ಶಾಲೆ ತೆರೆಯಲು ಕಾಲ ಕೂಡಿ ಬರಬೇಕು: ಡಿಸಿಎಂ ಅಶ್ವಥ್ ನಾರಾಯಣ್
Team Udayavani, Jun 29, 2021, 4:09 PM IST
ಮೈಸೂರು: ವಿದ್ಯಾರ್ಥಿಗಳಿಗೆ ಅವಕಾಶ ಸಿಗಬೇಕು ಎಂಬುದು ಹಲವರ ಅಭಿಪ್ರಾಯವಾಗಿದೆ. ಆದರೆ ಅದಕ್ಕೆ ಆದಂತಹ ಕಾಲ ಕೂಡಿ ಬರಬೇಕು. ಸೂಕ್ತವಾದ ಕಾಲ ಬರಬೇಕು ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು ಶಾಲೆಗೆ ಹೋಗಬೇಕಾದಂತಹ ಪರಿಸ್ಥಿತಿ ನಿರ್ಮಾಣವಾದಾಗ ಎಲ್ಲರ ಸಲಹೆ ಪಡೆಯುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬೇರೆ ಬೇರೆ ಕ್ಷೇತ್ರಗಳ ತಜ್ಞರ ಸಲಹೆ ಪಡೆಯುತ್ತೇವೆ. ಸಮಾಜದ ಹಿತದೃಷ್ಟಿಯಿಂದ ಯಾವ ಕಾಲಕ್ಕೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ. ಜನರ ಕಲ್ಯಾಣಕ್ಕಾಗಿ ಸರ್ಕಾರ ಸೂಕ್ತ ರೀತಿಯಲ್ಲಿ ತೀರ್ಮಾನ ಮಾಡಲಿದೆ ಎಂದರು.
ನಾವು ಶಾಲೆಗಳನ್ನು ತೆರೆಯುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಈ ದಿಕ್ಕಿನಲ್ಲಿ ಸಾಗಬೇಕೆಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಡಿಸಿಎಂ
ಶ್ರೀಗಳ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಶ್ರೀಗಳ ಸಹಕಾರ ಕೇಳಿದೆ. ಉತ್ತಮ ಭವಿಷ್ಯ ರೂಪಿಸಲು ಹಲವು ಸಲಹೆ ನೀಡಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಸುಧಾರಣೆ, ಕೋವಿಡ್ ನಿಯಂತ್ರಣ ಕುರಿತು ಚರ್ಚಿಸಲಾಯಿತು. ಉತ್ತಮ ಆರೋಗ್ಯ ಸೇವೆ ಒದಗಿಸುವುದು ಶ್ರೀಗಳ ಇಚ್ಛೆಯಾಗಿದೆ. ಆಕ್ಸಿಜನ್ ಉತ್ಪಾದನೆ, ಐಸಿಯು ಸೇರಿದಂತೆ ಹಲವು ವಿಚಾರ ಚರ್ಚೆ ಮಾಡಲಾಯಿತು. ಗ್ರಾಮೀಣ ಮಟ್ಟದಲ್ಲಿ ಆರೋಗ್ಯ ಸೌಲಭ್ಯ ಕಲ್ಪಿಸಬೇಕೆಂಬ ಅಪೇಕ್ಷೆ ಶ್ರೀಗಳಿಗಿದೆ. ಸರ್ಕಾರ ಕೂಡ ಕೋವಿಡ್ ವಿಚಾರದಲ್ಲಿ ಹೆಚ್ಚಿನ ಕೆಲಸ ಮಾಡಿದೆ ಎಂದರು.
ಎಸ್‌ಎಸ್‌ಎಲ್ ಸಿ ಪರೀಕ್ಷೆ ಬಗ್ಗೆ ಕೆಲವರ ಆತಂಕ ವಿಚಾರವಾಗಿ ಮಾತನಾಡಿದ ಡಿಸಿಎಂ, ಈಗಲೇ ಏನು ಪರೀಕ್ಷೆ ನಡೆಯುತ್ತಿಲ್ಲವಲ್ಲಾ. ಜುಲೈನಲ್ಲಿ ಪರೀಕ್ಷೆಗಳು ನಡೆಯಲಿದೆ. ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಸೂಕ್ತವಾದ ಕಾಲ ಆಗಿರುವ ಕಾರಣ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ನಿರ್ಧಾರವಾಗಿದೆ. ಎಲ್ಲದಕ್ಕೂ ಅವಕಾಶ ನೀಡಲಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಬೇರೆ ಬೇರೆ ತರಗತಿಗಳಿಗೆ ಹೋಗಬೇಕಾಗುತ್ತೆ. ಹಾಗಾಗಿ ಈಗ ಪರೀಕ್ಷೆ ನಡೆಸಲು ಸೂಕ್ತವಾಗಿದೆ ಎಂದು ಸಮರ್ಥನೆ ನೀಡಿದರು.
ಇದನ್ನೂ ಓದಿ: ರಾಜ್ಯದಲ್ಲಿ ಈಗಲೂ ಐದು ಲಕ್ಷ ಕೋವಿಡ್ ಲಸಿಕೆ ದಾಸ್ತಾನಿದೆ: ಸಚಿವ ಸುಧಾಕರ್
ಸುತ್ತೂರು ಮಠ ರಾಜಕಾರಣಿಗಳ ಕೇಂದ್ರವಾಗಿದೆ ಎಂಬ ಮಾತುಗಳ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರೂ ಎಲ್ಲಾ ಕಾಲದಲ್ಲೂ ನಾಡಿನ ಸ್ವಾಮೀಜಿಗಳ ಸಂಪರ್ಕದಲ್ಲಿದ್ದಾರೆ. ಎಲ್ಲಾ ಪಕ್ಷಗಳ ನಾಯಕರೂ ಸುತ್ತೂರು ಶ್ರೀಗಳ ಜೊತೆ ಸಂಪರ್ಕ ಹೊಂದಿದ್ದಾರೆ. ಕ್ಷೇತ್ರಗಳಿಂದ ಬಂದು ಶ್ರೀಗಳ ಜೊತೆ ಚರ್ಚೆ ನಡೆಯುತ್ತಿದೆ. ಶ್ರೀಗಳ ಜೊತೆಗಿನ ಚರ್ಚೆಯಿಂದ ಮನಸ್ಸಿಗೆ ಸಮಾಧಾನ ಸಿಗಲಿದೆ. ನಾನು ಶಿಕ್ಷಣ ಕ್ಷೇತ್ರದ ಬಗ್ಗೆ ಚರ್ಚಿಸಲು ಆಗಮಿಸಿದ್ದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದರು.
ಅನ್ ಲಾಕ್ ಬಗ್ಗೆ ಸಿಎಂ ನಿರ್ಧಾರ: ಮತ್ತೊಂದು ಹಂತದ ಅನ್ ಲಾಕ್ ವಿಚಾರವಾಗಿ ಮಾತನಾಡಿದ ಡಿಸಿಎಂ ಜುಲೈ 5ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಂದು ಯಾವ ಯಾವ ಕ್ಷೇತ್ರಕ್ಕೆ ಅವಕಾಶ ಕೊಡಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ. ಮುಂದೆ ಏನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಚಿತ್ರಮಂದಿರ ಸೇರಿದಂತೆ ಬೇರೆ ಕ್ಷೇತ್ರಗಳಿಗೆ ಅವಕಾಶ ನೀಡುವ ಬಗ್ಗೆ ಜುಲೈ 5ರಂದು ತೀರ್ಮಾನವಾಗಲಿದೆ. ತಜ್ಞರೆಲ್ಲರ ಸಲಹೆ ಪಡೆದ ಬಳಿಕ ಸಿಎಂ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.