ಬಿಜೆಪಿಗೆ ದಲಿತರ ಬಗ್ಗೆ ಧೃತರಾಷ್ಟ್ರ ಪ್ರೇಮ: ಧ್ರುವನಾರಾಯಣ
Team Udayavani, Jan 11, 2023, 12:22 AM IST
ಮೈಸೂರು: ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಡಾ| ಬಿ.ಆರ್.ಅಂಬೇಡ್ಕರ್ ಹಾಗೂ ದಲಿತರ ಸ್ಮರಣೆ ಮಾಡುತ್ತಾರೆ. ಅಧಿಕಾರಕ್ಕೆ ಬಂದಾಗ ಅವರನ್ನು ಶೋಷಿಸುವುದು ಅವರ ಸಂಸ್ಕೃತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಲೇವಡಿ ಮಾಡಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಬಿಜೆಪಿಗೆ ದಲಿತರ ಬಗ್ಗೆ ಧೃತರಾಷ್ಟ್ರ ಪ್ರೇಮವಿದೆ. ಮಹಾಭಾರತದಲ್ಲಿ ಧೃತರಾಷ್ಟ್ರನು ಭೀಮನನ್ನು ನಾಶ ಮಾಡುವ ಉದ್ದೇಶದಿಂದ ಮನದೊಳಗೆ ದ್ವೇಷವನ್ನು ಇಟ್ಟು, ಮೇಲ್ನೋಟಕ್ಕೆ ಪ್ರೀತಿ ತೋರಿಸುತ್ತಾನೆ. ದಲಿತರ ಬಗ್ಗೆ ಬಜೆಪಿಯ ಉದ್ದೇಶವೂ ಇದೇ ಆಗಿದೆ ಎಂದು ದೂರಿದರು.
ದಲಿತರು ಎಚ್ಚರವಹಿಸಲಿ
ದಲಿತರನ್ನು ಅಪ್ಪಿಕೊಳ್ಳುವ ಆಸೆ ತೋರುತ್ತಾ, ಅವರನ್ನು ನಾಶ ಮಾಡಲು ಸಂಚು ರೂಪಿಸುತ್ತಿದೆ. ಚುನಾವಣೆ ಬಂದಾಗ ದಲಿತರನ್ನು ಸ್ಮರಿಸೋದು, ಅಧಿಕಾರಕ್ಕೆ ಬಂದ ಮೇಲೆ ಅವರನ್ನು ಶೋಷಿಸುವುದು ಬಿಜೆಪಿ ಸಂಸ್ಕೃತಿ. ಈ ಬಗ್ಗೆ ದಲಿತರು ಎಚ್ಚರ ವಹಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಅಥವಾ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ದಲಿತರ ಏಳಿಗೆಗಾಗಿ ಅತಿ ಹೆಚ್ಚು ಕಾರ್ಯಕ್ರಮ ನೀಡಿದ ಹಾಗೂ ಅತಿ ಹೆಚ್ಚು ರಾಜಕೀಯ ಸ್ಥಾನಮಾನ ನೀಡಿದ ಪಕ್ಷ ಕಾಂಗ್ರೆಸ್. ಹೀಗಾಗಿ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಅವರುನಾನೊಬ್ಬ ಅಂಬೇಡ್ಕರ್ ವಾದಿ ಎಂದು ಹೇಳಿಕೊಂಡಿದ್ದಾರೆ. ಆದರೆ, ಅಂಬೇಡ್ಕರ್ ಆಶಯಗಳನ್ನು ನಿಮ್ಮ ಆಡಳಿತದಲ್ಲಿ ಈಡೇರಿಸಿದ್ದೀರಾ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.