ಅರಣ್ಯ ಸಿಬ್ಬಂದಿಗೆ ಲಸಿಕೆ ನೀಡಿದ್ದಕ್ಕೆ ನೋಟಿಸ್‌ ಜಾರಿಗೊಳಿಸಿದ್ದು ಸರಿನಾ?


Team Udayavani, Jun 1, 2021, 12:40 PM IST

ಅರಣ್ಯ ಸಿಬ್ಬಂದಿಗೆ ಲಸಿಕೆ ನೀಡಿದ್ದಕ್ಕೆ ನೋಟಿಸ್‌ ಜಾರಿಗೊಳಿಸಿದ್ದು ಸರಿನಾ?

ಹುಣಸೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ನೀಡಿರುವ ಕ್ರಮವನ್ನು ಪ್ರಶ್ನಿಸಿ ತಾಲೂಕು ಆರೋಗ್ಯಾಧಿಕಾರಿಗಳಿಗೆ (ಟಿಎಚ್‌ಒ) ಜಿಲ್ಲಾ ಆರೋಗ್ಯಾಧಿಕಾರಿಗಳು ನೋಟಿಸ್‌ ಜಾರಿಗೊಳಿಸಿರುವುದು ಅರಣ್ಯ ಇಲಾಖೆ ಸಿಬ್ಬಂದಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಜಿಲ್ಲೆಯ ಮೂರು ತಾಲೂಕುಗಳ ಆರೋಗ್ಯಾಧಿಕಾರಿಗಳು ಹಾಗೂ ಅರಣ್ಯಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ನೀಡಿರುವುದಕ್ಕೆ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಚ್‌.ಡಿ.ಕೋಟೆ ಮತ್ತು ನಂಜನಗೂಡುತಾಲೂಕುಆರೋಗ್ಯಾಧಿಕಾರಿಗಳಿಗೆ ತಕ್ಷಣವೇ ಸಮಜಾಯಿಷಿ ನೀಡುವಂತೆ ಸೂಚಿಸಿ ಮೇ 28ರಂದು ನೋಟಿಸ್‌ ನೀಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ನೀಡಿರುವುದನ್ನು ಪ್ರಶ್ನಿಸಿ ಜಾರಿಗೊಳಿಸಿರುವ ನೋಟಿಸ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಬಗ್ಗೆಪತ್ರಿಕೆಯೊಂದಿಗೆಮಾತನಾಡಿದನಾಗರಹೊಳೆ ಹುಲಿಯೋಜನೆ ನಿರ್ದೇಶಕ ಡಿ.ಮಹೇಶ್‌ ಕುಮಾರ್‌,”ಕಳೆದಒಂದುವರ್ಷದಿಂದ ಕೋವಿಡ್ ಮೈಸೂರು ಜಿಲ್ಲೆಯಲ್ಲಿ ಹೆಚ್ಚಿದ್ದು, ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆಯೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಡಂಚಿನ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಅರಣ್ಯ ಸಿಬ್ಬಂದಿಗಳನ್ನು ಕೋವಿಡ್ ವಾರಿಯರ್ಸ್ ಗಳೆಂದು ಪರಿಗಣಿಸಿದೆ. ಹೀಗಾಗಿ ಸಿಬ್ಬಂದಿ ಆಯಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ಪಡೆದಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಕಳೆದ 15 ತಿಂಗಳಿನಿಂದ ಅರಣ್ಯ ಸಿಬ್ಬಂದಿಗಳು ಸಂರಕ್ಷಿತಾರಣ್ಯದಲ್ಲಿಅಕ್ರಮ ಪ್ರವೇಶ, ಕಳ್ಳಬೇಟೆ ತಡೆ ಸೇರಿದಂತೆ ಉದ್ಯಾನದಂಚಿನ ಗ್ರಾಮಗಳಲ್ಲಿ ಎದುರಾದ ವನ್ಯಪ್ರಾಣಿ ಮಾನವನ ನಡುವಿನ ಸಂಘರ್ಷ ತಡೆಗಟ್ಟಲು ಕಾಡಂಚಿನ ಜನರೊಂದಿಗೆ ಸೇರಿ ಅವಿರತವಾಗಿ ಶ್ರಮ ಹಾಕುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಸೋಂಕು ತಗುಲಿದಲ್ಲಿ ವನ್ಯಪ್ರಾಣಿಗಳಿಗೂ ಸರಾಗವಾಗಿ ಹರಡಲಿದ್ದು. ಸಿಬ್ಬಂದಿಗೆ ಮೊದಲ ಆದ್ಯತೆಯಾಗಿ ಲಸಿಕೆ ನೀಡಬೇಕಿತ್ತು. ಹೀಗಿರುವ ವೇಳೆಯೇ ಕಾಡಂಚಿನ ತಾಲೂಕುಗಳಆರೋಗ್ಯಾಧಿಕಾರಿಗಳಿಗೆ ಲಸಿಕೆ ನೀಡಿರುವ ಬಗ್ಗೆ ನೋಟಿಸ್‌ ನೀಡಿರುವುದು ಬೇಸರ ಮೂಡಿಸಿದೆ ಎಂದರು.

ಅರ್ಧದಷ್ಟು ಮಂದಿಗೆ ಮಾತ್ರ ಲಸಿಕೆ:

ನಾಗರಹೊಳೆ ಹುಲಿಯೋಜನೆಯ ಹುಣಸೂರು ನಿರ್ದೇಶಕರ ಕಚೇರಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಹಾಗೂಸಿಬ್ಬಂದಿಗಳು ಸೇರಿ 605 ಮಂದಿಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 310 ಮಂದಿ ಮಾತ್ರ ಮೊದಲ ಹಂತದ ಲಸಿಕೆ ಪಡೆದಿದ್ದರೆ, 22 ಮಂದಿಗೆ 2ನೇ ಹಂತದ ಲಸಿಕೆ ಸಿಕ್ಕಿದೆ. ಇನ್ನೂ 292 ಮಂದಿ ಲಸಿಕೆ ಪಡೆಯಬೇಕಿದೆ. ಇವರಲ್ಲಿ ಕೊಡಗು ಜಿಲ್ಲೆ ಹಾಗೂ ಕೇರಳ ಸಂಪರ್ಕ ಕಲ್ಪಿಸುವ ಆನೆಚೌಕೂರು ವಲಯದಲ್ಲಿ 151 ಮಂದಿಯಲ್ಲಿ ಮೂವರು ಮಾತ್ರ ಲಸಿಕೆ ಪಡೆದಿದ್ದಾರೆ. ಅಂತರ ಸಂತೆ ವಲಯದಲ್ಲಿ ಲಸಿಕೆಯನ್ನೇ ಪಡೆದಿಲ್ಲ. ಹುಣಸೂರು ವಲಯದಲ್ಲಿ ಕೆಲವರು ಲಸಿಕೆ ಪಡೆದಿದ್ದರೆ, ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ಅರ್ಧದಷ್ಟು ಮಂದಿ ಮಾತ್ರ ಲಸಿಕೆ ಪಡೆದಿದ್ದು, ಜೀವಭಯದ ನಡುವೆಯೂ ಅರಣ್ಯ ರಕ್ಷಣೆಯಲ್ಲಿ ಮುಂಚೂಣಿಯ ಸಿಬ್ಬಂದಿಗಳಿಗೆ ಲಸಿಕೆ ನೀಡಿರುವಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಿಂದ ಟಿಎಚ್‌ಒಒಗಳಿಗೆ ನೋಟಿಸ್‌ಜಾರಿಗಿಳಿಸಿರುವುದು ಆಕ್ರೋಶ ಮೂಡಿಸಿದೆ.

20 ಅರಣ್ಯ ಸಿಬ್ಬಂದಿಗೆ ಸೋಂಕು: ಕಳೆದ 10 ದಿನಗಳ ಹಿಂದೆ ಹುಲಿ ಪತ್ತೆ ಕಾರ್ಯಾಚರಣೆ ಮತ್ತಿತರ ಕಡೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ವೀರನಹೊಸಹಳ್ಳಿ-4, ಆನೆಚೌಕೂರು-7, ನಾಗರಹೊಳೆ-2, ಅಂತರಸಂತೆ, ಮೇಟಿಕುಪ್ಪೆ ತಲಾ ಒಂದು, ತಿತಿಮತಿ ಹಾಗೂ ಹ್ಯಾಂಡ್‌ ಪೋಸ್ಟ್‌ನ ಎಸ್‌ಟಿಪಿಎಫ್‌ನ 7 ಸೇರಿದಂತೆ 20 ಮಂದಿಗೆ ಸೋಂಕು ತಗುಲಿದೆ.

 

-ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.