ಅಂಗವಿಕಲರು ಸವಲತ್ತು ಸದ್ಬಳಕೆ ಮಾಡಿಕೊಳ್ಳಲಿ


Team Udayavani, Dec 29, 2017, 1:14 PM IST

m4-angavikala.jpg

ಕೆ.ಆರ್‌.ನಗರ: ಅಂಗವಿಕಲರು ಅಂಗವೈಫ‌ಲ್ಯ ಇದೆ ಎಂದು ಧೃತಿಗೆಡದೆ, ಕೇಂದ್ರ-ರಾಜ್ಯ ಸರ್ಕಾರಗಳು ನೀಡುವ ಸವಲತ್ತುಗಳನ್ನು ಪಡೆಯುವ ಮೂಲಕ  ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಹೊಸಹಳ್ಳಿ ವೆಂಕಟೇಶ್‌ ಹೇಳಿದರು.

ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಗುರುವಾರ ಶ್ರೀಕೃಷ್ಣಮಂದಿರದಲ್ಲಿ ತಾಲೂಕು ಅಂಗವಿಕಲರ ಸಂಘ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.

ಅಂಗವೈಫ‌ಲ್ಯತೆ ಇದ್ದರೂ ಸಮಾಜದಲ್ಲಿ ನೀವೂ ನಮ್ಮಂತೆ ಕುಟುಂಬ ನಿರ್ವಹಣೆ ಮಾಡಿಕೊಂಡು ಮಕ್ಕಳ ಲಾಲನೆ ಪೋಷಣೆ, ವಿದ್ಯಾಭ್ಯಾಸ ಮಾಡಿಸಿ ಜೀವನ ಸಾಫ‌ಲ್ಯತೆ ಪಡೆಯುವಲ್ಲಿ ಯಶಸ್ಸು ಪಡೆಬೇಕಿದ್ದು ಕೆಲವರು ಕ್ರೀಡೆ, ಸಾಹಿತ್ಯ ಕೇತ್ರಗಳಲ್ಲಿ ಯಶಸ್ಸು ಗಳಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.

ಕಣ್ಣು ಚಿಕಿತ್ಸೆ ಹಾಗೂ ಕೃತಕ ಕಾಲು ಜೋಡಣೆ ಅಗತ್ಯವಿರುವವರು ತಮ್ಮ ಕಚೇರಿಯನ್ನು ಸಂಪರ್ಕಿಸಿದಲ್ಲಿ ಸೂಕ್ತ ಸಹಕಾರ ನೀಡುವ ಭರವಸೆ ನೀಡಿದರು. ಅಲ್ಲದೆ, ಅಂಗವಿಕಲರ ಮಾಸಾಶನ ಹೆಚ್ಚಿಸಬೇಕೆಂಬ ಬೇಡಿಕೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವುದಾಗಿ ಹೇಳಿದರು.

ದಿ.ಶಾಸಕ ಮಂಚನಹಳ್ಳಿ ಮಹದೇವುರವರ ಪುತ್ರಿ ಐಶ್ವರ್ಯ, ತನ್ನ ತಂದೆಯವರು ಶಾಸಕರಾಗಿದ್ದಾಗ ಮಾಡಿದ ಒಳ್ಳೆಯ ಕೆಲಸಗಳೇ ತನ್ನ ರಾಜಕೀಯ ವಿಚಾರಗಳಿಗೆ ಸ್ಪೂರ್ತಿ ನೀಡಿದೆ. ಅಂಗವಿಕಲರಿಗೆ ಸಹಾಯ ಮಾಡಲು ತಾನು ಸದಾ ಸಿದ್ಧಳಾಗಿದ್ದೇನೆಂದರು.

ತಾಲೂಕು ಅಂಗವಿಕಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ನಗರ ಹಾಗೂ ಪುರಸಭೆಗಳಿಂದ ಅಂಗವಿಕಲರಿಗೆ ದೊರೆಯುವ ಸರ್ಕಾರದ ಸೌಲಭ್ಯಗಳು ಪೂರ್ಣಪ್ರಮಾಣದಲ್ಲಿ ಮಾಹಿತಿ ದೊರೆಯದೆ ವಾಪಸ್‌ ಹೋಗುತ್ತಿವೆ.

ಸರ್ಕಾರ  ನಮ್ಮ ಮಾಸಾಶನವನ್ನು ದುಪ್ಪಟ್ಟುಗೊಳಿಸಬೇಕು. ಇಲ್ಲದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದರು. ವೇದಿಕೆಯಲ್ಲಿ ಎಪಿಎಂಸಿ ಮಾಜಿ ನಿರ್ದೇಶಕ ಶೇಕರ್‌, ಬಿಜೆಪಿ ಮುಖಂಡ ಕುಪ್ಪೆ ಪ್ರಕಾಶ್‌ ಇದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.