ಪಾರಂಪರಿಕತೆ ಉಳಿಸಿಕೊಂಡು ರೈಲು ನಿಲ್ದಾಣ ಅಭಿವೃದ್ಧಿ
16.5 ಕೋಟಿ ರೂ. ವೆಚ್ಚದಲ್ಲಿ ಮೈಸೂರು ರೈಲು ನಿಲ್ದಾಣದ ಆಧುನೀಕರಣ•ಜೂ.16ರಿಂದ 23ರವರೆಗೆ ಕಾಮಗಾರಿ
Team Udayavani, Jun 14, 2019, 10:08 AM IST
ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಗೊಂಡಿರುವ ಮೈಸೂರು ರೈಲು ನಿಲ್ದಾಣದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪಾರಂಪರಿಕತೆಯನ್ನು ಉಳಿಸಿಕೊಂಡು ಆಧುನೀಕರಣಕ್ಕೆ ತೆರೆದುಕೊಳ್ಳುತ್ತಿದೆ.
ನಿರ್ಮಾಣವಾದ ರೈಲು ನಿಲ್ದಾಣದಲ್ಲಿ 1980ರವರೆಗೆ ಇದ್ದದ್ದು ಕೇವಲ ನಾಲ್ಕು ಪ್ಲಾಟ್ಫಾರಂಗಳು. ಆ ನಂತರದ ವರ್ಷಗಳಲ್ಲಿ ಹೆಚ್ಚವರಿ ಯಾಗಿ ಇನ್ನೂ ಎರಡು ಪ್ಲಾಟ್ಫಾರಂಗಳನ್ನು ನಿರ್ಮಿಸ ಲಾಗಿದೆ. ಸದ್ಯ 96 ರೈಲು ಮೈಸೂರಿಗೆ ಬಂದು ಹೋಗುತ್ತಿದ್ದು, ನಿತ್ಯ 60 ಸಾವಿರ ಜನರು ಮೈಸೂರು ರೈಲು ನಿಲ್ದಾಣವನ್ನು ಬಳಸುತ್ತಿದ್ದು, ಕಳೆದ ಮೂರ್‍ನಾಲ್ಕು ವರ್ಷಗಳಲ್ಲಿ ಈ ಪ್ರಮಾಣ ಶೇ.20ರಷ್ಟು ಹೆಚ್ಚಿದೆ. (72,000) ಜೊತೆಗೆ ರೈಲು ನಿಲ್ದಾಣದ ಆವರಣದಲ್ಲಿ ನಿಲುಗಡೆ ಮಾಡುವ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಸಂಖ್ಯೆ ಕೂಡ ಕಳೆದ ಹತ್ತು ವರ್ಷಗಳಲ್ಲಿ ದ್ವಿಗುಣವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ 64 ಹಳೆಯ ರೈಲು ನಿಲ್ದಾಣಗಳ ಕಾಯಕಲ್ಪಕ್ಕೆ ಭಾರತೀಯ ರೈಲ್ವೆ ಮುಂದಾಗಿದ್ದು, ಆ ಪೈಕಿ ಮೈಸೂರು ರೈಲು ನಿಲ್ದಾಣದ ಅಭಿವೃದ್ಧಿಗೆ 16.5 ಕೋಟಿ ರೂ. ಅನುದಾನ ನೀಡಿದೆ. ಈ ಅನುದಾನದಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದ ವತಿಯಿಂದ ಮೈಸೂರು ರೈಲು ನಿಲ್ದಾಣದ ಪುನರ್ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ತಗಾದೆ: ಅಭಿವೃದ್ಧಿ ಹೆಸರಲ್ಲಿ ರೈಲು ನಿಲ್ದಾಣದ ಪಾರಂಪರಿಕತೆಗೆ ಧಕ್ಕೆ ತರಲಾಗುತ್ತಿದೆ ಎಂದು ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣೆಗಾಗಿ ರಚಿಸಲಾದ ತಜ್ಞರ ಸಮಿತಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಸಮಿತಿಯ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಿದ್ದರು.
ಅದಕ್ಕೂ ಮುನ್ನ ಸ್ಥಳ ಪರಿಶೀಲನೆ ನಡೆಸಿದ್ದ ಸಂಸದ ಪ್ರತಾಪ್ ಸಿಂಹ ಅವರು ಹೆಚ್ಚುತ್ತಿರುವ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಇದಕ್ಕೆ ಅಡ್ಡಿಪಡಿಸದೆ ಸಹಕರಿಸುವಂತೆ ತಾಕೀತು ಮಾಡಿದ್ದರು.
ಆದರೆ, ಪ್ರವಾಸೋದ್ಯಮ ಸಚಿವರ ಸೂಚನೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕಾಮಗಾರಿಯನ್ನು ಸ್ಥಗಿತಗೊಳಿಸಿತ್ತು. ಕಡೆಗೆ ಜಿಲ್ಲಾಧಿಕಾರಿ ನೇತೃತ್ವದ ಪಾರಂಪರಿಕ ತಜ್ಞರ ಸಮಿತಿ, ಕಟ್ಟಡದ ಪಾರಂಪರಿಕತೆ ಉಳಿಸಿಕೊಂಡು ಕಾಮಗಾರಿ ಮುಂದುವರಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಭರದಿಂದ ಕಾಮಗಾರಿ ನಡೆದಿದ್ದು, ಮುಂಗಾರು ಆರಂಭದೊಳಗೆ ಕಾಮಗಾರಿ ಮುಗಿಸಲು ರೈಲ್ವೆ ಗಡುವು ಹಾಕಿಕೊಂಡಿದೆ.
● ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.