ದಸರಾ ಗಜಪಯಣಕ್ಕೆ ಚಾಲನೆ: ಮೈಸೂರಿನತ್ತ ತೆರಳಿದ ಅಭಿಮನ್ಯು ನೇತೃತ್ವದ ಗಜಪಡೆ
Team Udayavani, Oct 1, 2020, 1:33 PM IST
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಯಣ ಆರಂಭಕ್ಕೆ ಗುರುವಾರ ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಗೇಟ್‌ನಿಂದ ಗುರುವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.
ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು (54), ವಿಜಯ (61), ಕಾವೇರಿ (42), ಗೋಪಿ (38) ಹಾಗೂ ವಿಕ್ರಮ (47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.
ಇದನ್ನೂ ಓದಿ:ಮೈಸೂರು ಡಿಸಿಯಾಗಿ ವರ್ಗಾವಣೆ ರೋಹಿಣಿ ಸಿಂಧೂರಿಗೆ ನೀಡಿದ ಗಿಫ್ಟ್: ಸಾ.ರಾ.ಮಹೇಶ್ ಆರೋಪ
ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೋವಿಡ್ ಹಿನ್ನೆಲೆ ಈ ಬಾರಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.
ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಅಲೆಗ್ಸಾಂಡರ್, ಮಹೇಶ್‌ಕುಮಾರ್, ಡಾ.ಕೆ.ಸಿ.ಪ್ರಶಾಂತ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಅಂಟೋನಿ ಪೌಲ್ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.