ಕನ್ನಡಪರ ಸಂಘಟನೆಗಳಿಗೆ ದಸರಾ ಪಾಸ್ ನೀಡಲು ಮನವಿ
Team Udayavani, Sep 11, 2017, 12:22 PM IST
ಮೈಸೂರು: ನಾಡಹಬ್ಬ ದಸರಾ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡಪರ ಸಂಘಟನೆಗಳನ್ನು ಕಡೆಗಣಿಸುತ್ತಿದೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಕನ್ನಡ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ದಸರಾ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳಿಗಾಗಲಿ, ದೇವರಾಜ ಅರಸು ಜಯಂತಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಮೈಸೂರು ನಗರ ಮತ್ತು ಜಿಲ್ಲೆಯಲ್ಲಿರುವ ಬಹುತೇಕ ಕನ್ನಡ ಪರ ಸಂಘಟನೆಗಳನ್ನು ದೂರವಿಟ್ಟು ತಮಗೆ ಬೇಕಾದ ಐದಾರು ಕನ್ನಡ ಸಂಘ ಸಂಸ್ಥೆಗಳನ್ನು ಮಾತ್ರ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದರು.
ಮೈಸೂರು ದಸರಾಕ್ಕೆ ಸಂಬಂಧಿಸಿದ ಉಚಿತ ಪಾಸುಗಳನ್ನು ಐದಾರು ಸಂಘಟನೆಗಳಿಗೆ ಮಾತ್ರ ಪ್ರತಿ ವರ್ಷ ನೀಡುತ್ತಾ ಬರಲಾಗಿದೆ. ಕನ್ನಡ ಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಭೆ-ಸಮಾರಂಭಗಳನ್ನು ನಡೆಸಬೇಕು. ದಸರಾ ಉಚಿತ ಪಾಸ್ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು.
ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅರವಿಂದ್ ಶರ್ಮ, ಡಾ.ರಾಜ್ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಹದೇವ ಸ್ವಾಮಿ, ಕರವೇ ಯುವ ಸೇನೆ ಜಿಲ್ಲಾಧ್ಯಕ್ಷ ಜಿ.ಬಸವಣ್ಣ, ಕರ್ನಾಟಕ ಜನಪರ ಶಕ್ತಿ ವೇದಿಕೆ ಎಚ್.ಡಿ.ಕೋಟೆ ತಾಲೂಕು ಅಧ್ಯಕ್ಷ ಪುರುಷೋತ್ತಮ್, ಎಸ್.ನಟರಾಜು, ಜಗದೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.