ಚರ್ಚ್‌ಗಳಿಗೆ ಬಿಷಪ್‌ ಬರೆದ ಪತ್ರದ ಬಗ್ಗೆ ಧರ್ಮಸಂಸದ್‌ನಲ್ಲಿ ಚರ್ಚೆ

Team Udayavani, Nov 26, 2017, 11:18 AM IST

devegowda.jpg

ರಾಷ್ಟ್ರಕವಿ ಕುವೆಂಪು ಪ್ರಧಾನ ವೇದಿಕೆ(ಮೈಸೂರು): “ನಾಡಿನ ನೆಲ-ಜಲ-ಭಾಷೆ ವಿಷಯದಲ್ಲಿ ಯುವಜನರು ಹೋರಾಟ ನಡೆಸಬೇಕಾದ ಅಗತ್ಯವಿದೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ, ಕಾವೇರಿ ನದಿ ನೀರು ಹಂಚಿಕೆ, ಮಹದಾಯಿ ವಿಚಾರವಾಗಿ ಅನೇಕ ಸಂಘಸಂಸ್ಥೆಗಳು ಹೋರಾಟ ನಡೆಸುತ್ತಿವೆ. ಇಂತಹ ಹೋರಾಟಗಳನ್ನು ಮುಂದುವರಿಸಬೇಕು. ಆದರೆ, ಯಾವುದೇ ಹೋರಾಟವು ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳದೆ ಅಹಿಂಸಾತ್ಮಕವಾಗಿರಬೇಕು ಎಂದು ಕಿವಿಮಾತು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ರಾಜಕಾರಣ ಬಿಟ್ಟು ಕೆಲಸ ಮಾಡುವುದು ಕಷ್ಟ. ಅವರ ಬಾಹುಗಳು ಎಲ್ಲ ಕಡೆಗಳಲ್ಲಿ ಚಾಚಿವೆ ಎಂದರು. ಕರ್ನಾಟಕಕ್ಕೆ ಒಂದು ರಾಜಕೀಯ ಪಕ್ಷ ಅಗತ್ಯ ಎಂಬುದನ್ನು ಚಂಪಾ ಅವರೇ ಹೇಳಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದ ಅವರು, ದೇಶದಲ್ಲಿ ಇತ್ತೀಚಿನ ಘಟನಾವಳಿಗಳನ್ನು ಕಂಡರೆ ನೋವಾಗುತ್ತದೆ.

ಗುಜರಾತ್‌ನ ಬಿಷಪ್‌ ಒಬ್ಬರು ಮುಂಬರುವ ಚುನಾವಣೆಯಲ್ಲಿ ಜಾತ್ಯತೀತ ಪಕ್ಷವನ್ನು ಬೆಂಬಲಿಸಿ ಎಂದು ಅಲ್ಲಿನ ಚರ್ಚ್‌ಗಳಿಗೆ ಬರೆದ ಪತ್ರದ ಬಗ್ಗೆ ಇಲ್ಲಿ ನಡೆಯುವ ಧರ್ಮ ಸಂಸದ್‌ನಲ್ಲಿ ಪೇಜಾವರ ಶ್ರೀಗಳು ಪ್ರಸ್ತಾಪಿಸುತ್ತಾರೆ. ಆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತದೆ. ಬಿಷಪ್‌ ತನ್ನ ಅಭಿಪ್ರಾಯವನ್ನು ಹೇಳಲೂ ಅವಕಾಶವಿಲ್ಲವೇ? ಅಂಬೇಡ್ಕರ್‌ ಸಂವಿಧಾನದಲ್ಲಿ ವಾಕ್‌ ಸ್ವಾತಂತ್ರ ಕಲ್ಪಿಸಿಲ್ಲವೇ ಎಂದು ಪ್ರಶ್ನಿಸಿದರು.

ಒಂದು ಕಡೆ ಧರ್ಮಗಳ ನಡುವೆ ಹೊಡೆದಾಟ ನಡೆಯುತ್ತದೆ. ಅಂಬೇಡ್ಕರ್‌ ಬರೆದಿರುವ ಸಂವಿಧಾನದ ಬಗ್ಗೆ ಹೊಸ ವ್ಯಾಖ್ಯಾನಗಳು ನಡೆಯುತ್ತವೆ. ಅಸ್ಪೃಶ್ಯತೆ ಇರಬಾರದು ಎಂದು ಈಗ ಹೇಳುತ್ತಾರೆ. ಇಂತಹ ಘಟನೆಗಳು ದೇಶಕ್ಕೆ ಅಪಾಯಕಾರಿ ಎಂದು ಹೇಳಿದರು.

ಧಾರ್ಮಿಕತೆ ಎನ್ನುವುದು ಅವರವರ ನಂಬಿಕೆಗೆ ಬಿಟ್ಟದ್ದು, ತಮಿಳುನಾಡಿನಲ್ಲಿ ಪೆರಿಯಾರ್‌ ಧಾರ್ಮಿಕತೆ ವಿರುದ್ಧ ದೊಡ್ಡ ಚಳವಳಿಯನ್ನೇ ಮಾಡಿದ್ದರು, ಇಂದು ತಮಿಳುನಾಡಿನ ಯಾವುದೇ ಕ್ಷೇತ್ರಕ್ಕೆ ಹೋದರೂ ಹತ್ತು ಪಟ್ಟು ಭಕ್ತರ ಸಂಖ್ಯೆ ಹೆಚ್ಚಾಗಿದೆ. ನಾನು ಪ್ರಧಾನಮಂತ್ರಿಯಾಗಿದ್ದಾಗ ತಿರುಪತಿಗೆ ಹೋಗುವುದಕ್ಕೆ ಜ್ಯೋತಿಬಸು ಸೇರಿದಂತೆ ಕಮ್ಯುನಿಷ್ಟ್ ಪಕ್ಷದ ಅನೇಕ ನಾಯಕರು ವಿರೋಧ ವ್ಯಕ್ತಪಡಿಸಿದರು,

ಬೇಕಿದ್ದರೆ ಪ್ರಧಾನಮಂತ್ರಿ ಹುದ್ದೆ ಬಿಡುತ್ತೇನೆ. ಆದರೆ, ನಾನು ನಂಬಿರುವ ಸಿದ್ಧಾಂತ ಬಿಡುವುದಿಲ್ಲ ಎಂದು ತಿರುಪತಿಗೆ ಹೋಗಿದ್ದೆ ಎಂದು ಸ್ಮರಿಸಿದರು. ಸಾಹಿತಿ ಗೊ.ರು.ಚನ್ನಬಸಪ್ಪ ಆಶಯ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ 80ಕ್ಕೂ ಹೆಚ್ಚು ಮಂದಿಗೆ ಸನ್ಮಾನ ಮಾಡಲಾಯಿತು.

ಟಾಪ್ ನ್ಯೂಸ್

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

KSRT

ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

KSRT

ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Kundapura: ಗೋಸಾಗಾಟ ತಡೆದ ಸಿಸಿಟಿವಿ ವೀಕ್ಷಣೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.