Dasara; ನಾಡಹಬ್ಬ ಮೈಸೂರು ದಸರೆಗೆ 40 ಕೋ.ರೂ. ದಾಖಲೆ ಅನುದಾನ!
Team Udayavani, Aug 17, 2024, 12:49 AM IST
ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಈ ಬಾರಿ ಸರಕಾರ ದಾಖಲೆಯ 40 ಕೋಟಿ ರೂ. ಅನುದಾನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ಪ್ರಕಟಿಸಿದ್ದಾರೆ. ಈ ಪ್ರಮಾಣದ ಅನುದಾನವನ್ನು ದಸರೆಗೆ ಸರಕಾರ ನೀಡುತ್ತಿರುವುದು ಇದೇ ಮೊದಲ ಬಾರಿ.
ರಾಜ್ಯ ಸರಕಾರ ನಾಡಹಬ್ಬ ದಸರಾ ಉತ್ಸವ ಹೆಸರಿನಲ್ಲಿ ನವರಾತ್ರಿಯನ್ನು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿದೆ. ದಸರಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳು ಆಯಾ ಸಂದರ್ಭಕ್ಕೆ ಅನುಗುಣವಾಗಿ ದಸರಾ ಆಚರಣೆಯ ಬಗ್ಗೆ ತೀರ್ಮಾನ ಮಾಡುತ್ತಾರೆ. ಅದಕ್ಕೆ ಪೂರಕವಾದ ಅನುದಾನವನ್ನೂ ಒದಗಿಸುವ ವಾಡಿಕೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.
ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಕೆರೆ-ಕಟ್ಟೆಗಳು ಭರ್ತಿಯಾಗಿರುವುದರಿಂದ ಸರಕಾರ 415ನೇ ದಸರಾವನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದ್ದು, ಅದಕ್ಕಾಗಿ 40 ಕೋಟಿ ರೂ. ನೀಡುವುದಾಗಿ ಪ್ರಕಟಿಸಿದೆ. ದಸರಾ ಇತಿಹಾಸದಲ್ಲಿ ಈ ಪ್ರಮಾಣದ ಹಣವನ್ನು ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.