ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ಧನ ವಿತರಣೆ
Team Udayavani, Oct 24, 2017, 12:53 PM IST
ಮೈಸೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತತ್ತರಿಸಿದ್ದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆಗಳ ನಿವಾಸಿಗಳಿಗೆ ಪರಿಹಾರದ ಚೆಕ್ ವಿತರಿಸಲಾಯಿತು. ನಗರದ ಕನಕಗಿರಿ ಸಮುದಾಯ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಕೆ.ಸೋಮಶೇಖರ್, ಮಳೆಯಿಂದ ಹಾನಿಗೊಳಗಾದ ಕನಕಗಿರಿ, ಶ್ರೀರಾಂಪುರ, ಗುಂಡೂರಾವ್‌ನಗರದ ನಿವಾಸಿಗಳಿಗೆ ಪರಿಹಾರದ ಚೆಕ್ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಭಾರೀ ಮಳೆಯಿಂದಾಗಿ ಸಾಕಷ್ಟು ಅನಾಹುತ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪರಿಶೀಲನೆ ನಡೆಸಿ ಮಳೆಯಿಂದ ಯಾವುದೇ ತೊಂದರೆ ಆಗದಂತೆ ಕಾಮಗಾರಿಗಳನ್ನು ನಡೆಸುವಂತೆ ಸೂಚಿಸಿದ್ದಾರೆ.
ಅಲ್ಲದೆ ಅಧಿಕಾರಿಗಳೊಂದಿಗೆ ತಾವೂ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ಹಲವು ಕಡೆಗಳಲ್ಲಿ ಒಳಚರಂಡಿ ದುರಸ್ತಿ ಕಾರ್ಯ ಮಾಡಬೇಕಿದ್ದು, ಶೀಘ್ರ ಕಾಮಗಾರಿ ನಡೆಸುವ ಮೂಲಕ ಮುಂದೆ ಇಂತಹ ಹಾನಿಯಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಲಾಗುವುದು ಎಂದರು.
ಮಳೆಯಿಂದಾಗಿ ಗೃಹಬಳಕೆ ವಸ್ತುಗಳು, ಪೀಠೊಪಕರಣ ಸೇರಿದಂತೆ ಬೆಲೆಬಾಳುವ ಪದಾರ್ಥಗಳನ್ನು ಕಳೆದುಕೊಂಡಿದ್ದು, ಈ ಸಂಬಂಧ ನೀಡಲಾಗಿರುವ ವರದಿಗೆ ಅನುಗುಣವಾಗಿ 119 ಮಂದಿಗೆ 3-4 ಸಾವಿರ ರೂ.ಗಳ ಚೆಕ್ ವಿತರಿಸಲಾಗಿದೆ.
ಉಳಿದವರಿಗೂ ಶೀಘ್ರವೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ತಹಶೀಲ್ದಾರ್ ರಮೇಶ್‌ಬಾಬು, ಕಂದಾಯ ನಿರೀಕ್ಷಕ ಗಣೇಶ್, ಕಾಂಗ್ರೆಸ್ ಮುಖಂಡರಾದ ಕೇಬಲ್ ಮಹದೇವ್, ಶೇಖರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.