ. ಜೆ.ಪಿ.ನಗರ ಮತ್ತು ಬೋಗಾದಿ ಜಂಕ್ಷನ್‌ನಲ್ಲಿ ಕೆಳಸೇತುವೆ, ವಿಜಯ ನಗರ 4ನೇ ಹಂತದಲ್ಲಿ ಮೇಲು ಸೇತುವೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಮೈಸೂರು ತಾಲೂಕಿನ ಬೊಮ್ಮೇನಹಳ್ಳಿ, ಕರಕನಹಳ್ಳಿಯಲ್ಲಿ 50:50ರ ಅನುಪಾತದಂತೆ ಸಾವಿರ ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುವುದು. ಅನೇಕ ರೈತರು 250 ಎಕರೆ ಜಮೀನನ್ನು ಕೊಡಲು ಒಪ್ಪಿದ್ದಾರೆ. ಎಕರೆಗೆ 30/40 ಅಳತೆಯ 18 ನಿವೇಶನದಂತೆ ನಾಲ್ಕು ಸಾವಿರ ನಿವೇಶನ ಹಂಚಿಕೆ ಮಾಡಬಹುದು. ಬಡಾವಣೆ ಅಭಿವೃದ್ಧಿ ವೆಚ್ಚವನ್ನು ಪ್ರಾಧಿಕಾರ ಭರಿಸಲಿದೆ. ಎಕರೆಯಲ್ಲಿ 18 ನಿವೇಶನಗಳಾದರೆ 9 ನಿವೇಶನ ರೈತರಿಗೆ ದೊರೆಯಲಿದೆ. ಮಾರುಕಟ್ಟೆಯ ದರದಲ್ಲಿ ಮಾಲೀಕರು ಮಾರಾಟ ಮಾಡಬಹುದು ಎಂದರು.

ಸೆಪ್ಟೆಂಬರ್‌ 2021ರಲ್ಲಿ 312 ಸಿಎ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿತ್ತು. 220 ನಿವೇಶನಗಳಿಗೆ ಅರ್ಜಿ ಬಂದಿದೆ. ಫೆ. 28ರಂದು ನಡೆಯುವ ಮುಡಾ ಸಭೆಯಲ್ಲಿ ಒಪ್ಪಿಗೆ ಪಡೆದು ಹಂಚಿಕೆ ಮಾಡುತ್ತೇವೆ. ಉಳಿಕೆ 92 ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸು ತ್ತೇವೆ. ಮೂರು ವರ್ಷಗಳ ಆಡಿಟ್‌ ವರದಿ ಇರುವ, ಕಟ್ಟಡ ಕಟ್ಟುವ ಸಾಮರ್ಥ್ಯವಿರುವ ಸಂಘ ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು. ಹಂಚ್ಯಾ ಸಾತಗಳ್ಳಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಿ ಸುವ ಪ್ರಸ್ತಾವನೆಗೆ ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆಯಿದೆ ಎಂದರು.

ದೇವನೂರು ಬಡಾವಣೆಯಲ್ಲಿ ಎಚ್‌ ಶ್ರೇಣಿಯ 188 ನಿವೇಶನ ಗುರುತಿಸಲಾಗಿದೆ. ಎಚ್‌ ಶ್ರೇಣಿಯ ನಿವೇಶನ ಕೋರಿ ಸಾಧಕರು ಅರ್ಜಿ ಸಲ್ಲಿಸಬಹುದು. ಕ್ರೀಡಾಪಟುಗಳಿಗೆ ಶೇ. 5, ಕಲೆ, ವಿಜ್ಞಾನ, ಸಾಹಿತ್ಯ, ವೈದ್ಯ, ಆಡಳಿತ, ರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಕ್ರೀಡಾಪಟುಗಳಿಗೆ ಶೇ. 5, ಮಾಜಿ ಸೈನಿಕರು, ಸೈನಿಕ ಸಿಬ್ಬಂದಿಗೆ ಶೇ. 2, ಮುಡಾ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಯೋಧರಿಗೆ ಶೇ. 2, ಕರ್ತವ್ಯ ದಲ್ಲಿದ್ದು ನಿಧನ ಹೊಂದಿದ ರಾಜ್ಯ ಸರ್ಕಾರದ ನೌಕರರ ಅವ ಲಂಬಿತರಿಗೆ ಶೇ. 1 ಮೀಸಲಿಡಲಾಗಿದೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ರುವ ಬ್ಯಾಂಕ್‌ ಆಫ್ ಬರೋಡ ಕಚೇರಿಯಲ್ಲಿ ಅರ್ಜಿ ವಿತರಿಸಲಾಗುವುದು. ಅರ್ಜಿ ಶುಲ್ಕ 500 ರೂ., ನೋಂದಣಿ ಶುಲ್ಕ ಒಂದು ಸಾವಿರ ರೂ. ಪಾವತಿಸಬೇಕು. ನಿವೇಶನದ ಮೊತ್ತ ಶೇ. 10 ಇಎಂಡಿ ಹಣ ವನ್ನು ಅರ್ಜಿಯೊಂದಿಗೆ ಸೇರಿಸಿ ಫೆ. 28ರೊಳಗೆ ಬ್ಯಾಂಕ್‌ ಆಫ್ ಬರೋಡ ಕಚೇರಿಗೆ ಸಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌, ಕಾರ್ಯದರ್ಶಿ ಡಾ. ಎನ್‌ .ಸಿ.ವೆಂಕಟರಾಜು, ಸದಸ್ಯರಾದ ಎಸ್‌ಬಿಎಂ ಮಂಜು, ಲಕ್ಷ್ಮೀದೇವಿ, ನವೀನ್‌ಕುಮಾರ್‌, ಮಾದೇಶ, ಶೇಷಣ್ಣ ಇತರರು ಇದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.