ಹಣ ದುರುಪಯೋಗ ತಡೆಗೆ ದಸಂಸ ಆಗ್ರಹ
Team Udayavani, Aug 11, 2017, 12:07 PM IST
ಮೈಸೂರು: ಪರಿಶಿಷ್ಟ ಜಾತಿಗಳಿಗೆ ಸರ್ಕಾರದಿಂದ ಮೀಸಲಿಡುವ ಹಣ ದುರುಪಯೋಗವಾಗುವುದನ್ನು ತಡೆಯಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ, ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ದಲಿತ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಮಾಜದಲ್ಲಿನ ಶೋಷಿತ ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸುತ್ತವೆ. ಆದರೆ ಕೆಲವು ರಾಜಕಾರಣಿಗಳು ಹಾಗೂ ಅಧಿಕಾರಿಗಳ ಧೋರಣೆಯಿಂದ ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ ಮಣ್ಣುಪಾಲಾಗುತ್ತಿದೆ.
ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾವಿರಾರು ಕೋಟಿ ರೂ.ಹಣವನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವುದಾಗಿ ಘೋಷಿಸಿದೆ. ಆದರೆ ಶೇ.90 ಹಣ ಖರ್ಚಾಗದೆ ಸರ್ಕಾರಕ್ಕೆ ಹಿಂದಿರುಗಿರುವುದು ಖಂಡನೀಯ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ಅಲ್ಲದೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಹತ್ತಾರು ಯೋಜನೆಗಳು ಘೋಷಣೆಯಾದರೂ ಇದಕ್ಕಾಗಿ ಅನುಸರಿಸುವ ಮಾನದಂಡಗಳು ದೋಷಪೂರಿತವಾಗಿವೆ. ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ, ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಎಲ್ಲವೂ ಇದ್ದರೂ ದಲಿತರನ್ನು ಸ್ವಾವಲಂಬಿ ಗಳನ್ನಾಗಿಸಲು ಸಹಕಾರಿಯಾಗುತ್ತಿಲ್ಲ.
ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಅವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಬೇಕು ಹಾಗೂ ಪ.ಜಾತಿಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಶಂಭುಲಿಂಗಸ್ವಾಮಿ, ರತ್ನಪುರಿ ಪುಟ್ಟಸ್ವಾಮಿ, ಹೆಗ್ಗನೂರು ನಿಂಗರಾಜು, ಜಿಲ್ಲಾ ಖಜಾಂಚಿ ಬಿ.ಡಿ.ಶಿವಬುದ್ಧಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.