ಡೆಂಘೀ, ಚಿಕುನ್ ಗುನ್ಯಾ ತಡೆಗೆ ಹೊಸ ತಂತ್ರ
Team Udayavani, Feb 10, 2017, 12:01 PM IST
ಮೈಸೂರು: ಬೇಸಿಗೆ ಸಂದರ್ಭದಲ್ಲಿ ಜನರನ್ನು ಬಾಧಿಸುವ ಸಾಂಕ್ರಮಿಕ ರೋಗಳ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈಹಾಕಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಮಾನ್ಯವಾಗಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಕೇಳಿಬರುತ್ತಿರುವ ಮಾರಕ ಕಾಯಿಲೆಗಳಾದ ಡೆಂಘೀ ಮತ್ತು ಚಿಕುನ್ಗುನ್ಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ “ಸೊಳ್ಳೆ ನಿವಾರಕ ಸಸ್ಯ’ಗಳನ್ನು ಬೆಳೆಸಲು ಉತ್ತೇಜನ ನೀಡಲು ಮುಂದಾಗಿದೆ.
ಜನರ ಪಾಲಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ಡೆಂಘೀ ಮತ್ತು ಚಿಕುನ್ಗುನ್ಯಾ ಕಾಯಿಲೆ ತಡೆಗಟ್ಟುವ ಸಲುವಾಗಿ ಈ ಕಾಯಿಲೆ ಹರಡುವ ಸೊಳ್ಳೆಗಳನ್ನು ನಿಯಂತ್ರಿಸಲು ಸೊಳ್ಳೆ ನಿವಾರಕ ಸಸ್ಯಗಳನ್ನು ಬೆಳೆಸಲು ಕ್ರಮ ಕೈಗೊಳ್ಳುವಂತೆ ಈಗಾಗಲೇ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳನ್ನು ಕೋರಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಎರಡು ದಿನಗಳ ಕಾಲ ನಡೆಸಿದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ನಡೆದು, ರಾಜಾÂದ್ಯಂತ ಜನರು ಸೊಳ್ಳೆಗಳ ಕಡಿತದಿಂದ ಡೆಂಘೀ, ಚಿಕುನ್ಗುನ್ಯಾ ಕಾಯಿಲೆಗಳಿಂದ ಬಳಲುತ್ತಿದ್ದು, ಡೆಂಘೀಯಿಂದಾಗಿ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 31 ಮಂದಿ ಮೃತಪಟ್ಟಿದ್ದರೆ, 5483 ಮಂದಿ ಚಿಕುನ್ಗುನ್ಯಾದಿಂದ ಬಳಲಿದ್ದಾರೆ.
ಈ ಕಾಯಿಲೆಗಳನ್ನು ಹರಡುವ ಸೊಳ್ಳೆಗಳನ್ನು ನಿಯಂತ್ರಿಸುವ ಅಗತ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳಾದ ಡಾ.ಶಾಲಿನಿ ರಜನೀಶ್ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಅರೆ ಸರ್ಕಾರಿ ಪತ್ರ ಬರೆದು, ಸೊಳ್ಳೆ ನಿವಾರಕ ಸಸ್ಯಗಳನ್ನು ಬೆಳೆಸಲು ಕ್ರಮ ಕೈಗೊಳ್ಳುವ ಜತೆಗೆ ತಮ್ಮ ಜಿಲ್ಲೆಗಳಲ್ಲಿ ಪ್ರತಿಯೊಂದು ಕುಟುಂಬಗಳಿಗೂ ಸೊಳ್ಳೆ ನಿವಾರಕ ಗಿಡಗಳನ್ನು ಸರಬರಾಜು ಮಾಡುವುದು ಹಾಗೂ ಈ ಗಿಡಗಳನ್ನು ಬೆಳೆಸಲು ಉತ್ತೇಜನ ನೀಡಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಜತೆಗೆ ಸುಲಭವಾಗಿ ಬೆಳೆಯಬಹುದಾದ 14 ಬಗೆಯ ಸೊಳ್ಳೆ ಮತ್ತು ಹಾರುವ ಕೀಟಗಳ ನಿವಾರಕ ಸಸ್ಯಗಳ ಪಟ್ಟಿಯನ್ನು ಕೊಟ್ಟಿದ್ದಾರೆ. ಫೆ.2ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇಂತಹದೊಂದು ಅರೆ ಸರ್ಕಾರಿ ಪತ್ರ ಬರೆದಿದ್ದು, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳು ಇನ್ನಷ್ಟೇ ಈ ಬಗ್ಗೆ ಕಾರ್ಯೋನ್ಮುಖವಾಗಬೇಕಿದೆ.
ಸೊಳ್ಳೆ ನಿವಾರಕ ಸಸ್ಯಗಳು
ಲೆಮನ್ ಬ್ಲಾಮ್, ಮಾರಿಗೋಲ್ಡ್, ಕ್ಯಾಟ್ನಿಪ್, ಸಿತ್ರೊನೆಲ್ಲಾ ಗ್ರಾಸ್, ಬಸಿಲ್, ರೋಸಮೇರಿ, ಥೆಮಿ, ಯುಕ್ಲೈಪಿಟಸ್, ಲ್ಯಾವೆಂಡರ್, ಪೆಪ್ಪರ್ಮಿಂಟ್, ಗಾರ್ಲಿಕ್, ಟೀ ಟ್ರಿ, ಗೆರಾನಿಯಮ್, ಲಂಟಾನ ಹಾಗೂ ಲೆಮನ್ ಗ್ರಾಸ್ಗಳನ್ನು ಬೆಳೆಯುವುದರಿಂದ ಸೊಳ್ಳೆಗಳನ್ನು ನಿಯಂತ್ರಿಸಬಹುದು ಎಂದು ಹೇಳಲಾಗಿದೆ. ಮನೆ ಅಥವಾ ಕಚೇರಿಗಳಲ್ಲಿ ಈ ಸೊಳ್ಳೆ ನಿವಾರಕ ಸಸ್ಯಗಳನ್ನು ಬೆಳೆಸಿ ಒಳಾವರಣ ಅಥವಾ ಟೇಬಲ್ ಮೇಲಿಡಲು ಅತ್ಯಾಕರ್ಷಕ ಬಣ್ಣಗಳ ಕುಂಡಗಳನ್ನು ಬಳಸುವಂತೆ ತಿಳಿಸಲಾಗಿದೆ.
* ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.