ಮೈಸೂರು: ಸತತ 2ನೇ ದಿನವೂ 17 ಸಾವು
Team Udayavani, Sep 19, 2020, 4:08 PM IST
ಮೈಸೂರು: ಜಿಲ್ಲೆಯಲ್ಲಿ ಶುಕ್ರವಾರ 600 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ
ಮೈಸೂರಿನಲ್ಲಿ ಕೋವಿಡ್ ಸೋಂಕಿನ ತೀವ್ರತೆ ತಹಬದಿಗೆ ಬಾರದ ಕಾರಣ ಸಾವಿನ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಸೋಂಕಿಗೆ ತುತ್ತಾಗಿ ನಗರದ ವಿವಿಧ ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17ಮಂದಿ ಸೋಂಕಿತರುಮೃತ ಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ667ಕ್ಕೆ ಏರಿಕೆಯಾಗಿದೆ.
600 ಮಂದಿಗೆ ಸೋಂಕು: ಜಿಲ್ಲಾದ್ಯಂತ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಹೆಚ್ಚಾದಂತೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶುಕ್ರವಾರ ಹೊಸದಾಗಿ 600 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,677ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಸೋಂಕು ಸಮುದಾಯಕ್ಕೆ ವಿಸ್ತರಿಸುತ್ತಿದೆ.
883 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಂಕು ವೇಗವಾಗಿ ಹಬ್ಬಿದಂತೆ, ಸೋಂಕಿಗೆ ತುತ್ತಾಗಿ ಗುಣಮುಖರಾಗುತ್ತಿರು ವವರ ಸಂಖ್ಯೆಯೂ ಹೆಚ್ಚಾಗಿದೆ. ಶುಕ್ರವಾರ ಒಂದೇ ದಿನ ಮನೆ ಹಾಗೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 883 ಮಂದಿ ಗುಣಮುಖರಾಗಿದ್ದಾರೆ.ಈಮೂಲಕ ಜಿಲ್ಲೆಯಲ್ಲಿ 22,414 ಮಂದಿ ಗುಣಮುಖರಾದಂತಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಸದ್ಯ 5,596 ಮಂದಿ ಸಕ್ರಿಯ ಸೋಂಕಿತರಿದ್ದು, ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.