ಜೆಡಿಎಸ್ ತಾಲೂಕು ಅಧ್ಯಕ್ಷರ ಸಭೆ ಕರೆದು ಬೆಂಬಲ ಕೋರಿದ ಧ್ರುವ
Team Udayavani, Mar 17, 2019, 7:44 AM IST
ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾ.25ರಂದು ತಾವು ನಾಮಪತ್ರ ಸಲ್ಲಿಸುವುದಾಗಿ ಸಂಸದ ಆರ್. ಧ್ರುವನಾರಾಯಣ ಘೋಷಿಸಿದರು. ನಗರದ ಕಬಿನಿ ಸಂಗಮದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ನಂಜನಗೂಡು, ತಿ. ನರಸೀಪುರ, ಎಚ್.ಡಿ. ಕೋಟೆ ತಾಲೂಕು ಜೆಡಿಎಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದರು.
ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿರುವ ತಮಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹಾಗೂ ತಿ.ನರಸೀಪುರ ಶಾಸಕ ಅಶ್ವಿನ್ ಅವರೊಂದಿಗೂ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಯಾದ ತನಗೆ ಸಂಪೂರ್ಣ ಸಹಕಾರ ನೀಡಿ ಎಂದು ಕೋರಿದರು.
ಅಧಿಕಾರ ಶಾಶ್ವತವಲ್ಲ. ಆದರೆ ಪ್ರೀತಿ, ವಿಶ್ವಾಸ ನಂಬಿಕೆಯ ಮಾನವೀಯ ಸಂಬಂಧ ಶಾಶ್ವತ ಎಂದು ಭಾವಿಸಿದ್ದೇನೆ. ನಾವಿಬ್ಬರೂ ಸೇರಿದರೆ ಗೆಲುವು ಸುಲಭವಾಗಲಿದೆ. ಅಲ್ಲದೇ ರಾಜ್ಯ ಸರ್ಕಾರ ಕೂಡ ಸುಭದ್ರವಾಗಿರಲಿದೆ. ರಾಜ್ಯದಲ್ಲಿ ಈ ಹೊಂದಾಣಿಕೆಯ ಹೊಸಪ್ರಯೋಗವಾಗಿದ್ದು, ಇದರಲ್ಲಿ ನಾವು ಯಶಸ್ವಿಯಾಗಬೇಕು. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಶ್ರಮಿಸೋಣ ಎಂದು ಧ್ರುವನಾರಾಯಣ, ಸದ್ಯದಲ್ಲೇ ಇಬ್ಬರು ಸಚಿವರ ನೇತೃತ್ವದಲ್ಲಿ ಚಾಮರಾಜ ನಗರ ಲೋಕಸಭಾ ವ್ಯಾಪ್ತಿಯ ಇನ್ನೊಂದು ಜೆಡಿಎಸ್ ಸಭೆ ನಡೆಯಲಿದೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಎನ್. ನರಸಿಂಹಸ್ವಾಮಿ ಮಾತನಾಡಿ, ಕ್ರಿಯಾಶೀಲ ಸಂಸದರಾಗಿರುವ ಧ್ರುವನಾರಾಯಣ ಪುನರಾಯ್ಕೆಯಾಗುವುದು ಮತದಾರರ ಹೆಮ್ಮೆಯಾಗಿದೆ. ಸರಳ ಸಜ್ಜನಿಕೆಯ ಅವರು ಜನಸಾಮಾನ್ಯರ ಕಷ್ಟಗಳಿಗೆ ಸದಾ ಕಾಲ ಸ್ಪಂದಿಸುವ ಮನೊಭಾವ ಹೊಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಂಜನಗೂಡು ತಾಲೂಕು ಜೆಡಿಎಸ್ ಅಧ್ಯಕ್ಷ ಆರ್. ಮಹದೇವಸ್ವಾಮಿ, ತಿ.ನರಸೀಪುರ ತಾಲೂಕು ಅಧ್ಯಕ್ಷ ಚಿನ್ನಸ್ವಾಮಿ, ಎಚ್.ಡಿ. ಕೋಟೆ ಅಧ್ಯಕ್ಷ ನರಸಿಂಹೇಗೌಡ, ಸರಗೂರು ತಾಲೂಕು ಅಧ್ಯಕ್ಷ ಬಸವಣ್ಣ, ಪಕ್ಷದ ಎಸ್‌ಸಿ ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ, ಭಾಸ್ಕರ್, ಎನ್.ಶ್ರೀನಿವಾಸ, ಮಾಹದೇವು, ರಾಜೇಂದ್ರ, ಮುಖಂಡ ಬೆಳವಾಡಿ ಶಿವಕುಮಾರ, ಸಣ್ಣಪ್ಪ ಗೌಡ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.