ಬಿಜೆಪಿಯಿಂದ ಅಭಿವೃದ್ಧಿ ಕಾರ್ಯ


Team Udayavani, Nov 29, 2017, 12:37 PM IST

m3-bjp.jpg

ಕೆ.ಆರ್‌.ನಗರ: ನನ್ನ ಭಾಗದ ರೈತರಿಗೆ ನೆಮ್ಮದಿಯ ಜೀವನ ನಡೆಸಲು ಏನಾದರೂ ಪ್ರಾಮಾಣಿಕ ಸೇವೆ ಮಾಡಬೇಕು ಎಂದಾಗ ಬತ್ತಿ ಹೋದ ನೂರಾರು ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಸಲು ಕಾರಣವಾದದ್ದು ಬಿಜೆಪಿ ಪಕ್ಷ. ನಮ್ಮ ಆಡಳಿತ ವ್ಯವಸ್ಥೆಯ ಎರಡು ಸರ್ಕಾರಗಳು ಅಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ಪಕ್ಷ ಹೊಂದಿದಲ್ಲಿ ಹೆಚ್ಚು ಅಬಿವೃದ್ಧಿ ಸಾಧ್ಯ ಎಂದು ಶಾಸಕ ಸಿ.ಪಿಯೋಗೇಶ್ವರ್‌ ಹೇಳಿದರು.

ಅವರು ಕೆ.ಆರ್‌.ನಗರದಲ್ಲಿನ ತೋಪಮ್ಮ ದೇವಸ್ಥಾನದ ಎದುರು ಬಿಜೆಪಿ ಮುಖಂಡ ಹೊಸಹಳ್ಳಿ ವೆಂಕಟೇಶ್‌ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ದೂರದೃಷ್ಟ ಹೊಂದಿರುವ ಮೋದೀಜಿ ಇವತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಹೆಚ್ಚಿಸಿದ್ದಾರೆ. ಭಾರತವನ್ನು ಬದಲಾವಣೆಯ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಉನ್ನತ ಮಟ್ಟಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೋದಿಯವರ ಗಾಳಿಗೆ ಸಮಾಜವಾದಿ ಪಕ್ಷ ತರಗೆಲೆಯಂತೆ ಉದುರಿಹೋಯಿತು. ಉತ್ತರ ಭಾರತದಲ್ಲಿ ಸಂಪೂರ್ಣ ಬಿಜೆಪಿ ಆಡಳಿತ ಹೊಂದಿದೆ. ಯಡಿಯೂರಪ್ಪನವರು ಪರಿವರ್ತನಾ ರ್ಯಾಲಿ ಮೂಲಕ ರಾಜಾದ್ಯಂತ ಪ್ರವಾಸ ಕೈಗೊಂಡಿದ್ದು ಉತ್ತರ ಕನಾಟಕದಲ್ಲಿ ಅಭೂತಪೂರ್ವ ಯಶಸ್ಸು ಕಾಣುತ್ತಿದ್ದೇವೆ ಎಂದರು.

ಇಲ್ಲಿ ಮೂರು ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಅದೂ ಬದಲಾವಣೆಯಾಗಬೇಕೆನ್ನುವ ನಿಟ್ಟಿನಲ್ಲಿ ಬಿಜೆಪಿಗೆ ಹೊಸ ನಾಯಕರನ್ನು ಸೃಷ್ಟಿಸುತ್ತಿದ್ದೇವೆ. ಈ ದಿಸೆಯಲ್ಲಿ ಕೆ.ಆರ್‌.ನಗರದಲ್ಲಿ ಹೊಸಹಳ್ಳಿ ವೆಂಕಟೇಶ್‌ರವರ ಬಿಜೆಪಿ ಕಟ್ಟುವ ಪ್ರಾಮಾಣಿಕ ಪ್ರಯತ್ನದಿಂದ ಭರವಸೆಯ ನಾಯಕರಾಗಿ ಕಾಣುತಿದ್ದಾರೆ. ನೀವೆಲ್ಲ ಮನಸ್ಸು ಮಾಡಿದರೆ ವೆಂಕಟೇಶ್‌ ಎಂಎಲ್‌ಎ ಆಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ ಜನರ ಹಣವನ್ನು ಹರಿದು ಹಂಚಿ ಲೂಟಿ ಹೊಟೆಯುತ್ತಿದೆ.  ರಾಜ್ಯದಲ್ಲಿ ರೈತರ ಮೊಗದಲ್ಲಿ ನೆಮ್ಮದಿಯ ಜೀವನ ಕಾಣಬೇಕಾದರೆ ಮತ್ತು ಯುವಕರಲ್ಲಿ ಉದ್ಯೋಗ ಸೃಷ್ಟಿಯ ಮೂಲಕ ಭರವಸೆಯ ಬದುಕು ರೂಪಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು. ಮುಂದಿನ ತಿಂಗಳು 20ರ ನಂತರ ಅನೇಕ ಸಮರ್ಥ ನಾಯಕರು ಬೇರೆ ಪಕ್ಷಗಳಿಂದ ಬಿಜೆಪಿಗೆ ವಲಸೆಬರುತ್ತಾರೆ. ಮುಂಬರುವ ಚುನಾವಣೆಯಲ್ಲಿ ವೆಂಕಟೇಶ್‌ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಣ್ಣ, ಮಾಜಿ ಶಾಸಕ ತೋಂಟದಾರ್ಯ, ಹೊಸಹಳ್ಳಿ ವೆಂಕಟೇಶ್‌ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್‌, ತಾ.ಬಿಜೆಪಿ ಅಧ್ಯಕ್ಷ ಕೆ.ಸಿ.ಶಿವಕುಮಾರ್‌, ಮುಖಂಡರಾದ ಡಾ.ಬಾರತೀಶ್‌, ಬಿ.ಎಲ್‌.ರಘು, ಉಮಾಶಂಕರ್‌, ಬೋರೇಗೌಡ್ರು, ಜಾಬಗೆರೆ ರಮೇಶ್‌, ಯೋಗಾನಂದ, ನಳಿನಾಕ್ಷಿ ವೆಂಕಟೇಶ್‌, ಕುಪ್ಪೆ ಪ್ರಕಾಶ್‌, ಅರ್ಜುನಹಳ್ಳಿ ಸಂಪತ್‌, ಕುಮಾರ್‌, ಸಿ.ವಿ.ಗುಡಿ ಜಗದೀಶ್‌, ಸಾ.ರಾ.ರಮೇಶ್‌, ಮಹೇಶ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.