ಕೋವಿಡ್: ಹೆಚ್ಚುವರಿ 25 ತಂಡ ರಚನೆಗೆ ಸೂಚನೆ
Team Udayavani, Sep 30, 2020, 1:39 PM IST
ಮೈಸೂರು: ಜಿಲ್ಲಾಧಿಕಾರಿಯಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ದಸರಾ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.
ಕೋವಿಡ್ ಪರೀಕ್ಷೆಗೆ ಈಗಾಗಲೇ ಜಿಲ್ಲೆಯಲ್ಲಿ 70 ಸ್ಥಾಯಿ ತಂಡಗಳು ಹಾಗೂ 30 ಸಂಚಾರಿ ತಂಡಗಳು ಕೆಲಸ ಮಾಡುತ್ತಿವೆ. ಇನ್ನೂ ಹೆಚ್ಚಿನ ತಂಡಗಳ ನಿಯೋಜನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ಕೋರಿದರು. ಈ ಹಿನ್ನೆಲೆಯಲ್ಲಿ ಈಗಿರುವ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್ ಟೆಕ್ನಿಷಿಯನ್ ಹಾಗೂ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನಿಯೋಜಿಸಿಕೊಳ್ಳಲು ನೂತನ ಜಿಲ್ಲಾಧಿಕಾರಿಗಳು ಅನುಮತಿ ನೀಡಿದರು.
ಕೋವಿಡ್-19 ಮಾದರಿ ಸಂಗ್ರಹಕ್ಕೆ ಬೇಕಾದ ವಿಟಿಎಂ ಉಪಕರಣಗಳು ಆರೋಗ್ಯ ಇಲಾಖೆಯಿಂದ ಬರುವುದು ತಡವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅನುದಾನದಲ್ಲೇ 20 ಸಾವಿರ ವಿಟಿಎಂ ಉಪಕರಣಗಳನ್ನು ಖರೀದಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ತಿಳಿಸಿದರು.
ಕೋವಿಡ್ ನಿಂದಾಗುವ ಸಾವಿನ ಪ್ರಮಾಣ ಕಡಿಮೆ ಮಾಡಲು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ನಿಯಂತ್ರಣಕ್ಕಾಗಿ ನಿಯೋಜಿಸಿರುವ ಎಲ್ಲಾ ನೋಡಲ್ ಅಧಿಕಾರಿಗಳ ಸಭೆಯನ್ನೂ ಆದಷ್ಟು ಬೇಗಕರೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟೇಶ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಶಿವಪ್ರಸಾದ್, ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವಿ ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.