![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 24, 2021, 12:50 PM IST
ಮೈಸೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯಾಗಿರುವ ಮತಾಂತರ ನಿಷೇಧ ಮಸೂದೆಯನ್ನು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ವಿರೋಧಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಶಾಸಕಾಂಗ ಸಮಿತಿ ಮಠಾಧೀಶರನ್ನು ಭೇಟಿ ಮಾಡಿ ಮತಾಂತರ ನಿಷೇಧ ಮಸೂದೆ ಕುರಿತು ಅಭಿ ಪ್ರಾಯ ಸಂಗ್ರಹಿಸಬೇಕು.
ಬಸವೇಶ್ವರರ ಮೂಲ ತತ್ವಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ವಿಧೇಯಕ ತರುವುದರಿಂದ ರಾಜ್ಯ ಅಭಿವೃದ್ಧಿಯಾಗುತ್ತದೆಯೇ? ಜಾರಿಗೆ ತರುವ ಮೊದಲು ಅಭಿಪ್ರಾಯ ಸಂಗ್ರಹಿಸಬೇಕು ಎಂದು ಆಗ್ರಹಿಸಿದರು. ಆರ್‌ಎಸ್‌ಎಸ್ ನಾಯಕರ ಮಕ್ಕಳು ಮುಸ್ಲಿಮರ ಮಕ್ಕಳನ್ನು ಮದುವೆಯಾಗಿದ್ದಾರೆ. ಇವರುಗಳನ್ನು ಜೈಲಿಗೆ ಹಾಕಲು ಸಾಧ್ಯವೇ? ಸಿನಿಮಾ ನಟರು ಬ್ರಾಹ್ಮಣರನ್ನು ಮದುವೆಯಾಗಿದ್ದಾರೆ. ಇವರನ್ನು ಜೈಲಿಗೆ ಹಾಕಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಭಾರತ ಬಹುತ್ವವುಳ್ಳ ದೇಶ. ಅಂಬೇಡ್ಕರ್ ಅವರು ಸಂವಿಧಾನ ನೀಡಿದ್ದಾರೆ. ತಮ್ಮ ಇಷ್ಟ ಬಂದ ಧರ್ಮ, ದೇವರನ್ನು ಪೂಜೆ ಮಾಡಲು ಅವಕಾಶ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುತ್ವದ ಬಗ್ಗೆ ಎಲ್ಲಿಯೂ ಹೇಳಿಲ್ಲ. ಬಸವೇಶ್ವರರು ಕಟ್ಟಿದ ಮಾನವ ಧರ್ಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಒಡೆಯುವ ಕೆಲಸವಾಗಿರುವುದು ವಿಪರ್ಯಾಸ. ಇದನ್ನು ಯಾರೂ ಮೆಚ್ಚುವುದಿಲ್ಲ ಎಂದು ವಿಶ್ವನಾಥ್ ಹೇಳಿದರು. ಬಸವಣ್ಣನವರ ತತ್ವವನ್ನು ಅಳವಡಿಸಿಕೊಂಡಿರುವ ಮಠಾಧೀಶರು ಯಾರೂ ಈ ಮಸೂದೆ ಕುರಿತು ಮಾತನಾಡುತ್ತಿಲ್ಲ. ಸರ್ಕಾರದ ಅನುದಾನ ಬಾಯಿ ಮುಚ್ಚಿಸಿದೆ.
ಇದನ್ನೂ ಓದಿ: ಕುಷ್ಟಗಿ: ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕಾಂಗ್ರೆಸ್ ಸದಸ್ಯರ ಆಕ್ರೋಶ
ಅಹಿಂದ ಮಠಗಳು ಮಾತನಾಡುತ್ತಿಲ್ಲ. ನಿಮ್ಮ ಬಾಯಿ ಕಟ್ಟಿರುವುದು ಯಾರು? ಸಾಹಿತಿಗಳು, ಚಿಂತಕರು ಬಾಯಿ ಬಿಡುತ್ತಿಲ್ಲ. ಅವರು ರಾಜ್ಯೋತ್ಸವ ಪ್ರಶಸ್ತಿಗಷ್ಟೇ ಸೀಮಿತವಾಗಿದ್ದಾರೆ ಎಂದು ವಿಶ್ವನಾಥ್ ಟೀಕಿಸಿದರು. ಬೆಳಗಾವಿಯಲ್ಲಿ ನಡೆದಿರುವ ಎಂಇಎಸ್ ದಾಂಧಲೆ ಬಗ್ಗೆ ಪ್ರಸ್ತಾಪಿಸಿದ ಅವರು, ಬೆಳಗಾವಿ ಜಿಲ್ಲಾ ನಾಯಕರು ಯಾರೂ ಈ ಬಗ್ಗೆ ಮಾತನಾಡುತ್ತಿಲ್ಲ. ಅವರಿಗೆ ಕನ್ನಡಿಗರು ವೋಟು ಹಾಕಿಲ್ಲವೇ? ಮರಾಠಿ ಮತದಾರರೇ ಹೆಚ್ಚಾದರಾ? ಎಂಇಎಸ್ ಅನ್ನು ನಿಷೇಧಿಸಬೇಕು ಎಂದು ವಿಶ್ವ ನಾಥ್ ಒತ್ತಾಯಿಸಿದರು.
ರಂಗಾಯಣದಲ್ಲಿ ತತ್ವ ಸಿದ್ಧಾಂತ ಹೇರಬೇಡಿ
ರಂಗಾಯಣ ವಿವಾದ ಕುರಿತು ಪ್ರಸ್ತಾಪಿಸಿದ ಎಚ್.ವಿಶ್ವನಾಥ್, ತಾವು ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದಾಗ ರಂಗಾಯಣಕ್ಕೆ ರೂಪ ಕೊಟ್ಟಿದ್ದೆ. ರಂಗಾಯಣ ನೋಂದಣಿಯಾಗಿಲ್ಲ ಎಂದು ಬಿ.ವಿ. ಕಾರಂತರು ಹೇಳಿದಾಗ ಅಂದಿನ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರೊಂದಿಗೆ ಮಾತನಾಡಿ ಕೆಲಸ ಮಾಡಿಸಿದೆವು.
ಈವರೆಗೂ ಹತ್ತು ಮಂದಿ ರಂಗಾಯಣ ನಿರ್ದೇಶಕರಾಗಿ ದ್ದಾರೆ. ಯಾರೂ ತತ್ವ , ಸಿದ್ಧಾಂತವನ್ನು ಹೇರಿರಲಿಲ್ಲ. ಅಡ್ಡಂಡ ಸಿ. ಕಾರ್ಯಪ್ಪ ಅವರು ಈಗಿನ ನಿರ್ದೇಶಕರು. ಅವರು ಪದ ಪ್ರಯೋಗ ಮಾಡುವಾಗ ಸಾಮರಸ್ಯದಿಂದ ಮಾಡಬೇಕು. ಈ ಹಿಂದಿನ ನಿರ್ದೇಶಕರು ರಂಗಾಯಣವನ್ನು ಕಾಪಾಡಿಕೊಂಡು ಬಂದಿದ್ದಾರೆ ಎಂದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.