ಜಾತ್ಯತೀತ ಮನೋಭಾವದಿಂದ ಅಭಿವೃದ್ಧಿ


Team Udayavani, Feb 7, 2020, 3:00 AM IST

jaatyateeta

ಕೆ.ಆರ್‌.ನಗರ: ಅಭಿವೃದ್ಧಿ ಕೆಲಸಗಳಿಗೆ ಜಾತ್ಯತೀತವಾಗಿ ಕೈ ಜೋಡಿಸುವ ಮನೋಭಾವನೆ ಬೆಳೆಸಿಕೊಂಡರೆ ಎಲ್ಲಾ ವರ್ಗದವರ ಅಭಿವೃದ್ಧಿ ಸಾಧ್ಯವಾಗಲಿದೆ. ಹಾಗಾಗಿ ನಾವೆಲ್ಲಾ ಸಹೋದರ ಮನೋಭಾವನೆಯಿಂದ ಬದುಕುವುದನ್ನು ಕಲಿಯಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ತಾಲೂಕಿನ ಚಂದಗಾಲು ಗ್ರಾಮದಲ್ಲಿ ನಡೆದ ಬಸವೇಶ್ವರ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹೃದಯ ಶ್ರೀಮಂತಿಕೆ ಇರುವವರಿಗೆ ದೇವರು ಸದಾ ಒಳ್ಳೆಯದನ್ನು ಮಾಡುತ್ತಾನೆ. ಇದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದರು.

3 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೆ: ದುರ್ನಡತೆ, ದ್ವೇಷ ಮತ್ತು ಅಸೂಯೆ ಬಿಟ್ಟು ಇತರರಿಗೆ ಮಾದರಿಯಾಗಿ ಬದುಕಬೇಕು. ಚಂದಗಾಲು ಮತ್ತು ಕಾಟ್ನಾಳು ಗ್ರಾಮಗಳ ಅಭಿವೃದ್ಧಿಗೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಜಾತಿ ರಾಜಕರಣ ಮಾಡಬಾರದು: ತಾಲೂಕಾದ್ಯಂತ ಸುಮಾರು 200 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿಸಿರುವುದರ ಜತೆಗೆ ಜಾತ್ಯತೀತವಾಗಿ ಸೇವೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದರೂ ಸಹ ಕಳೆದ ಚುನಾವಣೆಯಲ್ಲಿ ಜಾತಿ ಕಾರಣದಿಂದ ನನ್ನನ್ನು ಸೋಲಿಸಲು ಪ್ರಯತ್ನಿಸಿದರು. ಇದಕ್ಕೆ ನಮ್ಮ ಪಕ್ಷದ ಕೆಲವರೂ ಸಹ ಸಾಥ್‌ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಗುಲಗಳು ಸಂಬಂಧ ಬೆಸೆಯುವ ಕೇಂದ್ರ:  ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾಮೀಜಿ ಮಾತನಾಡಿ, ದೇವಾಲಯಗಳು ಮನುಷ್ಯರ ಸಂಬಂಧಗಳನ್ನು ಪರಸ್ಪರ ಬೆಸೆಯುವ ಕೇಂದ್ರಗಳಾಗಬೇಕು. ಆಗ ಮಾತ್ರ ಅವುಗಳ ನಿರ್ಮಾಣದ ಉದ್ದೇಶ ಈಡೇರುತ್ತದೆ ಎಂದು ಹೇಳಿದರು.

ಭ ವಿಷ್ಯದಲ್ಲಿ ಗಂಡಾಂತರ: ಮನುಷ್ಯ ಇಂದು ತನ್ನ ದುರ್ವರ್ತನೆಯಿಂದ ಸ್ವಂತಿಕೆಯನ್ನು ಕಳೆದುಕೊಳ್ಳುತ್ತಿದ್ದು, ಪ್ರಾಣಿಗಳಿಗಿಂತ ಕೀಳಾಗುತ್ತಿದ್ದಾನೆ. ಆದ್ದರಿಂದ ಎಲ್ಲರೂ ದೇವರು ಮತ್ತು ಹಿರಿಯರಲ್ಲಿ ನಂಬಿಕೆ ಇಟ್ಟು ಉತ್ತಮ ಮನುಷ್ಯರಾಗಿ ಬದುಕಬೇಕು ಎಂದು ಸಲಹೆ ನೀಡಿದ ಶ್ರೀಗಳು, ಮಾನವನ ದುರಾಸೆಯಿಂದ ಪ್ರತಿನಿತ್ಯ ದೌರ್ಜನ್ಯಗಳು ನಡೆಯುತ್ತಿದ್ದು ಅದು ನಿಲ್ಲದಿದ್ದರೆ ಭವಿಷ್ಯದಲ್ಲಿ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಾತಿ ಸಂಕೋಲೆಯಿಂದ ಹೊರ ಬನ್ನಿ: ದೇವಾಲಯಗಳನ್ನು ನಿರ್ಮಾಣ ಮಾಡಿ ಪೂಜೆ ಸಲ್ಲಿಸಿ ಮನಸ್ಸಿನಲ್ಲಿ ಇತರರನ್ನು ದ್ವೇಷ ಮಾಡಿದರೆ ಎಲ್ಲಾ ಪೂಜೆಗಳೂ ವ್ಯರ್ಥವಾಗುತ್ತವೆ. ಹಾಗಾಗಿ ನಾವೆಲ್ಲಾ ಮಾಡುವ ಕಾಯಕದಲ್ಲಿ ದೇವರನ್ನು ಕಂಡು ಜಾತಿ ಸಂಕೋಲೆಯಿಂದ ಹೊರ ಬರಬೇಕು ಎಂದು ತಿಳಿಸಿದ ನಟರಾಜಶ್ರೀಗಳು ಮುಂದಿನ ಪೀಳಿಗೆ ನೆಮ್ಮದಿಯಿಂದ ಬದುಕಬೇಕಾದರೆ ಜಲ ಸಂರಕ್ಷಣೆಯತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಮುಖಂಡರಿಗೆ ಸನ್ಮಾನ:
ಕಾಗಿನೆಲೆ ಕನಕಗುರು ಪೀಠದ‌ ಶಿವಾನಂದಪುರಿಸ್ವಾಮೀಜಿ, ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದಸ್ವಾಮೀಜಿ ಮತ್ತು ಅರಕೆರೆ ವಿರಕ್ತ ಮಠದ ಸಿದ್ದೇಶ್ವರಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಆರ್‌.ಪೂರ್ಣಿಮಾ ಸೇರಿದಂತೆ ಗ್ರಾಮದ ಹಿರಿಯ ಮುಖಂಡರನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷ ಎಂ.ನಾಗರಾಜು, ಗ್ರಾಪಂ ಅಧ್ಯಕ್ಷೆ ಸುಕನ್ಯ, ಎಪಿಎಂಸಿ ಮಾಜಿ ನಿರ್ದೇಶಕ ನಂಜುಂಡಸ್ವಾಮಿ, ಗ್ರಾಮದ ಮುಖಂಡರಾದ ಶಿವಶಂಕರಪ್ಪ, ಮಹದೇವ್‌, ಆನಂದಚಾರ್‌, ಅಣ್ಣಯ್ಯ, ದ್ವಾರಕೀಶ್‌, ರಾಜನಾಯಕ, ರಂಗಪ್ಪ, ಪುಟ್ಟರಾಜು, ನಾಗೇಶ್‌, ಸೋಮಶೇಖರ್‌, ತಹಶೀಲ್ದಾರ್‌ ಎಂ.ಮಂಜುಳಾ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್‌.ರಮೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.