ಪ್ರಗತಿಪರರಿಂದ ಮೈಸೂರಲ್ಲಿ ಮಹಿಷ ದಸರಾ

Team Udayavani, Sep 19, 2017, 12:44 PM IST

mys2.jpg

ಮೈಸೂರು: ಮಹಿಷಾಸುರ ಮೈಸೂರು ಜನರ ರಕ್ಷಣೆಗಾಗಿ ಹೋರಾಡಿದ ಸ್ವಾಭಿಮಾನಿ ಸಾಂಸ್ಕೃತಿಕ ನಾಯಕನಾಗಿದ್ದು ಈ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ನಗರದ ದಲಿತ ವೆಲ್‌ಫೇರ್‌ ಟ್ರಸ್ಟ್‌, ಅಶೋಕಪುರಂ ಅಭಿಮಾನಿಗಳ ಬಳಗ, ಮಾನಸಗಂಗೋತ್ರಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಸೋಮವಾರ ಆಚರಿಸಲಾದ ಮೂಲ ನಿವಾಸಿಗಳ ಮಹಿಷ ಸಾಂಸ್ಕೃತಿಕ ಹಬ್ಬದ ಅಂಗವಾಗಿ ನಡೆದ ಬೈಕ್‌ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ವೈದಿಕ ಧಾರ್ಮಿಕ ವಕ್ತಾರರು, ಅವರ ಧಾರ್ಮಿಕ ಸಾಹಿತ್ಯ, ಪುರಾಣ ಕಥೆಗಳು, ಪ್ರವಚನಗಳು, ನಾಟಕ, ನಾಟ್ಯಗಳಲ್ಲಿ ಮಹಿಷಾಸುರನನ್ನು ರಾಕ್ಷಸ, ದುಷ್ಟ, ನೀಚ, ಲೋಕಕಂಟಕ ಎಂದೆಲ್ಲಾ ಚಿತ್ರಿಸಿ ಜನರಿಗೆ ಮಹಿಷಾಸುರನ ಬಗ್ಗೆ ಕೆಟ್ಟ ಭಾವನೆ ಬರುವಂತೆ ಮಾಡಲಾಗಿದೆ.

ಆದರೆ, ಮಹಿಷಾಸುರನ ಸತ್ಯಾಸತ್ಯತೆ ತಿಳಿಯಲು ಹೊರಟ ಚಿಂತಕರಿಗೆ ಕಂಡ ಸತ್ಯಸಂಗತಿಯಂತೆ ಮಹಿಷಾಸುರ ಕೆಟ್ಟವನಲ್ಲ, ದುಷ್ಟನೂ ಅಲ್ಲ, ಲೋಕಕಂಟಕನೂ ಅಲ್ಲ. ಬದಲಿಗೆ ಆತ ಮೈಸೂರು ಜನರ ರಕ್ಷಣೆಗಾಗಿ ಹೋರಾಡಿದ ಸ್ವಾಭಿಮಾನಿ ಸಾಂಸ್ಕೃತಿಕ ನಾಯಕ ಹಾಗೂ ಮೈಸೂರಿನ ಮೂಲ ಅರಸನಾಗಿದ್ದಾನೆ.

ಹೀಗಾಗಿ ಚಾಮುಂಡೇಶ್ವರಿ ಮಹಿಷಮರ್ದಿನಿ ಕಟ್ಟುಕಥೆ ಎಂಬ ಉದ್ದೇಶದಿಂದ 5 ವರ್ಷಗಳಿಂದ ಮಹಿಷ ಹಬ್ಬ ಆಚರಿಸಲಾಗುತ್ತಿದೆ. ಈ ಮೂಲಕ ಮಹಿಷಾಸುರನ ಬಗ್ಗೆ ಮಹಿಷಮಂಡಲದ ಮೂಲನಿವಾಸಿಗಳಿಗೆ ಅರಿವು ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಇದಕ್ಕೂ ಮುನ್ನ ನಗರದ ಪುರಭವನದ ಮುಂಭಾಗದಿಂದ ಚಾಮುಂಡಿಬೆಟ್ಟಕ್ಕೆ ಬೈಕ್‌ ರ್ಯಾಲಿ ನಡೆಸಲಾಯಿತು. ವಿಚಾರವಾದಿ ಪ್ರೊ.ಕೆ.ಎಸ್‌.ಭಗವಾನ್‌, ದಲಿತ ವೆಲ್‌ಫೇರ್‌ ಟ್ರಸ್ಟ್‌ನ ಶಾಂತರಾಜು, ಲೇಖಕ ಬನ್ನೂರು ಕೆ.ರಾಜು, ಪ್ರೊ.ಮಹೇಶ್‌ ಚಂದ್ರ ಗುರು, ಶಬ್ಬೀರ್‌ ಮುಸ್ತಫಾ ಮತ್ತಿತರರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.