ದಲೈಲಾಮ ಆಗಮನ: ಪೊಲೀಸರಿಂದ ಸಾರ್ವಜನಿಕ ಸಭೆ


Team Udayavani, Dec 11, 2017, 1:12 PM IST

m5-dalailama.jpg

ಪಿರಿಯಾಪಟ್ಟಣ: ಟಿಬೇಟಿಯನ್‌ ಧರ್ಮಗುರು ದಲೈಲಾಮ ಅವರು ತಾಲೂಕಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೈಲಕುಪ್ಪೆ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರು, ಟಿಬೇಟಿಯನ್‌ ಮತ್ತು ಆಟೋ ಚಾಲಕರು, ಹೋಟೆಲ್‌ ಮಾಲಿಕರ ಸಭೆ ಜರುಗಿತು.

ಠಾಣಾಧಿಕಾರಿ ಪಿ.ಲೊಕೇಶ್‌ ಮಾತನಾಡಿ, ಪೊಲೀಸ್‌ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕ. ಟಿಬೇಟಿಯನ್‌ ಬಂಧುಗಳು, ಸಾರ್ವಜನಿಕರು, ಅಂದಿನಿಂದ ಇಂದಿನವರೆಗೆ ಶಾಂತಿ ಸೌಹಾರ್ಧತೆಯಿಂದ ಜೀವನ ನಡೆಸುತ್ತಿದ್ದು ಮುಂದೆಯೂ ಸಹಕರಿಸಬೇಕೆಂದು ಮನವಿ ಮಾಡಿದರು.

ಟಿಬೇಟಿಯನ್‌ ಧರ್ಮಗುರುಗಳಾದ ದಲೈಲಾಮ ಅವರು ಡಿ.18ರಿಂದ 23ರ ವರೆಗೆ ಲಾಮಾ ಕ್ಯಾಂಪ್‌ನಲ್ಲಿ ವಾಸ್ತವ್ಯ ಹೂಡಿ ಬೌದ್ಧ ಸನ್ಯಾಸಿಗಳಿಗೆ ಪ್ರವಚನ ಬೋಧಿಸಲಿದ್ದಾರೆ. ನಮ್ಮ ದೇಶದ ಪ್ರಧಾನಮಂತ್ರಿಯವರಿಗೆ ಎಷ್ಟು ಪೊಲೀಸ್‌ ಬಂದೋಬಸ್ತ್ ಮಾಡಲಾಗುತ್ತದೋ ಅಷ್ಟೇ ದಲೈಲಾಮರಿಗೂ ಬಂದೋಬಸ್ತ್ ಏರ್ಪಡಿಸಲು ಪೊಲೀಸ್‌ ಇಲಾಖೆಯಿಂದ 600ಕ್ಕೂ ಹೆಚ್ಚು ಸಿಬ್ಬಂದಿ 100ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಬರುತ್ತಿದ್ದಾರೆ ಎಂದು ತಿಳಿಸಿದರು.

ಬೌದ್ಧ ಧರ್ಮಗುರು ಬರುತ್ತಿರುವುದರಿಂದ ಅವರ ಅನುಯಾಯಿಗಳು ಹೊರ ರಾಜ್ಯ ಹಾಗೂ ರಾಷ್ಟ್ರಗಳಿಂದ ಬರುವ ಪ್ರವಾಸಿಗರಿಗೆ ಸಾರ್ವಜನಿಕ ಬಂಧುಗಳು ಸಹಕರಿಸಬೇಕೆಂದು ತಿಳಿಸಿದರು. ಓಲ್ಡ್‌ ಸೆಟ್ಲಮೆಂಟ್‌ನ ಗೆಲಕ್‌, ನೊಬೆಲ್‌ ಪ್ರಶಸ್ತಿ ಪಡೆದ ದಲೈಲಾಮ ಗುರೂಜಿಯವರು ಡಿ.21ರಂದು ಸೆರಾ ಲಾಮಕ್ಯಾಂಪ್‌ನಲ್ಲಿ ಬೌದ್ಧ ಸನ್ಯಾಸಿಗಳು ಹಾಗೂ ಟಿಬೇಟಿಯನ್‌ ಬಂಧುಗಳಿಗೆ ಬೌದ್ಧ ಪ್ರವಚನ ನೀಡಲಿದ್ದು 15ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆಂದರು. 

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಚಂದ್ರಶೇಖರ್‌, ಗ್ರಾಪಂ ಉಪಾಧ್ಯಕ್ಷ ಯಶ್ವಂತ್‌ಕುಮಾರ್‌, ಸದಸ್ಯರಾದ ಮುಖುºಲ್‌, ರೇಣುಕಾಸ್ವಾಮಿ, ನಾಗರಾಜು, ದಿನೇಶ್‌, ಭರತ್‌ರಾಜೆ ಅರಸ್‌, ಟಿಬೇಟಿಯನ್‌ ಮಹಿಳಾ ಸಂಘದ ಅಧ್ಯಕ್ಷೆ ಟೆಂಜಿನ್‌ ಡೊಲ್ಮಾ, ಲಕಾ ಸಿರಿಂಗ್‌, ಆಟೋ ಚಾಲಕರಾದ ಮಹೇಶ, ಅರುಣ, ದೇವರಾಜು, ಗ್ರಾಮಸ್ಥರಾದ ಮಹದೇಶ, ದೇವರಾಜ್‌, ಸಿಬ್ಬಂದಿಗಳಾದ ಎಎಸ್‌ಐ  ವಿಜೇಂದ್ರ ನಂದೀಶ್‌, ಇರ್ಫಾನ್‌, ಅಶೋಕ್‌, ಹೋಟೆಲ್‌ ಮಾಲಿಕರು ಇದ್ದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.