ತೆನೆಹೊತ್ತ ಮಹಿಳೆ ಬೆಂಬಲಿಗರದೇ ಪ್ರಾಬಲ್ಯ
Team Udayavani, Jan 19, 2017, 12:29 PM IST
ಮೈಸೂರು: ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಚುನಾವಣೆಯಲ್ಲಿ ಮೈಸೂರು ತಾಲೂಕಿನಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಪ್ರಾಬಲ್ಯ ಮರೆದಿದ್ದು, ತಾಲೂಕಿನ 14 ಸ್ಥಾನಗಳ ಪೈಕಿ 7ರಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ತಾಲೂಕಿನ 14 ಸ್ಥಾನಗಳ ಪೈಕಿ ಕೃಷಿ ಸಹಕಾರ ಸಂಸ್ಕರಣ ಸಂಘಗಳ(ಹಾಪ್‌ಕಾಮ್ಸ್) ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೊಸಹುಂಡಿ ರಘು ಅವಿರೋಧವಾಗಿ ಆಯ್ಕೆಯಾಗಿದ್ದರು. ಹೀಗಾಗಿ ಉಳಿದ 13 ಸ್ಥಾನಗಳಿಗೆ ಜ.16ರಂದು ನಡೆದಿದ್ದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನಗಳಲ್ಲಿ ಗೆಲುವಿನ ನಗೆಬೀರಿದ್ದಾರೆ. ಉಳಿದಂತೆ ಕಾಂಗ್ರೆಸ್ 5 ಹಾಗೂ 1 ಸ್ಥಾನಕ್ಕೆ ಯಾವುದೇ ಪಕ್ಷದ ಬೆಂಬಲಿತರಲ್ಲದ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ. ಇದರಿಂದಾಗಿ ತಾಲೂಕಿನ 14 ಸ್ಥಾನಗಳಲ್ಲಿ ಜೆಡಿಎಸ್ 7, ಕಾಂಗ್ರೆಸ್ 6 ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿ ಚುನಾಯಿತರಾಗಿದ್ದು, ತಾಲೂಕಿನಲ್ಲಿ ಒಂದು ಸ್ಥಾನವನ್ನೂ ಪಡೆಯದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.
ವಿಜೇತ ಅಭ್ಯರ್ಥಿಗಳು: ತಾಲೂಕಿನ 14 ಎಪಿಎಂಸಿ ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಎಚ್.ಎಸ್.ನಾಗರಾಜು, ಬಿ.ಗೌರಿ ಬೋರಪ್ಪ, ಎಸ್.ಸಿದ್ದೇಗೌಡ, ಎಂ.ನಾಗರಾಜು, ಎಂ.ಮಹದೇವ, ಕೆ.ಚಿಕ್ಕಜವರಯ್ಯ, ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಸಂಘಗಳ ಕ್ಷೇತ್ರದಿಂದ(ಟಿಎಪಿಸಿಎಂಎಸ್) ಸಿ.ಮಹೇಶ್ ಆಯ್ಕೆಯಾಗಿದ್ದಾರೆ. ಇನ್ನೂ ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ ಕೆ.ಪ್ರಭುಸ್ವಾಮಿ, ಸಾವಿತ್ರಮ್ಮ, ಎಂ.ಕೆ.ಆನಂದ್, ಪಿ.ಬಸವರಾಜು, ಬಸವರಾಜು ಹಾಗೂ ಅವಿರೋಧವಾಗಿ ಆಯ್ಕೆಯಾಗಿದ್ದ ಹೊಸಹುಂಡಿ ರಘು ಗೆಲುವು ಸಾಧಿಸಿದ್ದಾರೆ. ಇವರೊಂದಿಗೆ ಕಮಿಷನ್ ಎಜೆಂಟರುಗಳ ಮತ್ತು ವ್ಯಾಪಾರಿಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್.ಪ್ರಕಾಶ್ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಮೇಲುಗೈ: ತಾಲೂಕಿನಲ್ಲಿ ಮೇಲ್ನೋಟಕ್ಕೆ ಈ ಬಾರಿಯ ಎಪಿಎಂಸಿ ಚುನಾವಣೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ನೇರ ಹಣಾಹಣಿಯೆಂದೇ ಪರಿಗಣಿಸಲಾಗಿತ್ತು. ತಾಲೂಕಿನ 14 ಸ್ಥಾನಗಳಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿನಿಧಿಸುವ ಚಾಮುಂಡೇಶ್ವರಿ(8) ಹಾಗೂ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿರುವ ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿ(3) ಸ್ಥಾನಗಳನ್ನು ಒಳಗೊಂಡಿತ್ತು.
ಈ ಕಾರಣದಿಂದಲೇ ಎರಡೂ ಪಕ್ಷದ ಮುಖಂಡರಿಗೂ ಈ ಚುನಾವಣೆ ಪ್ರತಿಷ್ಠೆಯಾಗಿದ್ದ ಹಿನ್ನೆಲ್ಲೆಯಲ್ಲಿ ಉಭಯ ಪಕ್ಷಗಳ ಮುಖಂಡರು ಚುನಾವಣೆಯಲ್ಲಿ ಮೇಲುಗೈ ಸಾಧಿಸಲು ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ದರು. ಆದರೂ ಈ ಎರಡೂ ಕ್ಷೇತ್ರ ವ್ಯಾಪ್ತಿಯ 11 ಸ್ಥಾನಗಳಲ್ಲಿ ಕಾಂಗ್ರೆಸ್‌ಗಿಂತಲೂ ಒಂದು ಸ್ಥಾನ ಹೆಚ್ಚಾಗಿ ಪಡೆಯುವ ಮೂಲಕ ಜೆಡಿಎಸ್ ಮೇಲುಗೈ ಸಾಧಿಸಿದೆ. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ 8 ಕ್ಷೇತ್ರಗಳಲ್ಲಿ ಜೆಡಿಎಸ್ 6 ಹಾಗೂ ಕಾಂಗ್ರೆಸ್ 2 ಸ್ಥಾನ ಪಡೆದಿದ್ದು, ವರುಣಾ ಕ್ಷೇತ್ರದ 3 ಸ್ಥಾನಗಳನ್ನು ಕಾಂಗ್ರೆಸ್ ಕೈವಶ ಮಾಡಿಕೊಂಡು ಗಮನ ಸೆಳೆದಿದೆ.
ಕಾರ್ಯಕರ್ತರ ಸಂಭ್ರಮ: ತಾಲೂಕು ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಜರ್‌ಬಾದ್‌ನ ಪೀಪಲ್ಸ್‌ಪಾರ್ಕ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ 8ಕ್ಕೆ ಆರಂಭಗೊಂಡ ಮತಎಣಿಕೆ ಪ್ರಕ್ರಿಯೆ ಎಣಿಕೆ ಆರಂಭಕ್ಕೂ ಮೊದಲೇ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದತ್ತ ಆಗಮಿಸಿದ್ದರು. 14 ಕ್ಷೇತ್ರಗಳಲ್ಲಿ ಪೈಕಿ ಪ್ರತಿಯೊಂದು ಕ್ಷೇತ್ರದ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ವಿಜೇತ ಅಭ್ಯರ್ಥಿಗಳ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದರು. ಅಲ್ಲದೆ ಪಕ್ಷದ ಮುಖಂಡರ ಹೆಸರನ್ನು ಕೂಗುತ್ತಾ, ಜೈಕಾರ ಹಾಕುವ ಮೂಲಕ ಗೆಲುವಿನ ಸಂಭ್ರಮಾಚರಣೆ ಮಾಡಿದರು.
ಸಿಎಂ ಸೋದರನ ಅಳಿಯನಿಗೆ ಗೆಲುವು
ಮೈಸೂರು ತಾಲೂಕು ಎಪಿಎಂಸಿ ಚುನಾವಣೆಗೆ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹೋದರನ ಅಳಿಯ ಪಿ.ಬಸವರಾಜು 53 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ತಾಲೂಕಿನ ಯಡಕೊಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಸವರಾಜು ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೆ.ಎಸ್.ಮಾದಪ್ಪ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದರು. ಪಿ.ಬಸವರಾಜು(1687 ಮತ) ಹಾಗೂ ಬಿಜೆಪಿ ಬೆಂಬಲಿತ ಕೆ.ಎಸ್.ಮಾದಪ್ಪ (1634 ಮತ) ಪಡೆದರು.
ವಿಜೇತ ಅಭ್ಯರ್ಥಿ ಬಸವರಾಜು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡರ ಪುತ್ರಿಯನ್ನು ವಿವಾಹವಾಗಿದ್ದು, ಸ್ವಗ್ರಾಮ ದವರೇ ಆಗಿದ್ದಾರೆ. ಸ್ಥಳೀಯ ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರಾಗಿರುವ ಇವರು ಇದೀಗ ಎಪಿಎಂಸಿ ಚುನಾವಣೆಯಲ್ಲೂ ಗೆಲುವು ಕಂಡಿದ್ದಾರೆ. ಇನ್ನೊಂದೆಡೆ ಶ್ರೀರಾಂಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸಿ.ಎನ್.ಮಂಜೇಗೌಡರ ಪುತ್ರ ಎಂ.ಭರತ್ ಜೆಡಿಎಸ್ ಅಭ್ಯರ್ಥಿ ಎದುರು 500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತು ಮುಖಭಂಗ ಅನುಭವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.