ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ
Team Udayavani, Apr 4, 2017, 11:42 AM IST
ಮೈಸೂರು: ಬಡ್ತಿ ಮೀಸಲಾತಿ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗಾಗಿ ಒತ್ತಾಯಿಸಿ ದಸಂಸ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಇಂದಿಗೂ ಅನಕ್ಷರತೆ, ಬಡತನ ಹಾಗೂ ಜಾತೀಯತೆ ಜೀವಂತವಾಗಿದ್ದು, ಪ್ರಸ್ತುತ ಸಂದರ್ಭದಲ್ಲಿ ಆಡಳಿತ, ಔದ್ಯೋಗಿಕ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲೂ ತಾಂಡವ ವಾಡುತ್ತಿರುವುದರಿಂದ ದೇಶದಲ್ಲಿ ಸಾಮಾಜಿಕ ಅಸಮಾನತೆ ಉಂಟಾಗಿದೆ. ಇಂತಹ ವ್ಯವಸ್ಥೆ ನಡುವೆ ಸಾಮಾಜಿಕ ನಾಯ್ಯದಿಂದ ವಂಚಿತರಾಗಿರುವ ಜನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆಸಿದರು ಅದಕ್ಕೆ ಅಡ್ಡಿಪಡಿಸುತ್ತಿರುವುದು ಖಂಡನೀಯ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ಪ್ರಸ್ತುತ ಸಂದಭìದಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯು ಜಾತಿವಾದಿಗಳ ಪಿತೂರಿಯಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ / ವರ್ಗದ ಅಧಿಕಾರಿಗಳು ಹಾಗೂ ನೌಕರರ ಬಡ್ತಿ ಮೀಸಲಾತಿ ಮೇಲೆ ಪರಿಣಾಮ ಬೀರಿದ್ದು, ಈ ಸಮುದಾಯದ ಅಧಿಕಾರಿ ಮತ್ತು ನೌಕರರ ಮೇಲೆ ಹಿಂಬಡ್ತಿ ಮೂಡುತ್ತಿದೆ.
ಇವೆಲ್ಲದರ ಪರಿಣಾಮ ದಲಿತ ಸಮುದಾಯದ ಅಧಿಕಾರಿಗಳು, ನೌಕರರ ಬಡ್ತಿ ಮೀಸಲಾತಿಗೆ ಸಂಚಕಾರ ಎದುರಾಗಿದೆ.
ಈ ನಡುವೆ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸರ್ವೋತ್ಛ ನ್ಯಾಯಾಲಯ ಇತ್ತೀಚಿಗೆ ನೀಡಿರುವ ಆದೇಶದಿಂದ ಶೋಷಿತ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಬಡ್ತಿ ಮೀಸಲಾತಿ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಸರ್ವೋತ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಇದಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಬೇಕು.
ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಸಿ / ಎಸ್ಟಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ಈ ಸಮುದಾಯದ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರದ ಎಸ್‌ಸಿಪಿ /ಟಿಎಸ್‌ಪಿ ಕಾಯ್ದೆಯಂತೆ ಕೇಂದ್ರ ಸರ್ಕಾರ ಕಾಯ್ದೆ ರೂಪಿಸಲು ಮುಂದಾಗಬೇಕೆಂದು ಆಗ್ರಹಿಸಿದರು. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್ ಮಲ್ಲಾಡಿ, ಮುಖಂಡರಾದ ಎಚ್.ಪಿ. ದಿವಾಕರ್, ಕಾರ್ಯ ಬಸವಣ್ಣ, ವೆಂಕಟೇಶ್, ಮಹದೇವಸ್ವಾಮಿ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.