ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಿ
Team Udayavani, May 5, 2017, 12:14 PM IST
ಪಿರಿಯಾಪಟ್ಟಣ: ಕೇಂದ್ರ ಸರಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು ಈ ಮೂಲಕ ಜನರನ್ನು ಆರ್ಥಿಕವಾಗಿ ಶೈಕ್ಷಣಿಕವಾಗಿ ಮೇಲೆತ್ತಬೇಕು ಎಂದು ಸಂಸದ ಪ್ರತಾಪ್‌ಸಿಂಹ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಿ ಮಾತನಾಡಿ, ಕೇಂದ್ರ ಸರಕಾರದ ಈ ಯೋಜನೆಯು ಅಕಾಲಿಕ ಮರಣ ಹೊಂದಿದ್ದ ಕುಟುಂಬಗಳಿಗೆ ಕುಟುಂಬ ಭದ್ರತಾ ಯೋಜನೆಯಡಿ ತಲಾ 20 ಸಾವಿರ ರೂಗಳನ್ನು ನೀಡಲಾಗುತ್ತಿದೆ ಎಂದರು.
ತಾಲೂಕಿನಾದ್ಯಂತ 120 ಜನರನ್ನು ಗುರುತಿಸಲಾಗಿದೆ. ಈ ರೀತಿ ನೋವಿನಲ್ಲಿ ಇರುವ ಕುಟುಂಬಗಳಿಗೆ ಬಿಜೆಪಿ ಕಾರ್ಯ ಕರ್ತರು ಸೇರಿದಂತೆ ಎಲ್ಲರೂ ಕೇಂದ್ರ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರಿಗೆ ಸೌಲಭ್ಯ ಸಿಗುವಂತೆ ಮಾಡಬೇಕು. ಈ ಮೂಲಕ ಸಮಾಜದ ದುರ್ಬಲವರ್ಗದ ಜನರಿಗೆ ಸಹಾಯ ಮಾಡಬೇಕು ಎಂದರು.
ತಾಲೂಕಿನಲ್ಲಿ ತಂಬಾಕು ರೈತರಿಗೆ ಏಕ ಕಾಲದಲ್ಲಿ ಎಲ್ಲಾ ರೀತಿಯ ಗೊಬ್ಬರಗಳನ್ನು ನೀಡುವ ಕ್ರಮ ಕೈಗೊಳ್ಳಲಾಗುತ್ತಿದ್ದು. ಗೊಬ್ಬರ ಔಷಧಿಗಳಿಗಾಗಿ ಮಂಡಳಿಯ ಫ್ಲಾಟ್ ಫಾರಂಗಳಿಗೆ ರೈತರು ಅಲೆಯುವುದನ್ನು ತಪ್ಪಿಸಲು ಮತ್ತು ಅವರಿಗೆ ಇದರಿಂದ ಆಗುತ್ತಿದ್ದ ಸಾಗಾಣಿಕೆಯ ವೆಚ್ಚವನ್ನು ಉಳಿಸಲು ಕಳೆದ ವರ್ಷದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಾರಿಯೂ ರೈತರಿಗೆ ಸಕಾಲಕ್ಕೆ ರಸಗೊಬ್ಬರವನ್ನು ವಿತರಿಸಲಾಗುವುದು ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ವೇಣುಗೋಪಾಲ್, ತಾಪಂ ಇಒ ಕೆ.ಬಸವರಾಜು, ತಹಶೀಲ್ದಾರ್ ಮಹೇಶ್, ಬಿಇಒ ಆರ್.ಕರೀಗೌಡ, ಶಿರಸ್ತೇದಾರ್ ಪ್ರಕಾಶ್, ತಾಲೂಕು ಬಿಜೆಪಿ ಅಧ್ಯಕ್ಷ ಪಿ.ಜೆ ರವಿ, ಮಾಜಿ ಅಧ್ಯಕ್ಷ ಆರ್.ಟಿ.ಸತೀಶ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.