ಯೋಗಾಸಕ್ತರನ್ನು ಸೆಳೆದ ದಸರಾ ಯೋಗೋತ್ಸವ
Team Udayavani, Oct 15, 2018, 11:36 AM IST
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ದಸರಾ ಯೋಗೋತ್ಸವದಲ್ಲಿ ಸಹಸ್ರಾರು ಯೋಗಪಟುಗಳು ಏಕಕಾಲದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಆಸನ ಪ್ರದರ್ಶಿಸಿದರು.
ಅಂಬಾವಿಲಾಸ ಅರಮನೆ ಆವರಣದಲ್ಲಿ ಭಾನುವಾರ ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದ ಯೋಗಾಸಕ್ತರು ಚುಮುಚುಮು ಚಳಿಯನ್ನು ಲೆಕ್ಕಿಸದೆ ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಿ ಯೋಗ ನಮನ ಸಲ್ಲಿಸಿದರು.
ಪ್ರಾರ್ಥನೆಯೊಂದಿಗೆ ಆರಂಭಗೊಂಡ ಯೋಗ ಪ್ರದರ್ಶನದ ನಂತರ ಸಾಮೂಹಿಕ ಸೂರ್ಯ ನಮಸ್ಕಾರ ಸೇರಿದಂತೆ 26 ಆಸನಗಳು ಶವಾಸನ, ಪ್ರಾಣಾಯಾಮ, ಧ್ಯಾನ ಮತ್ತು ಶಾಂತಿ ಮಂತ್ರದ ಮೂಲಕ ಯೋಗೋತ್ಸವವನ್ನು ಮುಕ್ತಾಯಗೊಳಿಸಲಾಯಿತು. ಹಿರಿಯರು, ವಿಶೇಷ ಚೇತನರು, ಮಕ್ಕಳು ಮತ್ತು ಯುವಕ-ಯುವತಿಯರು ಸೇರಿದಂತೆ ಒಂದು ಸಾರವಿಕ್ಕೂ ಹೆಚ್ಚು ಮಂದಿ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡು ಸಾಮೂಹಿಕ ಯೋಗ ಪ್ರದರ್ಶಿಸಿದರು.
ಇದಕ್ಕೂ ಮುನ್ನಾ° ಯೋಗೋತ್ಸವಕ್ಕೆ ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಇಬ್ಬರು ಸಚಿವರು ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಇವರೊಂದಿಗೆ ಬೆಂಗಳೂರಿನ ಆಯುಷ್ ಇಲಾಖೆ ನಿರ್ದೇಶಕಿ ಮೀನಾಕ್ಷಿ ನೇಗಿ, ಯೋಗ ದಸರಾದ ಉಪವಿಶೇಷಾಧಿಕಾರಿ ಕೆ.ರಮ್ಯಾ, ಕಾರ್ಯಾಧ್ಯಕ್ಷೆ ಬಿ.ಎಸ್.ಪ್ರಭಾ, ಕಾರ್ಯದರ್ಶಿ ಡಾ.ಬಿ.ಎಸ್.ಸೀತಾಲಕ್ಷ್ಮೀ ಸೇರಿದಂತೆ ಮುಂತಾದವರು ಭಾಗವಸಿದ್ದರು.
ವಸ್ತು ಪ್ರದರ್ಶನದಲ್ಲಿ ಯೋಗ: ದಸರಾ ಅಂಗವಾಗಿ ಯೋಗ ದಸರಾ ಉಪ ಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವೃದ್ಧರು ಮತ್ತು ವಿಶೇಷ ಮಕ್ಕಳ ಯೋಗ ಪ್ರದರ್ಶನ ನಡೆಯಿತು.
ಬೆಂಗಳೂರಿನ ಬಸವೇಶ್ವರನಗರದ 67 ವರ್ಷದ ಹಿರಿಯ ಯೋಗಪಟು ಶ್ಯಾಮ್‌ಸುಂದರರಾವ್ ಅಂಗವಿಕಲರ ವಿಭಾಗದಲ್ಲಿ ಯೋಗಾಸನ ಮಾಡಿ ಗಮನ ಸೆಳೆದರು. ಇವರೊಂದಿಗೆ ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ್ದ ವಿವಿಧ ವಯೋಮಾನದ 800 ಸ್ಪರ್ಧಾರ್ಥಿಗಳು ಭಾಗವಸಿದ್ದರು. ಒಟ್ಟು 9 ವಿಭಾಗಗಳಲ್ಲಿ ಯೋಗಾಸನ ಸ್ಪರ್ಧೆ ನಡೆಸಲಾಯಿತು.
8ರಿಂದ 60ಕ್ಕೂ ಮೇಲ್ಪಟ್ಟ ವಯೋಮಾನದವರು ಸ್ಪರ್ಧೆಯಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ನೀರಿಕ್ಷೆ ಶಾಲೆಯ ವಿಶೇಷಚೇತನ ಮಕ್ಕಳು ಹಾಗೂ ಗದಗ ಜಿಲ್ಲೆಯ ಹೊಳೆ-ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿಯುತ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.