ದಿನೇಶ್‌ ಗುಂಡೂರಾವ್‌ಗೆ ಸಚಿವ ಸ್ಥಾನ ನೀಡಿ


Team Udayavani, Jun 12, 2018, 2:07 PM IST

m3-dinesh.jpg

ಮೈಸೂರು: ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಕಳೆದ ಹಲವು ವರ್ಷದಿಂದ ಶ್ರಮಿಸುತ್ತಿರುವ ಶಾಸಕ ದಿನೇಶ್‌ ಗುಂಡೂರಾವ್‌ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಗುಂಡೂರಾವ್‌ ಅಭಿಮಾನಿ ಬಳಗದ ಸದಸ್ಯರು ಒತ್ತಾಯಿಸಿದರು. 

ನಗರದ ನಾರಾಯಣಶಾಸಿ ರಸ್ತೆಯಲ್ಲಿರುವ ಅಗರಂ ರಂಗಯ್ಯ ವೃತ್ತದಲ್ಲಿ ಜಮಾಯಿಸಿದ ಬಳಗದ ಸದಸ್ಯರು, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ಶಾಸಕ ದಿನೇಶ್‌ ಗುಂಡೂರಾವ್‌ ಅವರಿಗೆ ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿ ಸಾರ್ವಜನಿಕರ ಶೂ ಪಾಲಿಶ್‌ ಮಾಡುವ ಅಣಕು ಪ್ರದರ್ಶನ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ದಿ.ಗುಂಡೂರಾವ್‌ ದಕ್ಷ ಆಡಳಿತ ನೀಡುವ ಮೂಲಕ ಅಪಾರ ಸೇವೆ ಸಲ್ಲಿಸಿದ್ದಾರೆ. ಅದೇ ರೀತಿಯಲ್ಲಿ ದಿನೇಶ್‌ ಗುಂಡೂರಾವ್‌ ರಾಜಕೀಯವಾಗಿ ಕಳೆದ ಎರಡು ದಶಕಗಳಿಂದ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಯುವ ಘಟಕದ ರಾಜ್ಯಾಧ್ಯಕ್ಷರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ತಮಗೆ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ದಿನೇಶ್‌ ಗುಂಡೂರಾವ್‌, ಎಲ್ಲಾ ವರ್ಗದವರೊಂದಿಗೆ ಬೆರೆತು ಪಕ್ಷದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ಕಳೆದ ಬಾರಿ ಹೈಕಮಾಂಡ್‌ ಸೂಚನೆ ಮೇರೆಗೆ ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದರು. ಹೀಗಾಗಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್‌ ಅಥವಾ ಶಾಸಕಾಂಗ ಸಮನ್ವಯ ಸಮಿತಿ ಕ್ರಮ ವಹಿಸಬೇಕಿದ್ದು, ಇಲ್ಲವಾದಲ್ಲಿ ಕಾಂಗ್ರೆಸ್‌ ಪಕ್ಷದ ಅಳಿವು ಉಳಿವಿನ ಪ್ರಶ್ನೆಯಾಗಿ ಉಳಿಯುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಗುಂಡೂರಾವ್‌ ಅಭಿಮಾನಿ ಬಳಗದ ಅಧ್ಯಕ್ಷ  ವಿನಯ್ ಕಣಗಾಲ್, ಯುವ ಕಾಂಗ್ರೆಸ್‌ ಮುಖಂಡರಾದ ಸಿ.ಎಸ್‌.ರಘು, ತಿವಾರಿ, ವಕೀಲ ರಾಜಶೇಖರ್‌, ಜೋಗಿ ದೀಪು, ನಾಗಭೂಷಣ್‌, ಯೋಗೇಶ್‌, ಸುಕೃತ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.