ಬಯಲು ಶೌಚ ತಡೆಗೆ ಗೂಲಾಬಿ ಹೂ ವಿತರಿಸಿ ಜಾಗೃತಿ
Team Udayavani, Feb 26, 2017, 12:26 PM IST
ತಿ.ನರಸೀಪುರ: ಗ್ರಾಮ ವಾಸ್ತವ್ಯದ ಮೂಲಕ ಅಧಿಕಾರಿಗಳ ತಂಡವು ಬಯಲು ಶೌಚಾಲಯವನ್ನು ತಡೆಗಟ್ಟಲು ಹಾಗೂ ಶೌಚಾಲಯ ಬಳಕೆ ಕುರಿತು ತಾಲೂಕಿನ ಮೇದನಿ ಗ್ರಾಮದಲ್ಲಿ ಜಾಗೃತಿ ಮೂಡಿಸಿತು.
ಶೌಚಾಲಯ ಜಾಗೃತಿಗಾಗಿ ರಚನೆ ಮಾಡಲಾಗಿದ್ದ 15 ಪಿಡಿಒಗಳ ತಂಡದ ನಿಗ್ರಹ ದಳ ನಸುಕಿನಲ್ಲಿ ಬಯಲು ಬಹಿರ್ದೆಸೆಯ ವಿರುದ್ಧ ಕಾರ್ಯಾಚರಣೆ ನಡೆಸಿತು. ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾಸ್ತವ್ಯವಿದ್ದ ಅಧಿಕಾರಿಗಳ ತಂಡ ಬೆಳಗಾದ ಕೂಡಲೇ ಬಯಲಲ್ಲಿ ಕೂರಲು ಅಣಿಯಾಗುತ್ತಿದ್ದ ಪುರುಷ ಮತ್ತು ಮಹಿಳೆಯರಿಗೆ ಗುಲಾಬಿ ಹೂ ಕೊಟ್ಟು ಸ್ವತ್ಛತೆಯ ಪಾಠ ಮಾಡಿದರು.
ಅಲ್ಲದೆ ಶೌಚಾಲಯವನ್ನು ಕಟ್ಟಿಕೊಂಡು ಬಳಕೆ ಮಾಡುವ ಮೂಲಕ ಆರೋಗ್ಯವಂತ ಬದುಕನ್ನು ನಡೆಸುವಂತೆ ಜಾಗೃತಿ ಮೂಡಿಸಲಾಯಿತು. ಕಾರ್ಯಚರಣೆಗೆ ಸರ್ಕಾರೇತರ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕೈ ಜೋಡಿಸಿದ್ದವು.
ಈ ನಡುವೆ, ಸ್ವತ್ಛ ಭಾರತ ಅಭಿಯಾನದಡಿ ವೈಯುಕ್ತಿಕ ಶೌಚಾಲಯ ನಿರ್ಮಾಣ ಮತ್ತು ಬಳಕೆ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಟಿ.ಎಚ್. ಮಂಜುನಾಥನ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಬಯಲು ಬಹಿರ್ದೆಸೆ ಯನ್ನು ನಿರ್ಬಂಧಿಸುವ ಸಂಕಲ್ಪ ಮಾಡುವುದರೊಂದಿಗೆ ಹಳ್ಳಿಗಾಡಿನ ಜನರು ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಲ ಮೂತ್ರ ವಿಸರ್ಜನೆಗೆ ಬಯಲು ಪ್ರದೇಶವನ್ನೇ ಶೌಚಾಲಯಕ್ಕಾಗಿ ಆಶ್ರಯಿಸು ವುದರಿಂದ ಪರಿಸರ ಕಲುಷಿತಗೊಂಡು ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶೌಚಾಲಯ ನಿರ್ಮಾಣಕ್ಕೆ ಗ್ರಾಪಂಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರ ಫಲಾನುಭವಿಗಳ ಖಾತೆಗೆ ನೇರವಾಗಿ ಅನುದಾನ ನೀಡುತ್ತಿದೆ. ಶೌಚಾಲಯರಹಿತ ಕುಟುಂಬಗಳು ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಶೌಚಾಲಯ ಕಟ್ಟಿಸಿಕೊಳ್ಳ ಬೇಕು.
ಈಗಾಗಲೇ ಶೌಚಾಲಯ ನಿರ್ಮಾಣ ಮಾಡಿಕೊಂಡಿರುವವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಹಣ ಬಿಡುಗಡೆಯಾಗಿಲ್ಲ. ಬಾಕಿಯಿರುವ ಹಣ ಬಿಡುಗಡೆಗೆ ಜಿಪಂ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಎಲ್ಲರೂ ಬಯಲು ಬಹಿರ್ದೆಸೆ ನಿರ್ಬಂಧಿಸುವ ಮೂಲಕ ಸ್ವತ್ಛ ಭಾರತ ಅಭಿಯಾನ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸಬೇಕೆಂದು ಕೋರಿದರು.
ತಾಪಂ ಸದಸ್ಯ ಕೆ.ಎಸ್.ಗಣೇಶ್ ಮಾತ ನಾಡಿ, ಹಬ್ಬಗಳು ಬಂತೆಂದರೆ ಸಾಲ ಮಾಡಿ ಯಾದರೂ ಬಾಡೂಟವನ್ನು ಸಿದ್ಧಪಡಿಸಿ, ಅತಿಥಿಗಳನ್ನು ಆಹ್ವಾನಿಸಿ ವ್ಯರ್ಥ ವಾಗಿ ಖರ್ಚು ಮಾಡುತ್ತೇವೆ. ಆದರೆ, ಸರ್ಕಾರ ಸಹಾಯ ಧನವನ್ನು ಕೊಡುತ್ತಿದ್ದರೂ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಮೀನಮೇಷ ಎಣಿಸುವುದು ಸರಿಯಲ್ಲ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಶೌಚಾಲಯಗಳನ್ನು ಬಳಕೆ ಮಾಡಬೇಕೆಂದು ಸಲಹೆೆ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಸಹಾಯಕ ಕಾರ್ಯದರ್ಶಿ ಮನೋಜ್ಕುಮಾರ್, ಸಂಯೋಜಕ ಮಹದೇವ್, ತಾಪಂ ಇಒ ಬಿ.ಎಸ್.ರಾಜು, ಸಿಡಿಪಿಒ ಬಿ.ಎನ್.ಬಸವರಾಜು, ಡಿ.ಎಸ್. ಪ್ರೇಮ್ಕುಮಾರ್, ಟಿಒಟಿ ನಾಗರಾಜು, ಗ್ರಾಪಂ ಅಧ್ಯಕ್ಷೆ ಪುಟ್ಟತಾಯಮ್ಮ, ಪಿಡಿಒ ಕೆ.ಎಂ.ರವೀಂದ್ರ, ಕಾವೇರಿಪುರ ಮಹೇಶ, ಮಾದೇಶ, ದೊಡ್ಡಮಾದನಾಯಕ, ಶಿಕ್ಷಕ ಸದಾನಂದ, ಪ್ರಸನ್ನ, ಯರಗನಹಳ್ಳಿ ರಂಗರಾಮು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.