ಕಂದಕಕ್ಕೆ ಬಿದ್ದು ಕಾಡಾನೆ ಸಾವು
Team Udayavani, May 4, 2018, 12:26 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಿಂದ ಆಹಾರ ಅರಸುತ್ತಾ ಬಂದಿದ್ದ ಕಾಡಾನೆಯೊಂದು ಇಲಾಖೆ ತೋಡಿದ್ದ ಕಂದಕದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ದಮ್ಮನಕಟ್ಟೆ ಹಾಡಿಯ ಬಳಿಯಲ್ಲಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಡಿ.ಬಿ.ಕುಪ್ಪೆ ವಲಯಕ್ಕೆ ಸೇರಿದ ದಮ್ಮನಕಟ್ಟೆ ಹಾಡಿಬಳಿಯ ಕಂದಕದಲ್ಲಿ ಆನೆ ಸಿಲುಕಿ ಸಾವನ್ನಪ್ಪಿದೆ. ಸುಮಾರು 60-65 ವರ್ಷದ ಇಳಿ ವಯಸ್ಸಿನ ಆನೆಯು ಕಂದಕ ಇಳಿದು ಕಾಡು ಸೇರಲು ದಾಟುತ್ತಿದ್ದ ವೇಳೆ ಆಯತಪ್ಪಿ ಬಿದ್ದು,
ಉದ್ದನೆ ಎರಡು ದಂತಗಳು ನೆಲಕ್ಕೆ ಹೂತುಕೊಂಡು, ಕಾಲುಗಳು ಸಿಲುಕಿಕೊಂಡಿದ್ದರಿಂದಾಗಿ ಮೇಲೇಳಲಾಗದೆ ಹೃದಯಾಘಾತವಾಗಿ ಮೃತಪಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಅಪರ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಜಗತ್‌ರಾಂ, ಎಸಿಎಫ್ ಪೂವಯ್ಯ ಪರಿಶೀಲಿಸಿದರು. ಆರ್‌ಎಫ್ಒಗಳಾದ ವಿನಯ್ ಹಾಗೂ ಸುಬ್ರಹ್ಮಣ್ಯ ಇದ್ದರು.
ಆನೆ ಸಾವನ್ನಪ್ಪಿದ ವಿಷಯ ಹರಡುತ್ತಿದ್ದಂತೆ ಹಾಡಿ ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಜೆಸಿಬಿ ಮೂಲಕ ಆನೆಯನ್ನು ಕಂದಕದಿಂದ ಮೇಲೆತ್ತಲಾಯಿತು. ಗ್ರಾಮಸ್ಥರ ಮನವಿ ಮೇರೆಗೆ ಮಂಜೇಗೌಡರು ಸಲಗಕ್ಕೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದರು. ಪಶು ವೈದ್ಯ ಡಾ.ಮುಜೀಬ್ ರೆಹಮಾನ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ದೂರದ ಕಾಡಿನೊಳಗೆ ಸುಟ್ಟು ಹಾಕಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.