ಆಶ್ರಮ ಶಾಲೆ ಮಕ್ಕಳಿಗೆ ಪಾಠ ಮಾಡಿದ ಡಿಸಿ
Team Udayavani, Mar 16, 2018, 12:27 PM IST
ಮೈಸೂರು: ನೂತನ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ. ಜಿಲ್ಲಾ ಪ್ರವಾಸದ ಮೊದಲ ದಿನವೇ ಆಶ್ರಮ ಶಾಲೆ ಮಕ್ಕಳಿಗೆ ಪಾಠ ಮಾಡುವ ಮೂಲಕ ಗಮನಸೆಳೆದಿದ್ದಾರೆ. ಪಿರಿಯಾಪಟ್ಟಣ ತಾಲೂಕು ಮುತ್ತೂರು ಗ್ರಾಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ನಂತರ ರಾಜೀವ್ ಕಾಲೋನಿಯ ಗಿರಿಜನ ಆಶ್ರಮ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಆಶ್ರಮ ಶಾಲೆಯಲ್ಲಿ ಸೀಮೆಸುಣ್ಣ ಹಿಡಿದು ಕಪ್ಪು ಹಲಗೆಯ ಮೇಲೆ ಮಕ್ಕಳಿಗೆ ಲೆಕ್ಕದ ಪಾಠ ಮಾಡಿದರು. 5ನೇ ತರಗತಿ ಬಾಲಕನೊಬ್ಬ ವ್ಯವಕಲನವನ್ನು ತಪ್ಪು ಮಾಡಿದಾಗ, ಹಲಗೆಯ ಮೇಲೆ ಬರೆದು ತಪ್ಪು ತಿದ್ದಿ ಹೇಳಿದರಲ್ಲದೆ, ಗಣಿತ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಲ್ಲಿನ ಶಿಕ್ಷಕರಿಗೆ ನೋಟಿಸ್ ನೀಡಿ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರ್ ಅವರು, ಈಗಾಗಲೇ ಸರ್ಕಾರದ ಮಟ್ಟದಲ್ಲಿ ಆಶ್ರಮ ಶಾಲೆ ಮಕ್ಕಳ ಕಲಿಕೆಯ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆವಹಿಸಿದ್ದು, ಜೂನ್ ನಿಂದ ಶಿಕ್ಷಣ ಇಲಾಖೆಯ ಉಪಾಧ್ಯಾಯರು ಪಾಠ ಮಾಡಲಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಊಟ-ವಸತಿ ಒದಗಿಸುವ ಕೆಲಸ ಮಾಡಲಾಗುವುದು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.