ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಗಜಪಯಣಕ್ಕೆ ಚಾಲನೆ
Team Udayavani, Aug 13, 2017, 7:25 AM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಥಮ ಹೆಜ್ಜೆ, ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಗಜಪಯಣಕ್ಕೆ ಶನಿವಾರ ಚಾಲನೆ ನೀಡಲಾಯಿತು. ಆದರೆ, ಚಾಲನೆ ನೀಡುವ ವೇಳೆ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶೂ ಧರಿಸಿದ್ದುದು ವಿವಾದಕ್ಕೆ ಕಾರಣವಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಟಾಗಿಲು ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಶನಿವಾರ ಗಜಪಯಣ ಕಾರ್ಯಕ್ರಮ ನೆರವೇರಿತು.
ಶಾಸೊOಉàಕ್ತವಾಗಿ ನಡೆದ ಪೂಜಾ ಕಾರ್ಯದಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಬರಿಗಾಲಲ್ಲಿ ನಿಂತು ಪೂಜೆ ಸಲ್ಲಿಸಿದರು. ಬೆಳಗ್ಗೆ 11ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ 20 ನಿಮಿಷತಡವಾಗಿ ಬಂದ ಸಚಿವರು, ನೇರವಾಗಿ ಅರ್ಜುನ ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಗಜಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಆದರೆ, ಈ ವೇಳೆ ಸಚಿವರು ತಮ್ಮ ಶೂ ಬಿಚ್ಚದೆ ಪೂಜಾ ಕಾರ್ಯದಲ್ಲಿ ತೊಡಗಿದ್ದು, ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.