ದಸರಾ ಮಹೋತ್ಸವ: ಇಂದಿನಿಂದ ಗಜಪಡೆಯ 3ನೇ ಸುತ್ತಿನ ತಾಲೀಮು
Team Udayavani, Aug 29, 2022, 6:45 AM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಗಜಪಡೆ ಎರಡು ಸುತ್ತಿನ ಭಾರ ಹೊರುವ ತಾಲೀಮು ಪೂರ್ಣಗೊಳಿಸಿದ್ದು, ಸೋಮವಾರದಿಂದ 3ನೇ ಸುತ್ತಿನ ತಾಲೀಮು ನಡೆಸಲು ಅಣಿಯಾಗಿದೆ.
ಆ.10ರಂದು ಅರಮನೆ ಪ್ರವೇಶಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಆ.14ರಿಂದ ಅರಮನೆಯಿಂದ ಬನ್ನಿಮಂಟಪದವರೆಗೆ ನಿತ್ಯ ಬೆಳಗ್ಗೆ ಮತ್ತು ಸಂಜೆ ಮೊದಲ ಹಾಗೂ ಎರಡನೇ ಹಂತದ (350ರಿಂದ 550 ಕೆ.ಜಿ.) ಭಾರ ಹೊರುವ ತಾಲೀಮನ್ನು ಯಶಸ್ವಿಯಾಗಿ ನಡೆಸಿದ್ದವು. ಇದೇ ಮೊದಲ ಬಾರಿಗೆ ದಸರೆಗೆ ಆಗಮಿಸಿರುವ ಮಹೇಂದ್ರ ಹಾಗೂ 2ನೇ ಬಾರಿಗೆ ಆಗಮಿಸಿರುವ ಭೀಮ ಆನೆಯೂ ಯಾವುದೇ ಅಂಜಿಕೆ ಇಲ್ಲದೆ ನಿರ್ಭೀತಿಯಿಂದ ತಾಲೀಮಿನಲ್ಲಿ ಭಾಗವಹಿಸಿ ಭಾರ ಹೊತ್ತು ಹೆಜ್ಜೆ ಹಾಕಿರುವುದು ವಿಶೇಷ.
2ನೇ ಹಂತದ ತಾಲೀಮು ಭಾನುವಾರ ಮುಕ್ತಾಯವಾಗಿದ್ದು, ಕೊನೆಯ ದಿನವಾದ ಭಾನುವಾರ ಭೀಮ ಬೆಳಗ್ಗೆ ಮತ್ತು ಸಂಜೆ 550 ಕೆ.ಜಿ. ಭಾರಹೊತ್ತು ಯಶಸ್ವಿಯಾಗುವ ಮೂಲಕ ನಾನೂ ಭವಿಷ್ಯದ ಅಂಬಾರಿ ಆನೆ ಎಂಬ ಭರವಸೆ ಮೂಡಿಸಿದ.
ಇಂದಿನಿಂದ ಅಂಬಾರಿ ಆನೆ ಅಭಿಮನ್ಯುವಿಗೆ 750 ಕೆ.ಜಿ. ತೂಕದ ಮರಳು ಮೂಟೆ ಹಾಗೂ 250 ಕೆಜಿ ತೂಕ ಇರುವ ಗಾದಿ ಮತ್ತು ನಮಾª ಸೇರಿ ಒಂದು ಸಾವಿರ ಕೆ.ಜಿ. ಭಾರ ಹೊತ್ತು ತಾಲೀಮು ನಡೆಸಲಿದ್ದಾನೆ. ಅಭಿಮನ್ಯು ಬಳಿಕ ಗೋಪಾಲಸ್ವಾಮಿ, ಧನಂಜಯ ಆನೆಗೂ ಸಾವಿರ ಕೆ.ಜಿ. ಭಾರ ಹೊರುವ ತಾಲೀಮು ನಡೆಯಲಿದೆ. ಇದರ ಜತೆಗೆ ಕಿರಿಯ ಆನೆಗಳಾದ ಭೀಮ ಮತ್ತು ಮಹೇಂದ್ರ ಆನೆಗಳಿಗೆ 1 ಸಾವಿರ ಕೆ.ಜಿ. ಬದಲು 750 ಕೆ.ಜಿ. ಭಾರ ಹೊರಿಸಿ ತಾಲೀಮು ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಡಿಸಿಎಫ್ ಕರಿಕಾಳನ್ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.