ದೇವೇಗೌಡರಿಗೆ ನಾಯಕರನ್ನು ತುಳಿದು ಗೊತ್ತಿಲ್ಲ: ಪ್ರತಾಪ್
Team Udayavani, Apr 3, 2024, 11:19 PM IST
ಮೈಸೂರು: ಅನ್ನ ತಿನ್ನುವ ಬಾಯಿಯಲ್ಲಿ ಏನೇನೋ ಮಾತನಾಡಬೇಡಿ. ಎಚ್. ಡಿ. ದೇವೇಗೌಡರಿಗೆ ನಾಯಕರನ್ನು ಬೆಳೆಸಿ ಗೊತ್ತೇ ಹೊರತು, ತುಳಿದು ಗೊತ್ತಿಲ್ಲ ಎಂದು ಸಚಿವ ಕೆ. ವೆಂಕಟೇಶ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ಧಾಳಿ ನಡೆಸಿದರು.
ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲು ದೇವೇ ಗೌಡರೇ ಕಾರಣ ಎಂಬ ಸಚಿವ ಕೆ. ವೆಂಕಟೇಶ್ ಹೇಳಿಕೆಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ವೆಂಕಟೇಶ್ ಅವರ ಹೇಳಿಕೆ ನೋಡಿ ಅವರ ಮೇಲಿದ್ದ ಎಲ್ಲ ಗೌರವ ಮರೆಯಾಗಿದೆ. ನಿಮಗೆ ರಾಜಕೀಯವಾಗಿ ಬೆಳೆಸಿ, ಶಕ್ತಿ ತುಂಬಿದ್ದು ದೇವೇಗೌಡರು ಎಂಬುದನ್ನು ಮರೆಯಬೇಡಿ. ನನಗೆ ಟಿಕೆಟ್ ಕೊಡಿಸಬೇಕೆಂದು ಒಂದು ಗಂಟೆ ಕಾಲ ಕಾದು ಅಮಿತ್ ಶಾ ಅವರ ಜತೆ ಪೋನ್‌ನಲ್ಲಿ ಮಾತನಾಡಿದ್ದರು.
ನನಗೆ ಟಿಕೆಟ್ ಕೊಡಿ ಎಂದು ಅಮಿತ್ ಶಾ ಅವರನ್ನು ಕೇಳಿದವರಲ್ಲಿ ದೇವೇಗೌಡರೇ ಪ್ರಮುಖರು. ಇಂತಹ ವ್ಯಕ್ತಿ ನನಗೆ ಟಿಕೆಟ್ ತಪ್ಪಿಸುತ್ತಾರೆ ಅಂತ ಹೇಳಿದರೆ ಹೇಗೆ? ವೆಂಕಟೇಶ್ ಅವರು ಇಂತಹ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
“ಕಾಂಗ್ರೆಸ್‌ನ ಲಕ್ಷ್ಮಣ್‌ಗೆ ಒಕ್ಕಲಿಗರ ಯಾವುದಾದರೂ ಲಕ್ಷಣ ಇದೆಯೇ?’
ಮೈಸೂರು: ಕಾಂಗ್ರೆಸ್ಸಿಗರು ಮೊದಲು ಒಳ್ಳೆಯ ಒಕ್ಕಲಿಗರಿಗೆ ಟಿಕೆಟ್ ಕೊಡಲಿ. ಇನ್ನೂ ಒಂದು ದಿನ ಅವಕಾಶವಿದ್ದು, ಈಗಲೂ ಕಾಂಗ್ರೆಸ್ಸಿಗರಿಗೆ ಅಭ್ಯರ್ಥಿಯನ್ನು ಬದಲಾಯಿಸಲು ಅವಕಾಶ ಇದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಹೇಳಿದರು.
ಮೈಸೂರು – ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಯಾಗಿರುವ, ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ. ಲಕ್ಷ್ಮಣ್ ಒಕ್ಕಲಿಗ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಿಮ್ಮ ಅಭ್ಯರ್ಥಿ ನಾನು ಒಕ್ಕಲಿಗ ಅಂತ ಈಗ ಪ್ರಮಾಣ ಪತ್ರ ಹಿಡಿದುಕೊಂಡು ಬಂದಿದ್ದಾನೆ. ಆ ಪ್ರಮಾಣ ಪತ್ರ ಯಾವುದು? ಕೆಎಸ್‌ಒಯುನಲ್ಲಿ ಸಿಗುತ್ತಿದ್ದ ಪ್ರಮಾಣ ಪತ್ರವೇ? ಎಂದು ಪ್ರಶ್ನಿಸಿದರು.
ಇಷ್ಟು ದಿನಗಳ ಕಾಲ ಒಕ್ಕಲಿಗರನ್ನು ತುತ್ಛವಾಗಿ ಬೈಯುತ್ತಿದ್ದ ಹೊಲಸು ಬಾಯಿಯ ವ್ಯಕ್ತಿ ನಿಮ್ಮ ಅಭ್ಯರ್ಥಿ. ಒಕ್ಕಲಿಗರೆಂದರೆ ನೇರವಂತಿಕೆ, ಗಡಸು ಸ್ವಭಾವ ಇರುತ್ತೆ. ನಿಮ್ಮ ಅಭ್ಯರ್ಥಿಗೆ ಈ ಯಾವುದಾದರೂ ಒಂದು ಲಕ್ಷಣ ಇದೆಯಾ? ಮೊದಲು ಅಭ್ಯರ್ಥಿ ಬದಲಾಯಿಸಿ ಆಮೇಲೆ ಗೆಲ್ಲುವುದಕ್ಕೆ ಒಕ್ಕಲಿಗರ ಕಾರ್ಡ್ ಪ್ಲೇ ಮಾಡುವಿರಿ ಎಂದು ಅಸ ಮಾ ಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.