ಮಾವನ ಮನೆಯಲ್ಲಿತ್ತೇ ಡಿಕೆಶಿ ಭಂಡಾರ?

Team Udayavani, Aug 4, 2017, 5:32 PM IST

dks.jpg

ಮೈಸೂರು: ಡಿ.ಕೆ. ಶಿವಕುಮಾರ್‌ ಪ್ರತಿನಿಧಿಸುವ ಕಾಂಗ್ರೆಸ್‌ ಹಾಗೂ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಮಾವ ತಿಮ್ಮಯ್ಯ ಅವರ ಮನೆ ಡಿಕೆಶಿ ಅವರ ಸೇಫ್ ಲಾಕರ್‌ ಆಗಿತ್ತೇ? ಇವು ಸದ್ಯಕ್ಕೆ ಸ್ಥಳೀಯವಾಗಿ ಚರ್ಚಿತವಾಗುತ್ತಿರುವ ವಿಚಾರಗಳು. ಬುಧವಾರ ಬೆಳಗ್ಗೆಯಿಂದ ಶುರುವಾದ ಐಟಿ ದಾಳಿ, ಗುರುವಾರವೂ ನಡೆದಿದೆ. ಮಾವ ತಿಮ್ಮಯ್ಯ ಅವರ ಮನೆ ಡಿಕೆಶಿ ಅವರ ಸೇಫ್ ಲಾಕರ್‌ ಎಂಬ ಮಾಹಿತಿ ಕಲೆಹಾಕಿಕೊಂಡೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಮಹತ್ವದ ದಾಖಲೆ, ಚಿನ್ನಾಭರಣ, ಭಾರಿ ಪ್ರಮಾಣದ ನಗದು ಕಾಯುವ ಸಲುವಾಗಿಯೇ ಅಧಿಕಾರಿಗಳು ಬುಧವಾರ ರಾತ್ರಿ ತಂಗಿದ್ದರಾ ಎಂಬ ಚರ್ಚೆಯೂ ನಡೆದಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಹೋಟೆಲ್‌ನಿಂದ ಊಟ ತರಿಸಿಕೊಂಡು ಊಟ ಮಾಡಿದ ಅಧಿಕಾರಿಗಳು ಅಲ್ಲಿಯೇ ನಿದ್ರೆಗೆ ಜಾರಿದ್ದಾರೆ. ಆದರೆ ತಂಡದಲ್ಲಿದ್ದ ಹಿರಿಯ ಅಧಿಕಾರಿಯೊಬ್ಬರು ಮಾತ್ರ ರಾತ್ರಿ ಹೋಗಿ ಬೆಳಗ್ಗೆ ಬಂದು ತಂಡ ಸೇರಿಕೊಂಡರು ಎಂದು ತಿಳಿದುಬಂದಿದೆ. ತಿಮ್ಮಯ್ಯ ಅವರ ಮನೆಯಲ್ಲಿ ಮಹಿಳೆಯರಿದ್ದ ಕಾರಣಕ್ಕೆ ರಾತ್ರಿ ಬಂದಿದ್ದ ಮಹಿಳಾ ಪೊಲೀಸರು, ಗುರುವಾರ ಬೆಳಗ್ಗೆ ವಾಪಸ್‌ ಹೋದರು. ಉಳಿದಂತೆ ಮನೆಯಲ್ಲಿದ್ದ ಮಕ್ಕಳಿಗೆ ಮಾತ್ರ ಶಾಲೆಗೆ ಹೋಗಲು ಅವಕಾಶ ಕೊಟ್ಟಿರುವ ಅಧಿಕಾರಿಗಳು, ಉಳಿದವರಿಗೆ ಗೃಹಬಂಧನ ವಿಧಿಸಿದ್ದಾರೆ. ಈ ಮಧ್ಯೆ ಮಧ್ಯಾಹ್ನ ಹಿಂಬಾಗಿಲ ಮೂಲಕ ಹೊರಬಂದ ತಿಮ್ಮಯ್ಯ, “ಅವರ ಕೆಲಸ ಇನ್ನೂ ಮುಗಿದಿಲ್ಲವಂತೆ, ಅವರು ಮಾಡಿಕೊಳ್ಳಲಿ’ ಎಂದು ಹೇಳಿ ಬಂದಷ್ಟೇ ವೇಗದಲ್ಲಿ ವಾಪಸ್ಸಾದರು. ಚಿನ್ನಾಭರಣ ವಶ?: ಈ ಮಧ್ಯೆ ತಿಮ್ಮಯ್ಯ ಅವರ ಪುತ್ರ ಸತ್ಯನಾರಾಯಣ ದಂಪತಿಯನ್ನು ತಮ್ಮ ಕಾರಿನಲ್ಲಿ ನಜರ್‌ ಬಾದ್‌ನಲ್ಲಿರುವ ಐಟಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು ಸಂಜೆ ವೇಳೆಗೆ ಮನೆಗೆ ಕರೆತಂದರು. ಮನೆಯಿಂದ ಹೋಗುವಾಗ ಬರಿಗೈಯಲ್ಲಿದ್ದ ಸತ್ಯನಾರಾಯಣ ದಂಪತಿ ವಾಪಸ್‌ ಬರುವಾಗ ಲೋಗೋಶ್‌ ಜುವೆಲ್ಲರಿ ಹೆಸರಿನ ಬ್ಯಾಗ್‌ಗಳನ್ನು ಹಿಡಿದು ತಂದಿದ್ದಾರೆ. ಈ ಮೂಲಕ ಅವರು ಮನೆಯಲ್ಲಿದ್ದ ಚಿನ್ನಾಭರಣವನ್ನು ವಶಕ್ಕೆ ಪಡೆದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. 2ನೇ ದಿನವೂ ಮುಂದುವರಿದ ಪರಿಶೀಲನೆ: ತಿಮ್ಮಯ್ಯ ಅವರ ಮನೆಯಲ್ಲಿ ಸತತ 2ನೇ ದಿನವೂ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಮನೆಯ ಲಾಕರ್‌ನಲ್ಲಿ ಬೇರೆ ಬೇರೆ ಬ್ಯಾಂಕುಗಳ ಪಾಸ್‌ ಪುಸ್ತಕಗಳು ಹಾಗೂ ಬ್ಯಾಂಕ್‌ ಲಾಕರ್‌ಗಳ ದಾಖಲೆಗಳು ದೊರೆತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಭಾವಮೈದುನ ಸತ್ಯನಾರಾಯಣ ಅವರನ್ನು ಸಮೀಪದ ಬ್ಯಾಂಕ್‌ಗೆ ಕರೆದೊಯ್ದು ಬ್ಯಾಂಕ್‌ ಲಾಕರ್‌ನಲ್ಲಿರಿಸಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಹಣಕಾಸು ವ್ಯವಹಾರದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಆಪ್ತನ ಮನೆ ಮೇಲೂ ದಾಳಿ: ತಿಮ್ಮಯ್ಯ ಅವರ ಮನೆಯಪರಿಶೀಲನೆ ಜತೆಗೆ ಅವರ ಆಪ್ತರ ಚಲನವಲನಗಳ ಬಗ್ಗೆಯೂ ನಿಗಾ ಇರಿಸಿದ್ದ ಅಧಿಕಾರಿಗಳು, ಗುರುವಾರ ಮಧ್ಯಾಹ್ನದ ವೇಳೆಗೆ ಸ್ಥಳೀಯ ಪೊಲೀಸರನ್ನು ಕರೆಸಿಕೊಂಡು ಇಟ್ಟಿಗೆಗೂಡಿನಲ್ಲೇ ಇರುವ ಎಡ್ವಿನ್‌ ಮನೆ ಮೇಲೆ ದಾಳಿನಡೆಸಿ ಪರಿಶೀಲನೆ ನಡೆಸಿ, ಅವರ ಸ್ವಿಪ್ಟ್ ಕಾರಿನಲ್ಲಿ ಸಿಕ್ಕ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.