ಗುತ್ತಿಗೆ ಕಾರ್ಮಿಕರ ಮರು ನೇಮಕಕ್ಕೆ ಆಗ್ರಹ
Team Udayavani, Jun 29, 2018, 12:36 PM IST
ಮೈಸೂರು: ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ತೀರ್ಪು ನೀಡಿದ್ದರೂ ಬಿಎಸ್ಸೆನ್ನೆಲ್ ಆಡಳಿತ ವರ್ಗ ಕೆಲಸ ನೀಡದೆ ನ್ಯಾಯಾಲಯದ ತೀರ್ಪನ್ನು ಉಲ್ಲಂ ಸಿದೆ ಎಂದು ಆರೋಪಿಸಿ ರಾಜ್ಯ ಬಿಎಸ್ಸೆನ್ನೆಲ್ ಕಾಯಂ ಅಲ್ಲದ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್ಸೆನ್ನೆಲ್ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬಿಸ್ಸೆನ್ನೆಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ರಾಜ್ಯಾದ್ಯಂತ ಕೆಲಸದಿಂದ ತೆಗೆದುಹಾಕಲಾಗುತ್ತಿದೆ.
ಅದರಂತೆ ಮೈಸೂರಿನಲ್ಲೂ 60 ಮಂದಿ ಗುತ್ತಿಗೆ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಡಳಿತ ಮಂಡಳಿಯ ತೀರ್ಮಾನದಿಂದಾಗಿ ಹಲವು ಗುತ್ತಿಗೆ ನೌಕರರು ಕೆಲಸವಿಲ್ಲದೆ ಜೀವನ ನಿರ್ವಹಣೆಗೂ ಪರದಾಡುವಂತಾಗಿದೆ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ಈ ನಡುವೆ ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ತೀರ್ಪು ನೀಡಿದ್ದರೂ, ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲದೆ ನ್ಯಾಯಾಲಯದ ಆದೇಶ ಉಲ್ಲಂ ಸಿರುವುದು ಖಂಡನೀಯ. ಹೀಗಾಗಿ ಬಿಸ್ಸೆನ್ನೆಲ್ ಆಡಳಿತ ವರ್ಗ ಈಗಲಾದರೂ ಎಚ್ಚೆತ್ತು ಕೆಲಸದಿಂದ ತೆಗೆದುಹಾಕಿರುವ ಗುತ್ತಿಗೆ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು,
ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳ 5ನೇ ತಾರೀಖೀನೊಳಗೆ ವೇತನ ನೀಡಬೇಕು, ನ್ಯಾಯಾಲಯದ ಆದೇಶದಂತೆ ಬೋನಸ್ ನೀಡಿ, ಇಎಸ್‌ಐ ಮತ್ತು ಪಿಎಫ್ ವ್ಯವಸ್ಥೆ ಹಾಗೂ ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಶಬರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಮಲಿಂಗು, ಮಹದೇವಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಬಾಲಾಜಿರಾವ್, ಬಾಬು, ಸುರೇಶ್ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಿಸ್ಸೆನ್ನೆಲ್ ನಾನ್ ಪರ್ಮನೆಂಟ್ ನೌಕರರ ಸಂಘದ ಹಲವು ಮಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.