ಸೋಂಕು ಜಯಿಸಿದ್ದ ಮೈಸೂರಿನಲ್ಲಿ ಮತ್ತೆ ಒಂದು ಕೋವಿಡ್ ಪ್ರಕರಣ ಪತ್ತೆ
Team Udayavani, May 18, 2020, 1:58 PM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್-19 ಮಹಾಮಾರಿ ತೊಲಗಿತು ಎಂದು ಜನತೆ ನಿಟ್ಟುಸಿರು ಬಿಡುತ್ತಿರುವಾಗಲೇ ಮೈಸೂರು ಜಿಲ್ಲೆಗೆ ಹೊರರಾಜ್ಯದಿಂದ ಬಂದ ವ್ಯಕ್ತಿಯೋರ್ವರಲ್ಲಿ ಕೋವಿಡ್ ವೈರಸ್ ಸೋಂಕಿರುವುದು ದೃಢಪಟ್ಟಿದೆ.
46 ವರ್ಷದ ಪುರುಷನಲ್ಲಿ ಕೋವಿಡ್-19 ವೈರಸ್ ಸೋಂಕಿರುವುದು ದೃಢಪಟ್ಟಿದ್ದು, ಇವರು ಮಹಾರಾಷ್ಟ್ರದ ಮುಂಬೈನಿಂದ ಬಂದವರಾಗಿದ್ದಾರೆ.
ಕಳೆದ 18ದಿನಗಳಿಂದ ಮೈಸೂರಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳಿರಲಿಲ್ಲ. ಮಾರ್ಚ್ 21ರಂದು ದುಬೈನಿಂದ ಬಂದ ವ್ಯಕ್ತಿಯಿಂದ ಮೈಸೂರಿನಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಜ್ಯುಬಿಲಿಯಂಟ್ ನೌಕರರು, ತಬ್ಲಿಘಿಗಳು ಸೇರಿದಂತೆ ಒಟ್ಟು 90 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. 90ಕ್ಕೆ 90 ಪ್ರಕರಣವೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಇಂದು ಹೊರರಾಜ್ಯದಿಂದ ಬಂದ ವ್ಯಕ್ತಿಯೋರ್ವರಲ್ಲಿ ಕೋವಿಡ್-19 ವೈರಸ್ ಸೋಂಕಿರುವುದು ದೃಢಪಟ್ಟಿದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೋಂಕಿನ ಎರಡನೇ ಹಂತದ ಅಲೆ ಆರಂಭವಾಗಿದ್ದು, ಕೋವಿಡ್ ವೈರಸ್ ಮುಕ್ತವಾಗಿದ್ದ ಮೈಸೂರಿಗೆ ಮತ್ತೆ ಹೆಮ್ಮಾರಿ ಬಂದಿದೆ ಎಂದು ಜನತೆಯನ್ನು ಚಿಂತೆಗೀಡಾಗುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.