ದೀಪಕ್ ರಾವ್ ಕೊಲೆಗೆ ಬಿಜೆಪಿ ಕಾರ್ಪೋರೇಟರ್ ಕಾರಣ: ಎಚ್‌ಡಿಕೆ ಆರೋಪ
Team Udayavani, Jan 9, 2018, 6:45 AM IST
ಮೈಸೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕಾರ್ಪೋರೇಟರ್ ಭಾಗಿ ಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ
ನಾಲ್ವರನ್ನು ಬಂಧಿಸಲಾಗಿದೆ. ದೀಪಕ್ ಕೊಲೆಗೆ ಬಿಜೆಪಿ ನಾಯಕರೇ ಕಾರಣರೆಂಬ ಮಾಹಿತಿ ತಮಗಿದೆ. ಆದರೆ, ಕೊಲೆಗೆ ಕಾರಣರ್ಯಾರು? ಪ್ರೇರೇಪಿಸಿದವರು ಯಾರು? ಎಂಬ ಮಾಹಿತಿಯನ್ನು ಸರ್ಕಾರ ಏಕೆ ಬಹಿರಂಗಪಡಿಸುತ್ತಿಲ್ಲ? ಯಾರನ್ನು ರಕ್ಷಣೆ ಮಾಡಲು ಹೊರಟಿದೆ ಈ ಸರ್ಕಾರ? ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಒಪ್ಪಂದ ಮಾಡಿಕೊಂಡಿದ್ದಾರಾ ಎಂದು ಕಿಡಿಕಾರಿದ ಕುಮಾರ ಸ್ವಾಮಿ, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆ ಸೇರಿ ಎಲ್ಲ ಪ್ರಕರಣಗಳಲ್ಲಿ ಸರ್ಕಾರದ ವೈಫಲ್ಯತೆ ಎದ್ದು ಕಾಣುತ್ತಿದೆ. ಹಂತಕರ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸುತ್ತೇವೆಂದು ಎಷ್ಟು ಬಾರಿ ಹೇಳುತ್ತೀರಿ ಎಂದು ಪ್ರಶ್ನಿಸಿದರು.
ತುಪ್ಪ ಸುರಿಯಲ್ಲ: ವಾತಾವರಣ ತಿಳಿಗೊಂಡು ಶಾಂತಿ ನೆಲೆಗೊಳ್ಳಲಿ ಎಂದು ಮಂಗಳವಾರ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸೌಹಾರ್ದ ಸಭೆಯನ್ನು ಮುಂದೂಡಿದ್ದೇವೆ. ಬೆಂದ ಮನೆಯಲ್ಲಿ ಗಳ ಹಿರಿಯುವ, ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುವುದಿಲ್ಲ. ಜೆಡಿಎಸ್ ಪಕ್ಷ ಹಿಂದೂಗಳ ಪರ, ಮುಸ್ಲಿಮರ ಪರ ಅಂತಲ್ಲ. ನಾವು ರಾಜ್ಯದ ಆರೂವರೆ ಕೋಟಿ ಜನರ ಪರ. ಚುನಾವಣೆಗಾಗಿ ನಾವು ಜಾತಿ, ಧರ್ಮವನ್ನು ಒಡೆಯುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.