ಅಭಿವೃದ್ಧಿ ನೋಡಿ ಮತ ಹಾಕಿ


Team Udayavani, Nov 29, 2017, 12:37 PM IST

m6-abhivrudhi.jpg

ಪಿರಿಯಾಪಟ್ಟಣ: ತಾಲೂಕಿನಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿ ಇಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರು ಮತಹಾಕಬೇಕು ಎಂದು ಶಾಸಕ ಕೆ.ವೆಂಕಟೇಶ್‌ ತಿಳಿಸಿದರು. ತಾಲೂಕಿನ ಚೌತಿ ಗ್ರಾಮದಲ್ಲಿ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಕೇಂದ್ರ ಮಂಜೂರಾತಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಹಣ ನೀಡಲಾಗಿದೆ. ಚುನಾವಣೆ ಹತ್ತಿರ ಬರುತ್ತಿವುದರಿಂದ ಯಾವುದೆ ಭರವಸೆ ನೀಡಲಾರೆ. ಈಗಾಗಲೇ ನೀಡಲಾಗಿರುವ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಮತನೀಡಿ ನಂತರ ಉಳಿದ ಕಾಮಗಾರಿಯ ಬಗ್ಗೆ ಚಿಂತನೆ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಗ್ರಾಮಸ್ಥ ರಾಮೇಗೌಡ ಮಾತನಾಡಿ, ಚೌತಿ ಗ್ರಾಮಕ್ಕೆ ಗ್ರಾಮ ಪಂಚಾಯಿತಿಕೇಂದ್ರ ಮಂಜೂರಾತಿ ಮಾಡಿ ಸಹಕಾರ ನೀಡಿದ್ದನ್ನು ಗ್ರಾಮದ ಜನರು ನೆನೆಸಿದ್ದೇವೆ. ಮುಂದಿನ ಚುನಾವಣೆಯಲ್ಲಿ ನಾವು ಅದರ ಋಣ ತೀರಿಸುತ್ತೇವೆ. ಚೌತಿ ಗ್ರಾಮಕ್ಕೆ ಪ್ರೌಢಶಾಲೆ, ಪಶುವೈದ್ಯಕೀಯ ಚಿಕಿತ್ಸಾಲಯ ಮತ್ತು ಅಂಬೇಡ್ಕರ್‌ ಭವನದ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಿದರು.

ಲಕ್ಷ್ಮೀಪುರ ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಕಿರಂಗೂರು ಗ್ರಾಮದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾರ್ಯಕ್ರಮ 20 ಲಕ್ಷ ರೂ. ಅಂದಾಜು ವೆಚ್ಚದಲ್ಲಿ. ನಂದಿನಾಥಪುರ, ಐಲಾಪುರದಲ್ಲಿ ತಲಾ 5 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ. ಕುಂದೇನಹಳ್ಳಿ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ಬಸವೇಶ್ವರ ದೇವಾಲಯ ಅಭಿವೃದ್ದಿ,

ಆಲನಹಳ್ಳಿ ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ನವಿಲೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆಗಳ ಅಭಿವೃದ್ಧಿ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಅಭಿವೃದ್ಧಿಗೆ ಒಟ್ಟು 53 ಲಕ್ಷ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.

ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಕೆ.ಆರ್‌.ನಿರೂಪಾರಾಜೇಶ್‌, ಗ್ರಾಪಂ ಅಧ್ಯಕ್ಷೆ ಲಲಿತಾಮಲ್ಲೇಶ್‌, ತಹಶೀಲ್ದಾರ್‌ ಜೆ.ಮಹೇಶ್‌, ಇಒ ಕೆ.ಬಸವರಾಜು, ಮುಖಂಡರಾದ ಮಹದೇವ್‌ನಾಯಕ್‌, ರಾಜು, ಧರ್ಮರಾಜು, ಕುಮಾರ್‌, ನಾಗಯ್ಯ, ದೇವಯ್ಯ, ಜವರಯ್ಯ, ಚೌತಿಮಲ್ಲಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.