2ನೇ ಡೋಸ್ ಲಸಿಕೆ ಪಡೆದ ಜಿಲ್ಲಾಧಿಕಾರಿ
Team Udayavani, Mar 10, 2021, 3:40 PM IST
ಮೈಸೂರು: ಜನತೆ ಕೋವಿಡ್ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಡೆದು ಕೊಳ್ಳಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ 2ನೇ ಡೋಸ್ ಕೋವಿಡ್ ಲಸಿಕೆ ಪಡೆದುಮಾತನಾಡಿದ ಅವರು, ಫೆಬ್ರವರಿ 8ರಂದುಮೊದಲ ಡೋಸ್ ಲಸಿಕೆ ಪಡೆದಿದ್ದೆ. 28ದಿನಗಳು ಆಗಿರುವ ಹಿನ್ನೆಲೆಯಲ್ಲಿ 2ನೇ ಡೋಸ್ ಲಸಿಕೆ ಪಡೆದಿದ್ದೇನೆ. ಲಸಿಕೆತೆಗೆದುಕೊಂಡ ನನಗೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಲಿಲ್ಲ. ಲಸಿಕೆ ಪಡೆದಕೆಲವೊಬ್ಬರಿಗೆ ಸಾಮಾನ್ಯವಾಗಿ ಜ್ವರ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಲಸಿಕೆ ನೀಡುವವರೆ ಜ್ವರದ ಮಾತ್ರೆಯನ್ನು ಸಹ ಉಚಿತವಾಗಿ ನೀಡುತ್ತಿದ್ದಾರೆ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನುಉಚಿತವಾಗಿ ನೀಡುತ್ತಿದ್ದಾರೆ. ಇದನ್ನು ಸದು ಪಯೋಗ ಪಡಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು. ಹೊಸದಾಗಿ ಬಂದಾಗಭಯವಾಗುವುದು ಸಾಮಾನ್ಯ. ಪ್ರಧಾನಮಂತ್ರಿಯಿಂದ ಹಿಡಿದು ಪೌರಕಾರ್ಮಿಕರವರೆಗೂ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದು ಅದರ ಉಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.
ಲಸಿಕೆಯನ್ನು ಪಡೆದುಕೊಳ್ಳುವವರ ಸಂಖ್ಯೆಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳನ್ನು ಸಹ ಹೆಚ್ಚಾಗಿತೆರೆಯಲಾಗುತ್ತಿದ್ದು, ಮುಂದೆ ಪ್ರಾಥಮಿಕಆರೋಗ್ಯ ಕೇಂದ್ರಗಳಲ್ಲೂ ಸಹ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆರ್.ಸಿ.ಎಚ್ ಅಧಿಕಾರಿಡಾ. ಎಲ್. ರವಿ, ಜಿಲ್ಲಾ ಸರ್ಜನ್ ಡಾ.ರಾಜೇಶ್ವರಿ, ಡಾ.ಮೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕುಟುಂಬದವರಿಗೂ ಕೋವಿಡ್ ಲಸಿಕೆ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಾಯಿ ಶ್ರೀಲಕ್ಷ್ಮೀ ರೆಡ್ಡಿ, ತಂದೆ ಜೈಪಾಲ ರೆಡ್ಡಿ ಹಾಗೂ ಮಾವ ನಾರಾಯಣ ರೆಡ್ಡಿ ಅವರು ಮೊದಲನೆ ಡೋಸ್ ಲಸಿಕೆ ಪಡೆದುಕೊಂಡರು. 2ನೇ ಡೋಸ್ ಲಸಿಕೆ ಪಡೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!
Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ
Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ
ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ
Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ