ಡೆಂಘೀ ಜ್ವರ: ಸ್ವಚ್ಛತೆ ಕಾಪಾಡಿ
ಎಚ್.ಡಿ.ಕೋಟೆ ತಾಲೂಕಿನಲ್ಲಿ ಮೂವರಿಗೆ ಡೆಂಘೀ ಸೋಂಕು, ಹಲವರಿಗೆ ಜ್ವರ
Team Udayavani, Jul 5, 2019, 11:40 AM IST
ಎಚ್.ಡಿ.ಕೋಟೆ: ತಾಲೂಕಿನ ವಿವಿಧ ಭಾಗಗಳಲ್ಲಿ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂವರಿಗೆ ಡೆಂಘೀ ಜ್ವರದ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ.
ಎಚ್.ಡಿ.ಕೋಟೆ ಪಟ್ಟಣದ ಸರ್ವಮಂಗಳಮ್ಮ ಹಾಗೂ ತಾಲೂಕಿನ ಜಿ.ಎಂ.ಹಳ್ಳಿ ಗ್ರಾಮದ ರಾಜು, ಕಲ್ಲಹಟ್ಟಿ ಗ್ರಾಮದ ಲಕ್ಷ್ಮಣ್ ನಾಯಕ್ ಡೆಂಘೀ ಜ್ವರದಿಂದ ಬಳಲುತ್ತಿದ್ದು, ಎಲ್ಲರೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಮೈಸೂರಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಡಿಸ್ ಈಜಿಫೈ ಸೊಳ್ಳೆಯ ಕಚ್ಚುವಿಕೆ ಯಿಂದ ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಮಾರಣಾಂತಿಕ ಡೆಂಘೀ ಜ್ವರ ತಾಲೂಕಿನಲ್ಲಿ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯ ಇಲಾಖೆ, ಪುರಸಭೆ ಸೇರಿದಂತೆ ತಾಲೂಕಿನ ಎಲ್ಲಾ 39 ಗ್ರಾಮ ಪಂಚಾಯಿತಿ ಗಳಲ್ಲೂ ಜನರಿಗೆ ತಮ್ಮ ಸುತ್ತಮುತ್ತಲ ಸ್ವಚ್ಛ ಪರಿಸರದ ಬಗ್ಗೆ ಅರಿವು ಮೂಡಿಸಿ, ಡೆಂಘೀ ಜ್ವರದ ಬಗ್ಗೆ ಜನರಲ್ಲಿ ಮನೆ ಮಾಡಿರುವ ಭಯವನ್ನು ದೂರವಾಗಿಸಬೇಕಿದೆ.
ಡೆಂಘೀ ವರದಿಯಾಗಿಲ್ಲ: ಅದರೆ, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ತಾಲೂಕಿನಲ್ಲಿ ಡೆಂಘೀ ಪ್ರಕರಣ ವರದಿಯಾಗಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಇಲಾಖೆ ಸಿಬ್ಬಂದಿ ಪ್ರತಿ ಜನವಸತಿ ಪ್ರದೇಶಕ್ಕೆ ತೆರಳಿ ಲಾರ್ವಾ ಸರ್ವೆ ಕೈಗೊಂಡು ಕುಟುಂಬಗಳ ಜನರಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಜನರು ಜ್ವರ ಬಂದ ಕೂಡಲೇ ಡೆಂಘೀ, ಚಿಕೂನ್‌ಗುನ್ಯಾ ಜ್ವರ ಎಂದು ಭಾವಿಸುತ್ತಾರೆ. ಜ್ವರ ಬಂದು ಮೂರ್‍ನಾಲ್ಕು ದಿನ ಕಳೆದರೂ ಗುಣವಾಗದಿದ್ದಲ್ಲಿ, ಆರೋಗ್ಯ ಇಲಾಖೆಯಲ್ಲಿ ವಿವಿಧ ಪರೀಕ್ಷೆ ನಡೆಸಲಾಗುತ್ತದೆ. ಎಲೀಜಾ ಟೆಸ್ಟ್‌ನಲ್ಲಿ ಪಾಸಿಟಿವ್ ಬಂದಾಗ ಮಾತ್ರ ಡೆಂಘೀ ಸೋಂಕು ಪತ್ತೆ ದೃಢಪಡುತ್ತದೆ. ಡೆಂಘೀ ಪತ್ತೆಯಾದರೂ ಸೂಕ್ತ ಚಿಕಿತ್ಸೆ ಲಭ್ಯವಿದ್ದು, ಭಯಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ:
ಡೆಂಘೀ ಸೋಂಕಿಗೆ ಸೂಕ್ತ ಚಿಕಿತ್ಸೆಯಿದ್ದು, ಯಾರೂ ಎದರುವ ಅಗತ್ಯವಿಲ್ಲ. ತಾವು ವಾಸಿಸುವ ಸುತ್ತಮುತ್ತಲ ಪರಿಸರದಲ್ಲಿ ಎಳೆನೀರು ಚಿಪ್ಪು, ಬೇಡವಾದ ಪ್ಲಾಸ್ಟಿಕ್ ವಸ್ತುಗಳು, ಟೈರ್‌ಗಳಲ್ಲಿ ಮತ್ತು ಒಳ ಕಲ್ಲಿನಲ್ಲಿ ಮಳೆ ನೀರು ಶೇಖರಣೆ ಯಾಗದಂತೆ ನೋಡಿಕೊಳ್ಳಬೇಕು. ಆಗಾಗ ಮನೆಯ ನೀರು ಶೇಖರಣಾ ತೊಟ್ಟಿಗಳನ್ನು ಶುಚಿಗೊಳಿಸಿ ಒಣಗಿಸಿ ಮತ್ತೆ ನೀರು ಸಂಗ್ರಹಿಸಬೇಕು. ಸಾಂಕ್ರಾಮಿಕ ರೋಗ ಉತ್ಪತ್ತಿ ಮಾಡಬಲ್ಲ ಸೊಳ್ಳೆ ಹತೋಟಿಗೆ ಸಾರ್ವಜನಿಕರೂ ಸಹಕರಿಸಬೇಕು. ಜ್ವರ ಕಾಣಿಸಿಕೊಂಡಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿ.ಉದಯಕುಮಾರ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸ್ವಚ್ಛತೆ ಸವಾಲಿನ ಕೆಲಸ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.