ಜಿಂಕೆ ಚರ್ಮ ಮಾರಾಟ: ವ್ಯಕ್ತಿ ಸೆರೆ

Team Udayavani, Mar 21, 2019, 10:37 AM IST

mys-2.jpg

ಎಚ್‌.ಡಿ.ಕೋಟೆ: ಜಿಂಕೆ ಚರ್ಮ ಮಾರಾಟ ಮಾಡಲು ಮುಂದಾಗಿದ್ದ ವ್ಯಕ್ತಿಯೋರ್ವನನ್ನು ಕೊಡಗು ಜಿಲ್ಲೆ ವಿರಾಜಪೇಟೆ ಅರಣ್ಯ ಸಂಚಾರಿ ದಳ ಮತ್ತು ಮೈಸೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಕಾರಾಪುರ ಗ್ರಾಮದ ಶ್ರೀನಿವಾಸ(27) ಬಂಧಿತ ಆರೋಪಿಯಾಗಿದ್ದು, ಮತ್ತೋರ್ವ ಆರೋಪಿ ತಾಲೂಕಿನ ಕೆ.ಎಡತೋರೆ ಗ್ರಾಮದ ಪ್ರಸನ್ನ ತಲೆಮರೆಸಿಕೊಂಡಿದ್ದಾನೆ.

ಘಟನೆ ವಿವರ: ತಾಲೂಕಿನ ಕಾರಾಪುರದ ಶ್ರೀನಿವಾಸ ಹಾಗೂ ಆತನ ಭಾಮೈದ ಕೆ.ಎಡತೋರೆ ಗ್ರಾಮದ ಪ್ರಸನ್ನ ಸೇರಿ ತಮ್ಮ ಬಜಾಜ್‌ ಸಿ.ಟಿ.100 ಬೈಕ್‌ನಲ್ಲಿ ಜಿಂಕೆ ಚರ್ಮವನ್ನು ಮಾರಾಟ ಮಾಡಲು ಮುಂದಾಗಿರುವ ಖಚಿತ ಮಾಹಿತಿ ಮೇರೆಗೆ ವೀರಾಜಪೇಟೆ ಅರಣ್ಯ ಸಂಚಾರಿ ದಳ ಹಾಗೂ ಮೈಸೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕೆ.ಎಡತೋರೆ ಗ್ರಾಮದ ದೇವಸ್ಥಾನದ ಬಳಿ ಜಿಂಕೆ ಚರ್ಮ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತೋರ್ವ ಆರೋಪಿ ಪ್ರಸನ್ನ ತಪ್ಪಿಸಿಕೊಂಡಿದ್ದು, ಬಂಧನಕ್ಕೆ ಬಲೆ ಬಿಸಿದ್ದಾರೆ.

ಸೆರೆ ಸಿಕ್ಕ ಆರೋಪಿ ಶ್ರೀನಿವಾಸನನ್ನು ತೀವ್ರ ವಿಚಾರಣೆಗೊಳಪಡಿಸಿದ ನಂತರ ಪಟ್ಟಣದ ಸಿಜೆಎಂಸಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳ ಪಡಿಸಿದ್ದಾರೆ. ಕಾರ್ಯಚರಣೆಯಲ್ಲಿ ವಿರಾಜಪೇಟೆ ಅರಣ್ಯ ಸಂಚಾರಿ ದಳದ ಟಿ.ಪಿ.ಮಂಜುನಾಥ್‌, ಕೆ.ಬಿ.ಸೋಮಣ್ಣ, ಎಂ. ಬಿ. ಗಣೇಶ್‌, ಪಿ.ಬಿ.ಮೊಣ್ಣಪ್ಪ, ಸಿ.ಎಂ.ರೇವಪ್ಪ ಹಾಗೂ ಮೈಸೂರು ಅರಣ್ಯ ಸಂಚಾರಿ ದಳದ ರಮೇಶ್‌, ವೆಂಕಟಚಲಯ್ಯ, ಮಂಜುನಾಥ್‌, ಪ್ರದೀಪ್‌, ಚಲುವರಾಜ್‌, ರಘು, ನರಸಿಂಹಮೂರ್ತಿ ಇದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.