ಸಾವಿನ ಸಂಖ್ಯೆ 15ಕ್ಕೆ ಏರಿಕೆ, 24 ಮಂದಿ ಗಂಭೀರ
Team Udayavani, Dec 19, 2018, 11:43 AM IST
ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ಬೆಟ್ಟದ ನಿವಾಸಿ ದುಂಡಮ್ಮ (50) ಮಂಗಳವಾರ ಬೆಳಗ್ಗೆ ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದರು.
ಡಿ.14ರ ಶುಕ್ರವಾರ ದೇವಸ್ಥಾನದ ಗೋಪುರ ಶಂಕುಸ್ಥಾಪನಾ ಕಾರ್ಯಕ್ರಮದ ನಂತರ ನೀಡಲಾದ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದ ದುಂಡಮ್ಮ ಅವರನ್ನು ಆ್ಯಂಬುಲೆನ್ಸ್ನಲ್ಲಿ ಮೈಸೂರಿಗೆ ಕರೆತಂದು ಕೆ.ಆರ್.ಆಸ್ಪತ್ರೆಯಲ್ಲಿ ನೋಂದಾಯಿಸಿದ ನಂತರ ವೈದ್ಯರ ಸೂಚನೆ ಮೇರೆಗೆ ನಗರದ ಕಾವೇರಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಕೊನೆ ಉಸಿರೆಳೆದಿದ್ದಾರೆ.ಮಲೆ ಮಹದೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ದುಂಡಮ್ಮ, ಮಗಳನ್ನು ನೋಡಲು ಎರಡು ದಿನ ರಜೆ ಹಾಕಿ ಹನೂರು ತಾಲೂಕಿನ ಮಾರ್ಟಳ್ಳಿಗೆ ಬಂದಿದ್ದರು.
ಶುಕ್ರವಾರ ಕಿಚ್ಗುತ್ ಮಾರಮ್ಮ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ, ದೇವಿಯ ಪೂಜಾ ಕಾರ್ಯದಲ್ಲಿ ಭಾಗಿಯಾಗಿ ಬರುವುದಾಗಿ ಹೇಳಿ ಹೋದವರು, ಪೂಜೆ ಸಲ್ಲಿಸಿದ ನಂತರ ದೇವಸ್ಥಾನದಲ್ಲಿ ಪ್ರಸಾದ ರೂಪದಲ್ಲಿ ನೀಡಲಾದ ವೆಜಿಟೇಬಲ್ ಬಾತ್ ಸೇವಿಸಿ, ಮನೆಗೂ ಪ್ರಸಾದ ತಂದಿದ್ದರು.
ಆದರೆ, ದುಂಡಮ್ಮ ದೇವಸ್ಥಾನದಿಂದ ಮನೆಗೆ ಬರುತ್ತಿದ್ದಂತೆ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿ ಕುಸಿದು ಬಿದ್ದರು. ಹೀಗಾಗಿ ಪ್ರಸಾದ ತಂದಿದ್ದ ಎಲೆ ಕೈ ಜಾರಿ ಬಿದ್ದಿದ್ದರಿಂದ ಮನೆಯವರು ವಿಷ ಪ್ರಸಾದ ಸೇವಿಸುವುದು ತಪ್ಪಿತು. ಅಸ್ವಸ್ಥರಾಗಿ ಕುಸಿದು ಬಿದ್ದ ದುಂಡಮ್ಮ ಅವರಿಗೆ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಆ್ಯಂಬುಲೆನ್ಸ್ನಲ್ಲಿ ಮೈಸೂರಿಗೆ ಕರೆತಂದು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದುಂಡಮ್ಮ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಒಂದೆರಡು ದಿನಗಳಲ್ಲಿ ಚೇತರಿಸಿಕೊಳ್ಳಲಿದ್ದಾರೆ. ಹೀಗಾಗಿ ಎರಡು ದಿನಗಳ ನಂತರ ಅವರನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ತಿಳಿಸಿದ್ದರು. ಆದರೆ, ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಶವಾಗಾರದ ಬಳಿ ದುಂಡಮ್ಮನ ಹೆಣ್ಣು ಮಕ್ಕಳು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
24 ಮಂದಿ ಚಿಂತಾಜನಕ: ಮೈಸೂರಿನ ವಿವಿಧ 11 ಆಸ್ಪತ್ರೆಗಳಲ್ಲಿ 101 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 24 ಮಂದಿಯ ಸ್ಥಿತಿ ಇನ್ನೂ ಗಂಭೀರವಾಗಿದೆ. ಚೇತರಿಸಿಕೊಂಡಿರುವ ಕೆಲವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.