ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ
Team Udayavani, Mar 3, 2019, 7:47 AM IST
ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ವಾರದೊಳಗೆ ಅಭ್ಯರ್ಥಿ ಘೋಷಣೆ: ಇನ್ನೊಂದು ವಾರದೊಳಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಹೇಳಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರದ ದುಡಾಳಿತದಿಂದ ಜನತೆ ಬೇಸತ್ತಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳುತ್ತಲೇ ಬಂದಿದ್ದರೂ ಈವರೆಗೆ ಯಾವ ರೈತರಿಗೂ ಅದರ ಪ್ರಯೋಜನ ದೊರೆತಿಲ್ಲ ಎಂದು ಕಿಡಿಕಾರಿದರು.
ಮೈತ್ರಿ ನಾಯಕರ ಕಚ್ಚಾಟ: ಜೆಡಿಎಸ್-ಕಾಂಗ್ರೆಸ್ ನಡುವೆ ಹೊಂದಾಣಿಕೆ ಇಲ್ಲದೆ ಎರಡೂ ಪಕ್ಷಗಳ ಮಂತ್ರಿಗಳು ವ್ಯತಿರಿಕ್ತ ಹೇಳಿಕೆಗಳನ್ನು ನೀಡಿ ಕಚ್ಚಾಡುತ್ತಿದ್ದಾರೆ. ಹೀಗಾಗಿ ರಾಜ್ಯದ ಜನತೆ ಬಿಜೆಪಿ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದು, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳದೆ ಜನತೆ ಅನ್ಯಾಯ ಮಾಡಿದೆ. ಜೊತೆಗೆ ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಬಗ್ಗೆ ರಾಜ್ಯದ ಜನರಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.