ಪ್ರವಾಹ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ
Team Udayavani, Sep 18, 2018, 11:28 AM IST
ಎಚ್.ಡಿ.ಕೋಟೆ: ಪ್ರವಾಹದಲ್ಲಿ ನೊಂದವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯದ ಒಂದು ಭಾಗ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲೂಕಿನ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಕಬಿನಿ ಹಿನ್ನೀರಿನ ಪ್ರವಾಹಕ್ಕೆ ಸಿಲುಕಿದ 68 ಕುಟುಂಬಗಳಿಗೆ 7 ಲಕ್ಷ ರೂ.ಗಳ ಪರಿಹಾರದ ಚೆಕ್‌ಗಳನ್ನು ವಿತರಿಸಿ ಮಾತನಾಡಿದರು.
ಕಳೆದ ತಿಂಗಳಲ್ಲಿ ಸುರಿದ ಭಾರಿ ಮಳೆ, ಪ್ರವಾಹದಿಂದ ಅನೇಕ ಗ್ರಾಮಗಳು ಜಲಾವೃತಗೊಂಡು ಕೋಟ್ಯಂತರ ರೂ. ನಷ್ಟ ಉಂಟಾಗಿತ್ತು. ಇದರಿಂದ ನೂರಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದವು. ಸಾವಿರಾರು ಎಕರೆ ಜಮೀನಿನಲ್ಲಿ ಫಸಲು ನದಿ ಪ್ರವಾಹಕ್ಕೆ ಸಿಕ್ಕಿ ಆಪಾರ ನಷ್ಟವನ್ನುಂಟು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಈ ಭಾಗದ ಜನರಿಗೆ ಪರಿಹಾರ ಕೊಡಲಾಗುತ್ತಿದೆ ಎಂದು ಹೇಳಿದರು. ಕ್ಷೇತ್ರದ ಶಾಸಕ ಅನಿಲ್ ಕುಮಾರ್, ಜಿಪಂ ಸದಸ್ಯ ಶ್ರೀಕೃಷ್ಣ, ತಾಪಂ ಸದಸ್ಯರಾದ ಅಂಕಪ್ಪ, ಸರೋಜಿನಿ, ಡಿ.ಬಿ.ಕುಪ್ಪೆ ಗ್ರಾಪಂ ಅಧ್ಯಕ್ಷ ತಿರುಪತಿ, ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ನಂದಿನಿ,
ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಜಾಜ್ ಪಾಷಾ, ಡಿಸಿಸಿ ಸದಸ್ಯ ಕೃಷ್ಣಪುರ ಪರಶಿವಮೂರ್ತಿ, ಶೀಲಾ, ಪಿ.ರವಿ, ಪ್ರಭುಸ್ವಾಮಿ, ಬಸವರಾಜು, ತಾಪಂ ಇಒ ದರ್ಶನ್, ಉಪ ತಹಶೀಲ್ದಾರ್ ಪುಟ್ಟಸ್ವಾಮಿ, ಗ್ರಾಮಲೆಕ್ಕಿಗ ಮಹಮದ್ ಗೌಸ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.