ವಿದ್ಯೆಯೊಂದಿಗೆ ಮಾನವೀಯತೆ ಬೆಳೆಸಿಕೊಳ್ಳಿ
Team Udayavani, Jan 2, 2020, 3:00 AM IST
ಮೈಸೂರು: ಯುವಜನರಿಗೆ ಜಲಪಾತದಷ್ಟು ರಭಸ, ಸಿಡಿಲಿನಷ್ಟು ಶಕ್ತಿ ಇರುತ್ತದೆ. ಅದನ್ನು ಸೂಕ್ತ ರೀತಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ ಹೇಳಿದರು. ಮಹಾರಾಣಿ ಕಲಾ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಸಂಘಗಳ ಒಕ್ಕೂಟ, ನೆಹರು ಯುವ ಕೇಂದ್ರ ಹಾಗೂ ಮಹಾರಾಣಿ ಕಲಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾನವೀಯತೆ ಬೆಳೆಸಿಕೊಳ್ಳಿ: ಯುವಜನರಿಗೆ ದೈಹಿಕ ಹಾಗೂ ಮಾನಸಿಕ ಶಕ್ತಿ ಸಾಕಷ್ಟಿರುತ್ತದೆ. ಅದನ್ನು ಉತ್ತಮ ಕಾರ್ಯಕ್ಕೆ ಬಳಸಿಕೊಂಡು ಸಾಧನೆ ಮಾಡಬೇಕು. ತಮಗಿರುವ ಅಪಾರ ಶಕ್ತಿಯೊಂದಿಗೆ ಕೊಂಚ ಮೂರ್ಖತನ ಹಾಗೂ ಹಠ ಸಹ ಇರುತ್ತದೆ. ಅದನ್ನೆಲ್ಲಾ ನಿಯಂತ್ರಿಸುವುದಕ್ಕೆ ಪೋಷಕರು, ಗುರುಗಳು ಇರುತ್ತಾರೆ. ತಮ್ಮ ಸಾಮರ್ಥ್ಯ ಬಳಸಿಕೊಂಡು ಹೆಚ್ಚು ಸಾಧನೆ ಮಾಡುವತ್ತ ಗಮನ ಹರಿಸಬೇಕು. ಯುವ ಸಮುದಾಯ ವಿದ್ಯೆಯೊಂದಿಗೆ ಮಾನವೀಯತೆಯನ್ನೂ ಬೆಳೆಸಿಕೊಳ್ಳಬೇಕು. ನಾವೂ ನೆಮ್ಮದಿಯಿಂದಿರುವುದರ ಜೊತೆಗೆ ಇತರರು ನೆಮ್ಮದಿಯಿಂದಿರಲು ಬಿಡಬೇಕು. ದೇಶದಲ್ಲಿ ಶಾಂತಿ, ಸಾಮರಸ್ಯ ಕಾಪಾಡಲು ಸಹಕರಿಸಬೇಕು ಎಂದು ತಿಳಿಸಿದರು.
ಇಲ್ಲಿ ಗೆದ್ದವರು ರಾಜ್ಯಮಟ್ಟಕ್ಕೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ಮಾತನಾಡಿ, ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವಿಜೇತರಾದವರು ಜನವರಿ ತಿಂಗಳ ಕೊನೆಯಲ್ಲಿ ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗುತ್ತಾರೆ. ಅಲ್ಲಿ ವಿಜೇತರಾದವರು ಫೆ.12ರಿಂದ ಫೆ.16ರವರೆಗೂ ಉತ್ತರಪ್ರದೇಶದ ಲಖನೌನಲ್ಲಿ ನಡೆಯುವ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದರು.
ಶಾಸ್ತ್ರೀಯ ನೃತ್ಯ(ಭರತನಾಟ್ಯ, ಕುಚಿಪುಡಿ, ಕಥಕ್, ಮಣಿಪುರಿ, ಒಡಿಸ್ಸಿ), ಶಾಸ್ತ್ರೀಯ ವಾದ್ಯ (ಸಿತಾರ್, ಕೊಳಲು, ತಬಲ, ವೀಣೆ, ಮೃದಂಗ) ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ಗಾಯನ (ಕರ್ನಾಟಕ ಮತ್ತು ಹಿಂದೂಸ್ಥಾನಿ), ಆಶುಭಾಷಣ (ಹಿಂದಿ ಅಥವಾ ಇಂಗ್ಲಿಷ್) ಏಕಾಂಗಿ ನಾಟಕ (ಹಿಂದಿ ಅಥವಾ ಇಂಗ್ಲಿಷ್), ಜನಪದ ಗೀತೆ, ಜನಪದ ನೃತ್ಯ ಸ್ಪರ್ಧೆಗಳು ನಡೆದವು.
ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಿಕಾ ಸುರೇಶ್, ನೆಹರು ಯುವಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ಎಸ್.ಸಿದ್ದರಾಮಪ್ಪ, ಡಾ.ಎಂ.ಪಿ.ಉಷಾ, ಮಹಾರಾಣಿ ಕಲಾ ಕಾಲೇಜಿನ ಪ್ರಾಂಶುಪಾಲ ಬಿ.ಟಿ.ವಿಜಯ್, ಮನೋವಿಜ್ಞಾನ ವಿಭಾಗದ ಅಧ್ಯಾಪಕಿ ಮನೋನ್ಮಣಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.