ಸಾಲ ಮನ್ನಾಕ್ಕೆ ಇನ್ನೂ ಸ್ಪಷ್ಟತೆ ಇಲ್ಲ


Team Udayavani, Aug 6, 2018, 12:39 PM IST

m3-salamanna.jpg

ಮೈಸೂರು: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ತಿಂಗಳಾದರೂ ಕುಮಾರಸ್ವಾಮಿ ಘೋಷಣೆ ಮಾಡಿದ್ದ ಸಾಲ ಮನ್ನಾಕ್ಕೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದರು. 

ನಗರದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ನಗರ ಹಾಗೂ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು,  ಇನ್ನು ಸಾಲ ಮನ್ನಾ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿ  ಕುಮಾರಸ್ವಾಮಿ, ರಾಷ್ಟ್ರೀಕೃತ ಬ್ಯಾಂಕ್‌ಗಳು, ಆರ್‌ಬಿಐ ಸಮ್ಮತಿ ಇಲ್ಲದೆ ಘೋಷಣೆ ಮಾಡಿದರು.

ಆದರೆ ಈವರೆಗೂ ಸಾಲಮನ್ನಾ ಮಾಡಿರುವ ಬಗ್ಗೆ ಯಾವ ಸ್ಪಷ್ಟತೆ ಇಲ್ಲ. ಸಿಎಂ ಅವರ ಈ ನಿರ್ಧಾರದಿಂದ ಸಹಕಾರ ಬ್ಯಾಂಕ್‌ಗಳು ದಿವಾಳಿಯಾಗುತ್ತಿದ್ದು, ಸಾಲಮನ್ನಾ ಮಾಡಿದ್ದಾರೆಂದು ರೈತರಲ್ಲಿ ಭ್ರಮೆ ಮೂಡಿಸುವ ವಿಚಿತ್ರ ಸನ್ನಿವೇಶದಲ್ಲಿ ಸಿಲುಕುವಂತೆ ಮಾಡಿದೆ ಎಂದು ಟೀಕಿಸಿದರು. 

ಪಾಲಿಕೆಯತ್ತ ಗಮನಹರಿಸಿ: ಮುಂದಿನ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರ ಹಿಡಿಯಬೇಕಿದೆ. ಪಾಲಿಕೆ ಅಧಿಕಾರ ಹಿಡಿಯುವುದು ಮುಖ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡ, ಹಿಂದುಳಿದ ವರ್ಗದವರನ್ನು ಗುರುತಿಸಿ ಅವರನ್ನು ಮುಂದೆ ತರಬೇಕಿದೆ.

ಇದಕ್ಕಾಗಿ ಪಕ್ಷ ಸಂಘಟನೆಯಲ್ಲಿ ಅವಕಾಶಕೊಟ್ಟರೆ ಅನುಕೂಲವಾಗುತ್ತದೆ. ಇದಕ್ಕಾಗಿ ಎಲ್ಲಾ ಮೋರ್ಚಾ ಪದಾಧಿಕಾರಿಗಳು ಹೆಚ್ಚು ಒತ್ತು ನೀಡಿ ಕೆಲಸ ಮಾಡಬೇಕು. ಮೈಸೂರಿನಲ್ಲಿ ಸಂಸದರು, ಇಬ್ಬರು ಶಾಸಕರಿರುವ ಕಾರಣ ಈ ಬಾರಿ ಅಧಿಕಾರ ಪಡೆದು, ಬಿಜೆಪಿ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದರು. 

ಕಾರ್ಯಕಾರಿಣಿ ಸಭೆಯಲ್ಲಿ ಮೈಸೂರು ನಗರದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮೂರು ಕ್ಷೇತ್ರದ ಅಧ್ಯಕ್ಷರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಂಸದ ಪ್ರತಾಪಸಿಂಹ, ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌, ಶಾಸಕರಾದ ರಾಮದಾಸ್‌, ನಾಗೇಂದ್ರ, ರಾಜ್ಯ ಕಾರ್ಯದರ್ಶಿ ರಾಜೇಂದ್ರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.